Retaired Justice KL Manjunath: ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ K.L.ಮಂಜುನಾಥ್ ವಿಧಿವಶ

Retaired Justice KL Manjunath: ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ K.L.ಮಂಜುನಾಥ್ ವಿಧಿವಶ
ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ K.L.ಮಂಜುನಾಥ್

ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ K.L.ಮಂಜುನಾಥ್ ತಡರಾತ್ರಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

TV9kannada Web Team

| Edited By: Ayesha Banu

Jan 23, 2022 | 10:34 AM

ಬೆಂಗಳೂರು: ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ K.L.ಮಂಜುನಾಥ್ ತಡರಾತ್ರಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ನಿವಾಸದಲ್ಲಿ ಮಧ್ಯಾಹ್ನ 12 ಗಂಟೆವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಧ್ಯಾಹ್ನ 3 ಗಂಟೆಗೆ ನೆಲಮಂಗಲದ ತೋಟದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.

ನಿವೃತ್ತ ನ್ಯಾ.ಮಂಜುನಾಥ್, ಗಡಿ ಸಂರಕ್ಷಣಾ ಆಯೋಗದ ಅಧ್ಯಕ್ಷರಾಗಿದ್ರು. ಇವರು 1974ರಲ್ಲಿ ವಕೀಲರಾಗಿ ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಆಭ್ಯಾಸ ಮಾಡಿದ್ದರು. ಬಳಿಕ 2000 ಇಸವಿಯಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡರು. 2001ರಲ್ಲಿ ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು. ತಡರಾತ್ರಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ರಾಜ್ಯ ಗಡಿ ಆಯೋಗದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಸಂಬಂಧ ಸಲಹೆ ನೀಡುವ ಸಲುವಾಗಿ ಸರ್ಕಾರ ಈ ಆಯೋಗವನ್ನು ರಚನೆಮಾಡಿತ್ತು. ಆಯೋಗದ ಹಿಂದಿನ ಅಧ್ಯಕ್ಷ ಎಸ್‌. ರಾಜೇಂದ್ರ ಬಾಬು 2017ರ ನವೆಂಬರ್‌ನಲ್ಲಿ ರಾಜೀನಾಮೆ ಸಲ್ಲಿಸಿದ್ದರು. ಆ ಸ್ಥಾನಕ್ಕೆ ಮಂಜುನಾಥ್ ಅವರನ್ನು ನೇಮಕ ಮಾಡಿತ್ತು.

ನ್ಯಾಯಮೂರ್ತಿ ಕೆ ಎಲ್. ಮಂಜುನಾಥ್ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಹೈಕೋರ್ಟಿನ ನಿವೃತ್ತ ನ್ಯಾಯಾಧೀಶರಾಗಿದ್ದ ಮಂಜುನಾಥ್ ಅವರು ಅತ್ಯುತ್ತಮ ವಕೀಲರಾಗಿ, ವಕೀಲರ ಸಂಘದ ಅಧ್ಯಕ್ಷರಾಗಿ, ಹೈ ಕೋರ್ಟ್ ನ್ಯಾಯಾಧೀಶರಾಗಿ, ಕರ್ನಾಟಕ ನದಿ ನೀರು ಮತ್ತು ಗಡಿ ವಿವಾದ ಪ್ರಾಧಿಕಾರದ ಅಧ್ಯಕ್ಷರಾಗಿ, ಆಂಧ್ರ ಪ್ರದೇಶದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಅವಿಸ್ಮರಣೀಯ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬದವರು ಹಾಗೂ ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ದೇವಸ್ಥಾನದ ಪೂಜೆ ಮತ್ತು ಹಣಕಾಸಿನ ವಿಚಾರಕ್ಕೆ ಹಲ್ಲೆ; ರಂಗವ್ವನಹಳ್ಳಿಯ ದುರ್ಗಾಂಬಿಕಾ ದೇಗುಲದ ಪೂಜಾರಿ ಸಾವು

Follow us on

Related Stories

Most Read Stories

Click on your DTH Provider to Add TV9 Kannada