ಗುತ್ತಿಗೆದಾರರ ಬಿಲ್ ಬಾಕಿ ಇರಿಸಿದ ಬಿಬಿಎಂಪಿಗೆ ಹೈಕೋರ್ಟ್ ತರಾಟೆ, ಶೀಘ್ರ ಬಿಲ್ ಪವಾತಿಗೆ ಸೂಚನೆ

| Updated By: Rakesh Nayak Manchi

Updated on: Nov 29, 2023 | 9:49 PM

ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಗೆ ಸೂಚನೆ ನೀಡಿದ್ದರೂ ಕ್ರಮ ಕೈಗೊಳ್ಳದ ಬಿಬಿಎಂಪಿ ಅಧಿಕಾರಿಗಳನ್ನು ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಹೈಕೋರ್ಟ್ ಆದೇಶವಿದ್ದರೂ ಕಾಮಗಾರಿ ಬಿಲ್ ಪಾವತಿಸದ ಹಿನ್ನೆಲೆ ಮೆ. ನಿಕ್ಷೇಪ್ ಇನ್ಫ್ರಾ ಪ್ರಾಜೆಕ್ಟ್ ನ್ಯಾಯಾಂಗ ನಿಂದನೆ ದಾಖಲಿಸಿತ್ತು.

ಗುತ್ತಿಗೆದಾರರ ಬಿಲ್ ಬಾಕಿ ಇರಿಸಿದ ಬಿಬಿಎಂಪಿಗೆ ಹೈಕೋರ್ಟ್ ತರಾಟೆ, ಶೀಘ್ರ ಬಿಲ್ ಪವಾತಿಗೆ ಸೂಚನೆ
ಗುತ್ತಿಗೆದಾರರ ಬಿಲ್ ಬಾಕಿ ಇರಿಸಿದ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್
Follow us on

ಬೆಂಗಳೂರು, ನ.29: ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಗೆ ಸೂಚನೆ ನೀಡಿದ್ದರೂ ಕ್ರಮ ಕೈಗೊಳ್ಳದ ಬಿಬಿಎಂಪಿ (BBMP) ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕರ್ನಾಟಕ ಹೈಕೋರ್ಟ್ (Karnataka High Court), ಶೀಘ್ರ ಬಿಲ್ ಪಾವತಿಗೆ ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ.

ಹೈಕೋರ್ಟ್ ಆದೇಶವಿದ್ದರೂ ಕಾಮಗಾರಿ ಬಿಲ್ ಪಾವತಿಸದ ಹಿನ್ನೆಲೆ ಮೆ. ನಿಕ್ಷೇಪ್ ಇನ್ಫ್ರಾ ಪ್ರಾಜೆಕ್ಟ್ ನ್ಯಾಯಾಂಗ ನಿಂದನೆ ದಾಖಲಿಸಿತ್ತು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸಿಜೆ ಪ್ರಸನ್ನ ಬಿ ವರಾಳೆ ಮತ್ತು ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ದ್ವಿಸದಸ್ಯ ಪೀಠ, ಗುತ್ತಿಗೆದಾರರಿಗೆ ಬಿಲ್ ಪಾವತಿಸದ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿತು.

ಇದನ್ನೂ ಓದಿ: ಡಿಕೆ ಶಿವಕುಮಾರ್​ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್, ಮೇಲ್ಮನವಿ ವಾಪಸ್​ಗೆ ಅನುಮತಿ

ಈವರೆಗೆ ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಲ್‌ ಪಾವತಿಯಾಗದೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನಿಮ್ಮ ದಾಖಲೆಗಳೇ ಹೇಳುತ್ತಿವೆ. ಕಾಮಗಾರಿ ಪೂರ್ಣಗೊಳಿಸಿದ್ದರೂ ಬಿಲ್‌ ಪಾವತಿಗೆ ತಡವೇಕೆ? ಯಾವುದೇ ಕಲ್ಯಾಣ ರಾಜ್ಯಗಳಲ್ಲಿ ಇಂತಹ ಸ್ಥಿತಿ ಇರಲಾರದು. ಕಾಮಗಾರಿ ಪೂರ್ಣಗೊಳಿಸಿ ಹಣಕ್ಕಾಗಿ ಬಿಬಿಎಂಪಿ ಅಲೆಯಬೇಕೇ ಎಂದು ಪೀಠ ಅಸಮಾಧಾನ ಹೊರಹಾಕಿದೆ.

ಸೀನಿಯಾರಿಟಿ ಆಧಾರದಲ್ಲಿ ಬಿಲ್ ಪಾವತಿಸುವುದಾಗಿ ಬಿಬಿಎಂಪಿ‌ ಹೇಳಿಕೆಗೂ ತರಾಟೆಗೆ ತೆಗೆದುಕೊಂಡ ಪೀಠ, ಬಿಬಿಎಂಪಿ ಬಳಿ ಹಣವಿಲ್ಲವೇ? ಸೀನಿಯಾರಿಟಿಗೆ ಏಕೆ ಕಾಯಬೇಕು? ಮೊದಲು ಬಿಬಿಎಂಪಿಯ ಕಚೇರಿಯನ್ನು ಸ್ವಚ್ಚವಾಗಿಟ್ಟುಕೊಳ್ಳಿ. ಶೀಘ್ರವಾಗಿ ಗುತ್ತಿಗೆದಾರರ ಬಿಲ್ ಪಾವತಿಗೆ ಕ್ರಮ ಕೈಗೊಳ್ಳಲು ಬಿಬಿಎಂಪಿಗೆ ಸೂಚನೆ ನೀಡಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ