AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಬಂಟಿಂಗ್​​ ಅಳವಡಿಕೆ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್​

ಬೆಂಗಳೂರಿನಲ್ಲಿ ಅನಧಿಕೃತವಾಗಿ ಹಾಕಲಾಗುತ್ತಿರುವ ಫ್ಲೆಕ್ಸ್, ಬ್ಯಾನರ್, ಬಂಟಿಂಗ್​​ಗಳ ತಡೆಗೆ ಬಿಬಿಎಂಪಿ ಕ್ರಮ ಕೈಗೊಳ್ಳದ ಹಿನ್ನೆಲೆ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಬೆಂಗಳೂರಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಬಂಟಿಂಗ್​​ ಅಳವಡಿಕೆ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್​
ಹೈಕೋರ್ಟ್​
Ramesha M
| Updated By: ವಿವೇಕ ಬಿರಾದಾರ|

Updated on:Aug 02, 2023 | 2:41 PM

Share

ಬೆಂಗಳೂರು: ನಗರದಲ್ಲಿ ಅನಧಿಕೃತವಾಗಿ ಹಾಕಲಾಗುತ್ತಿರುವ ಫ್ಲೆಕ್ಸ್ (Flex), ಬ್ಯಾನರ್ (Banner), ಬಂಟಿಂಗ್​​ಗಳ ತಡೆಗೆ ಬಿಬಿಎಂಪಿ (BBMP) ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಹೈಕೋರ್ಟ್ (High Court) ರಾಜ್ಯ ಸರ್ಕಾರವನ್ನು (Karnataka Government) ತರಾಟೆಗೆ ತೆಗೆದುಕೊಂಡಿದೆ. ಅನಧಿಕೃತ ಜಾಹಿರಾತು ಹಾವಳಿ ತಡೆಯಲು ಪಂಚವಾರ್ಷಿಕ ಯೋಜನೆ ಬೇಕೆ? ಫ್ಲೆಕ್ಸ್ ತೆರವಿಗೆ ಶುಭ ಮುಹೂರ್ತಕ್ಕಾಗಿ ಕಾಯುತ್ತಿದ್ದೀರಾ? ಚುನಾವಣೆ ವೇಳೆ 60 ಸಾವಿರ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸಲಾಗಿದೆ. ಆದರೆ ಕೇವಲ 134 ದೂರು ಪರಿಗಣಿಸಿ 40 ಎಫ್‌ಐಆರ್ ದಾಖಲಿಸಲಾಗಿದೆ. ಫ್ಲೆಕ್ಸ್ ಅಳವಡಿಸಿದ ರಾಜಕೀಯ ಪಕ್ಷಗಳ ಪದಾಧಿಕಾರಿಗಳ ಮೇಲೆ ಕ್ರಮವೇಕಿಲ್ಲ ಎಂದು ಪ್ರಶ್ನಿಸಿದೆ.

ಬೆಂಗಳೂರು ಸುಂದರವಾಗಿರುವುದು ಸರ್ಕಾರಕ್ಕೆ ಬೇಕಿಲ್ಲವೆ? ನಗರದ ತುಂಬೆಲ್ಲಾ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ ಇರಬೇಕೆಂದು ಸರ್ಕಾರದ ಅಪೇಕ್ಷೆಯೇ? ಬ್ರ್ಯಾಂಡ್ ಬೆಂಗಳೂರಿಗೆ ಫ್ಲೆಕ್ಸ್, ಬ್ಯಾನರ್​​ಗಳಿಂದ ಕಳಂಕ ಅಂಟುತ್ತಿದೆ. ವಿಮಾನ ನಿಲ್ದಾಣದಿಂದ ಬೆಂಗಳೂರಿನ ಪ್ರಯಾಣ ಆರಂಭಿಸಿದರೆ ನಗರದ ತುಂಬೆಲ್ಲಾ ಫ್ಲೆಕ್ಸ್, ಬ್ಯಾನರ್​ಗಳು ರಾರಾಜಿಸುತ್ತವೆ. ಬೆಂಗಳೂರಿನ ಬಗ್ಗೆ ಹೂಡಿಕೆದಾರರಿಗೆ ಎಂತಹ ಚಿತ್ರಣ ನೀಡುತ್ತಿದ್ದೀರಿ. ಬೆಂಗಳೂರಿನ ಸ್ಥಿತಿ ಸುಧಾರಿಸದಿದ್ದರೆ ಹೂಡಿಕೆ ಹೇಗೆ ತರುತ್ತೀರಿ. ಬೆಂಗಳೂರನ್ನು ಅದರ ಅದೃಷ್ಟಕ್ಕೇ ಬಿಡಲಾಗಿದೆ. ಇದು ಅಚ್ಚರಿ, ಆಘಾತಕಾರಿ ಹಾಗೂ ಆತ್ಮಸಾಕ್ಷಿ ಕಲಕುವಂಥಹದ್ದಾಗಿದೆ. ಬಿಬಿಎಂಪಿ ಅಸಹಾಯಕತೆಯಿಂದ ಕೈ ಎತ್ತಿದೆ. ನೀವೇನು ಮಾಡುತ್ತಿದ್ದೀರಿ ಎಂದು ರಾಜ್ಯ ಸರ್ಕಾರವನ್ನು ಹೈಕೋರ್ಟ್​​ ತರಾಟೆಗೆ ತೆಗೆದುಕೊಂಡಿದೆ.

ಇದನ್ನೂ ಓದಿ: ಬೆಂಗಳೂರು ಹೋಟೆಲ್ ಗ್ರಾಹಕರಿಗೆ ಬೆಲೆ ಏರಿಕೆ ಶಾಕ್; ಯಾವ ತಿಂಡಿಗೆ ಎಷ್ಟು ದರ? ಇಲ್ಲಿದೆ ಪರಿಷ್ಕೃತ ಪಟ್ಟಿ

ಇನ್ಮುಂದೆ ಒಂದೇ ಒಂದು ಅನಧಿಕೃತ ಫ್ಲೆಕ್ಸ್ ಕಂಡರೂ ತಲಾ 50 ಸಾವಿರ ದಂಡ ವಿಧಿಸಿ. ಬಿಬಿಎಂಪಿ, ರಾಜ್ಯ ಸರ್ಕಾರ ತಲಾ 50 ಸಾವಿರ ಠೇವಣಿ ಇಡಬೇಕು. ಅನಧಿಕೃತ ಜಾಹಿರಾತು ಫಲಕ ಅಳವಡಿಸಲು ಅವಕಾಶ ನೀಡುವ ಕಟ್ಟಡಗಳ ಮಾಲೀಕರಿಗೂ ನೋಟಿಸ್ ನೀಡಬೇಕು. ಫ್ಲೆಕ್ಸ್ ಮೂಲಕ ಶುಭಾಶಯ ಕೋರುವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ ವಹಿಸಿದ ಅಧಿಕಾರಿಗಳ ವಿರುದ್ಧವೂ ಮೇಲಧಿಕಾರಿಗಳು ಇಲಾಖಾ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಬೇಕು. ಬೆಂಗಳೂರಿನ ಆಡಳಿತದ ಹೊಣೆ ಹೊತ್ತವರು ಈ ಬಗ್ಗೆ ಗಮನಹರಿಸಬೇಕು. ಮತ್ತು ಮೂರು ವಾರಗಳಲ್ಲಿ ಕ್ರಮ ಕೈಗೊಂಡ ವರದಿ ಸಲ್ಲಿಕೆ ಮಾಡಬೇಕೆಂದು ಹೈಕೋರ್ಟ್​ ತಾಕೀತು ಮಾಡಿದೆ.

ಮಾಯಿಗೇ ಗೌಡ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ವಿಚಾರಣೆ ನಡೆಸಿದ ಸಿಜೆ ಪ್ರಸನ್ನ ಬಿ. ವರಾಳೆ ಹಾಗೂ ನ್ಯಾ. ಎಂ.ಜಿ.ಎಸ್. ಕಮಲ್​ ಅವರು ಇದ್ದ ಪೀಠ ಈ ಆದೇಶ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:00 pm, Wed, 2 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ