AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್​: ರಾಜೀವ್​​ ಗೌಡಗೆ ಶಾಕ್​​ ಕೊಟ್ಟ ಹೈಕೋರ್ಟ್​​

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಜೀವ್ ಗೌಡರಿಗೆ ಸಂಕಷ್ಟ ಎದುರಾಗಿದೆ. ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮತ್ತೊಂದೆಡೆ ಚಿಕ್ಕಬಳ್ಳಾಪುರ ಜಿಲ್ಲಾ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಆರೋಪಿ ಸಲ್ಲಿಸಿರುವ ಅರ್ಜಿಗೆ ಸರ್ಕಾರಿ ಅಭಿಯೋಜಕರು ತಕರಾರು ಸಲ್ಲಿಕೆ ಮಾಡಿದ್ದಾರೆ.

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್​: ರಾಜೀವ್​​ ಗೌಡಗೆ ಶಾಕ್​​ ಕೊಟ್ಟ ಹೈಕೋರ್ಟ್​​
ರಾಜೀವ್​​ ಗೌಡ ಸಲ್ಲಿಸಿದ್ದ ಅರ್ಜಿ ವಜಾ
Ramesha M
| Edited By: |

Updated on: Jan 22, 2026 | 3:13 PM

Share

ಬೆಂಗಳೂರು, ಜನವರಿ 22: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ ಸಂಬಂಧ ಎಫ್​​ಐಆರ್​ ರದ್ದು ಕೋರಿ ಕಾಂಗ್ರೆಸ್​​ ಮುಖಂಡ ರಾಜೀವ್​ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​​ ವಜಾಗೊಳಿಸಿದೆ. ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಬಗ್ಗೆ ಮಹತ್ವದ ಆದೇಶ ನೀಡಿದ್ದು, ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಕಾಂಗ್ರೆಸ್​​ ಮುಖಂಡನ ಪರವಾಗಿ ಹಿರಿಯ ವಕೀಲ ವಿವೇಕ್ ರೆಡ್ಡಿ ವಾದ ಮಂಡಿಸಿದ್ದರು.

ತರಾಟೆಗೆ ಪಡೆದಿದ್ದ ಕೋರ್ಟ್​​

ಫೋನ್ ಮೂಲಕ ಆಡಿದ ಮಾತಿಗೆ ಮಾಧ್ಯಮದಲ್ಲೇ ರಾಜೀವ್​​ ಗೌಡ ಕ್ಷಮೆ ಕೇಳಿದ್ದಾರೆ. ಬಿಎನ್‌ಎಸ್‌ ಸೆಕ್ಷನ್ 132 ಈ ಕೇಸಿನಲ್ಲಿ ಅನ್ವಯಿಸುವುದಿಲ್ಲ. ಸಾರ್ವಜನಿಕವಾಗಿ ಕ್ಷಮೆ ಕೇಳಲು ರಾಜೀವ್ ಗೌಡ ಸಿದ್ಧರಿದ್ದಾರೆ. ತನಿಖೆಗೆ ಸಹಕರಿಸಲು ಸಿದ್ಧರಿರುವ ಕಾರಣ ರಕ್ಷಣೆಗೆ ಮನವಿ ಮಾಡಲಾಗಿದೆ ಎಂದು ವಕೀಲರು ವಾದಿಸಿದ್ದರು. ಆದ್ರೆ ಈ ವೇಳೆ ಗರಂ ಆಗಿದ್ದ ನ್ಯಾಯಾಲಯ, ಅರ್ಜಿದಾರನಿಗೆ ಮಹಿಳೆಯರೆಂದರೆ ಗೌರವ ಇಲ್ಲವೇ ಎಂದು ಪ್ರಶ್ನೆ ಮಾಡಿತ್ತು. ಅಲ್ಲದೆ, ಒಮ್ಮೆ ಮಾತನಾಡಿದರೆ ವಾಪಸ್ ಪಡೆಯಲು ಆಗುವುದಿಲ್ಲ. ನಿಯಂತ್ರಣವಿಲ್ಲದ ನಾಲಿಗೆಯೇ ಎಲ್ಲವನ್ನೂ ಹಾಳುಮಾಡಬಲ್ಲದು. ನೀವು ಕ್ಷಮೆ ಕೇಳಿದರೂ ಒಡೆದಿರುವುದು ಒಂದಾಗುವುದಿಲ್ಲ ಎಂದು ತರಾಟೆಗೆ ತೆಗೆದುಕೊಂಡಿತ್ತು. ಬಳಿಕ ಅರ್ಜಿ ವಿಚಾರಣೆ ಸಂಬಂಧ ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು.

ಇದನ್ನೂ ಓದಿ: ರಾಜೀವ್​​ ಗೌಡ ಪರ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪತ್ರ; ಆ್ಯಸಿಡ್​​ ಎರಚುವುದಾಗಿ ಎಚ್ಚರಿಕೆ

ನಿರೀಕ್ಷಣಾ ಜಾಮೀನು ಅರ್ಜಿಗೆ ತಕಾರರು ಸಲ್ಲಿಕೆ

ಮತ್ತೊಂದೆಡೆ ಚಿಕ್ಕಬಳ್ಳಾಪುರ ಜಿಲ್ಲಾ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಆರೋಪಿ ರಾಜೀವ್ ಗೌಡ ಸಲ್ಲಿಸಿರುವ ಅರ್ಜಿಗೆ ಸರ್ಕಾರಿ ಅಭಿಯೋಜಕರು ತಕರಾರು ಸಲ್ಲಿಕೆ ಮಾಡಿದ್ದಾರೆ. ಕಳೆದ ಶನಿವಾರ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿತ್ತು. ರಾಜೀವ್ ಗೌಡ ಪರ ವಕೀಲ ಶಿವಶಂಕರರೆಡ್ಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದ್ದ ಕೋರ್ಟ್‌, ವಿಚಾರಣೆಯನ್ನ ಇಂದಿಗೆ ಮುಂದೂಡಿತ್ತು. ಇಂದು ತಕರಾರು ಸಲ್ಲಿಕೆ ಹಿನ್ನೆಲೆ ರಾಜೀವ್ ಗೌಡ ನಿರೀಕ್ಷಣಾ ಜಾಮೀನು ಅರ್ಜಿ ಭವಿಷ್ಯ ಸಂಜೆ ನಿರ್ಧಾರ ಆಗಲಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ನರೇಗಾ ಹೆಸರು ಬದಲಾವಣೆ ವಿವಾದ, ರಾಜ್ಯಪಾಲರ ಭಾಷಣ
ನರೇಗಾ ಹೆಸರು ಬದಲಾವಣೆ ವಿವಾದ, ರಾಜ್ಯಪಾಲರ ಭಾಷಣ
ರೋಡ್​​ಶೋ ವೇಳೆ ಮೀನು  ಹಿಡಿದು ಕುಣಿದ ಪಟಾಕಿ ರಕ್ಷಿತಾ
ರೋಡ್​​ಶೋ ವೇಳೆ ಮೀನು  ಹಿಡಿದು ಕುಣಿದ ಪಟಾಕಿ ರಕ್ಷಿತಾ
ಕೊನೆಯ ಓವರ್​ನಲ್ಲಿ 3 ಸಿಕ್ಸ್​ ಸಿಡಿಸಿ 3 ರನ್​ಗಳಿಂದ ಗೆದ್ದ ಹೋಬಾರ್ಟ್​ ಪಡೆ
ಕೊನೆಯ ಓವರ್​ನಲ್ಲಿ 3 ಸಿಕ್ಸ್​ ಸಿಡಿಸಿ 3 ರನ್​ಗಳಿಂದ ಗೆದ್ದ ಹೋಬಾರ್ಟ್​ ಪಡೆ
ಬೀದಿಯಲ್ಲಿ ವ್ಯಕ್ತಿಯ ಬೆನ್ನಟ್ಟಿ ಚಾಕುವಿನಿಂದ ಇರಿದು ಪುರುಷರ ಗುಂಪು
ಬೀದಿಯಲ್ಲಿ ವ್ಯಕ್ತಿಯ ಬೆನ್ನಟ್ಟಿ ಚಾಕುವಿನಿಂದ ಇರಿದು ಪುರುಷರ ಗುಂಪು
ಮಾಲೀಕರ ಅಂತ್ಯಕ್ರಿಯೆಗೂ ಟ್ರ್ಯಾಕ್ಟರ್ ಹತ್ತಿ ಬಂದ ನಾಯಿ
ಮಾಲೀಕರ ಅಂತ್ಯಕ್ರಿಯೆಗೂ ಟ್ರ್ಯಾಕ್ಟರ್ ಹತ್ತಿ ಬಂದ ನಾಯಿ
2 ಓವರ್​ಗಳ ಮೂಲಕ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಅಫ್ಘಾನ್ ಸ್ಪಿನ್ನರ್
2 ಓವರ್​ಗಳ ಮೂಲಕ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಅಫ್ಘಾನ್ ಸ್ಪಿನ್ನರ್