ವಂಚನೆ ಕೇಸ್: ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ಶಾಕ್ ಕೊಟ್ಟ ಹೈಕೋರ್ಟ್
ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆದಾರ ಚಲುವರಾಜುಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾದ ಪ್ರಕರಣ ರದ್ದು ಮಾಡಲು ಹೈಕೋರ್ಟ್ ನಕಾರವೆತ್ತಿದೆ. ಆ ಮೂಲಕ ಶಾಸಕ ಮುನಿರತ್ನ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಬೆಂಗಳೂರು, ಮಾರ್ಚ್ 07: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ (MLA Munirathna) ವಿರುದ್ಧದ ಸುಲಿಗೆ, ವಂಚನೆ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರವೆತ್ತಿದೆ. ಆ ಮೂಲಕ ಮುನಿರತ್ನ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆದಾರ (Contractor) ಚಲುವರಾಜು ಸಲ್ಲಿಸಿದ್ದ ದೂರು ರದ್ದತಿಗೆ ಹೈಕೋರ್ಟ್ ನಿರಾಕರಿಸಿದೆ. ಶಾಸಕ ಮುನಿರತ್ನ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ಅರ್ಜಿ ವಜಾಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ.
ಏನಿದು ಮುನಿರತ್ನ ಪ್ರಕರಣ?
ಗುತ್ತಿಗೆದಾರ ಚಲುವರಾಜು ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದರು. ಜೊತೆಗೆ ರಕ್ಷಣಗೂ ಮನವಿ ಮಾಡಿದ್ದರು. ಜೀವ ಬೆದರಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಶಾಸಕ ಮುನಿರತ್ನ ಸೇರಿ ಎ2 ಮುನಿರತ್ನರ ಆಪ್ತ ಸಹಾಯಕ ವಿಜಯ್ ಕುಮರ್, ಎ3 ಸೆಕ್ಯೂರಿಟಿ ಅಭಿಷೇಕ್ ಮತ್ತು ಎ4 ವಸಂತ್ ಕುಮಾರ್.
ಇದನ್ನೂ ಓದಿ: ಗುತ್ತಿಗೆದಾರನಿಗೆ ಜೀವ ಬೆದರಿಕೆ: ಮುನಿರತ್ನ ವಿರುದ್ಧ ಎರಡು ಎಫ್ಐಆರ್
ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಜೀವ ಬೆದರಿಕೆ ಹಾಕಿರುವ ಕೇಸ್ನಲ್ಲಿ ಶಾಸಕ ಮುನಿರತ್ನರನ್ನ ಬಂಧಿಸಲಾಗಿತ್ತು. ಮುನಿರತ್ನ ನನ್ನನ್ನ ಅವಾಚ್ಯವಾಗಿ ನಿಂದಿಸಿ, ಜಾತಿ ನಿಂದನೆ ಜೊತೆಗೆ ಜೀವ ಬೆದರಿಕೆ ಹಾಕಿದ್ದಾರೆಂದು ಗುತ್ತಿಗೆದಾರ ಆರೋಪ ಕೂಡ ಮಾಡಿದ್ದರು.
ಅಷ್ಟೇ ಅಲ್ಲದೇ ವೈಯ್ಯಾಲಿ ಕಾವಲ್ ಪೊಲೀಸ್ ಸ್ಟೇಷನ್ನಲ್ಲಿ ಚಲುವರಾಜು ದೂರು ನೀಡಿದ್ದರು. 2 ಎಫ್ಐಆರ್ ದಾಖಲಾಗ್ತಿದ್ದಂತೆ ಅಲರ್ಟ್ ಆಗಿದ್ದ ಪೊಲೀಸರು, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಶಾಸಕ ಮುನಿರತ್ನರನ್ನ ಅರೆಸ್ಟ್ ಮಾಡಿದ್ದರು.
ಇದನ್ನೂ ಓದಿ: ರಾಜೀನಾಮೆ ಕೊಟ್ಟರೆ ಜೀವ ಉಳಿಯುತ್ತೆ: ಮುನಿರತ್ನ ದೂರಿನಲ್ಲಿ ದಾಖಲಾದ ಸ್ಫೋಟಕ ಸಂಗತಿಗಳ ವಿವರ ಇಲ್ಲಿದೆ
ಬಿಜೆಪಿ ಶಾಸಕ ಮುನಿರತ್ನಗೆ ಸಾಲು ಸಾಲು ಕೇಸ್ಗಳೇ ಇದೀಗ ಸಂಕಷ್ಟ ತಂದೊಡ್ಡಿತ್ತು. ಜಾತಿ ನಿಂದನೆ, ಜೀವ ಬೆದರಿಕೆ ಕೇಸ್ನಲ್ಲಿ ಜೈಲುಪಾಲಾಗಿದ್ದ ಮುನಿರತ್ನಗೆ ಜಾಮೀನು ಸಿಕ್ಕಿತ್ತು. ಇನ್ನೇನು ಪರಪ್ಪನ ಅಗ್ರಹಾರ ಜೈಲಿನಿಂದ ಮೈ ಮುರಿದು ಹೊರಗೆ ಬರಬೇಕು ಅನ್ನೋವಷ್ಟರಲ್ಲೇ ಪೊಲೀಸರು ಮತ್ತೆ ಅರೆಸ್ಟ್ ಮಾಡಿದ್ದರು. ಅತ್ಯಾಚಾರ ಪ್ರಕರಣ ಮುನಿರತ್ನಗೆ ಸಂಕಷ್ಟ ತಂದಿತ್ತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.