AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆ: ಸರ್ಕಾರಕ್ಕೆ ಹೈಕೋರ್ಟ್ ತರಾಟೆ, 8 ವಾರಗಳಲ್ಲಿ ಸರಿಪಡಿಸುವಂತೆ ಡೆಡ್​​ಲೈನ್

CJ ಪ್ರಸನ್ನ B.ವರಾಳೆ, ನ್ಯಾ.ಕೃಷ್ಣ S.ದೀಕ್ಷಿತ್ ಅವರಿದ್ದ ಪೀಠ ಸರ್ಕಾರಕ್ಕೆ ಹಿಗ್ಗಾಮುಗ್ಗ ಜಾಡಿಸಿದೆ. ಮೂಲಭೂತ ಸೌಕರ್ಯ ಕೊರತೆಯಿಂದ ಸರ್ಕಾರಿ ಶಾಲೆ ಮುಚ್ಚುತ್ತಿವೆ. ಅನಿವಾರ್ಯವಾಗಿ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುವಂತಾಗಿದೆ. ಸರ್ಕಾರಿ ಶಾಲೆಗಳ ಬದಲು ಖಾಸಗಿ ಶಾಲೆ ಪ್ರೋತ್ಸಾಹಿಸುತ್ತಿದ್ದೀರಾ? ಮೂಲಸೌಕರ್ಯ ಒದಗಿಸಿದ ಬಗ್ಗೆ 8 ವಾರಗಳಲ್ಲಿ ವರದಿ ಸಲ್ಲಿಸಲು ಸರ್ಕಾರಕ್ಕೆ ಹೈ ಕೋರ್ಟ್ ಸೂಚನೆ ನೀಡಿದೆ.

ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆ: ಸರ್ಕಾರಕ್ಕೆ ಹೈಕೋರ್ಟ್ ತರಾಟೆ, 8 ವಾರಗಳಲ್ಲಿ ಸರಿಪಡಿಸುವಂತೆ ಡೆಡ್​​ಲೈನ್
ಕರ್ನಾಟಕ ಹೈಕೋರ್ಟ್
Ramesha M
| Edited By: |

Updated on: Oct 09, 2023 | 2:26 PM

Share

ಬೆಂಗಳೂರು, ಅ.09: ಸರ್ಕಾರಿ ಶಾಲೆಗಳಲ್ಲಿ (Government Schools) ಮೂಲಭೂತ ಸೌಕರ್ಯ ಕೊರತೆ ವಿಚಾರಕ್ಕೆ ಸಂಬಂಧಿಸಿ ಮೂಲಸೌಕರ್ಯ ಕಲ್ಪಿಸದ ಸರ್ಕಾರಕ್ಕೆ ಹೈಕೋರ್ಟ್ (High Court) ತರಾಟೆಗೆ ತೆಗೆದುಕೊಂಡಿದೆ. ಸರ್ಕಾರಕ್ಕೆ ಶಾಲೆಗಳ್ಲಲಿ ಮೂಲಭೂತ ಸೌಕರ್ಯ ಕೊರತೆ ಇರುವುದು ತಿಳಿದಿಲ್ಲವೇ. ಮೂಲಭೂತ ಸೌಕರ್ಯ ಒದಗಿಸಲೂ 5 ವರ್ಷಗಳ ಯೋಜನೆ ಬೇಕೇ? 464 ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳಿಲ್ಲ. 32 ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಬಡ ಮಕ್ಕಳಿಗೆ ಶಿಕ್ಷಣ ಪಡೆಯುವ ಅಧಿಕಾರವಿಲ್ಲವೇ? ಶ್ರೀಮಂತರ ಮಕ್ಕಳು ಮಾತ್ರ ಶಿಕ್ಷಣ ಪಡೆಯಬೇಕೇ ಎಂದು ಹೈಕೋರ್ಟ್ ಸರ್ಕಾರಕ್ಕೆ (Karnataka Government) ತರಾಟಗೆ ತೆಗೆದುಕೊಂಡಿದೆ.

CJ ಪ್ರಸನ್ನ B.ವರಾಳೆ, ನ್ಯಾ.ಕೃಷ್ಣ S.ದೀಕ್ಷಿತ್ ಅವರಿದ್ದ ಪೀಠ ಸರ್ಕಾರಕ್ಕೆ ಹಿಗ್ಗಾಮುಗ್ಗ ಜಾಡಿಸಿದೆ. ಮೂಲಭೂತ ಸೌಕರ್ಯ ಕೊರತೆಯಿಂದ ಸರ್ಕಾರಿ ಶಾಲೆ ಮುಚ್ಚುತ್ತಿವೆ. ಅನಿವಾರ್ಯವಾಗಿ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುವಂತಾಗಿದೆ. ಸರ್ಕಾರಿ ಶಾಲೆಗಳ ಬದಲು ಖಾಸಗಿ ಶಾಲೆ ಪ್ರೋತ್ಸಾಹಿಸುತ್ತಿದ್ದೀರಾ? ಹಣವಿಲ್ಲದ ಬಡ ಜನರು ಮಕ್ಕಳಿಗೆ ಶಿಕ್ಷಣ ನೀಡುವುದು ಹೇಗೆ? ಸಮಾನತೆ ಬರುವುದೇ ಶಿಕ್ಷಣದಿಂದ. ಅಂಬೇಡ್ಕರ್ ಶಿಕ್ಷಣಕ್ಕೆ ಮಹತ್ವ ನೀಡಿದ್ದರು. ಸಂವಿಧಾನದಡಿ ಪ್ರಾಥಮಿಕ ಶಿಕ್ಷಣ ಮೂಲಭೂತ ಹಕ್ಕು ಎಂದು ತರಾಟೆಗೆ ತೆಗೆದುಕೊಂಡಿದ್ದು ಮೂಲಸೌಕರ್ಯ ಒದಗಿಸಿದ ಬಗ್ಗೆ 8 ವಾರಗಳಲ್ಲಿ ವರದಿ ಸಲ್ಲಿಸಲು ಸರ್ಕಾರಕ್ಕೆ ಹೈ ಕೋರ್ಟ್ ಸೂಚನೆ ನೀಡಿದೆ.

ಇದನ್ನೂ ಓದಿ: ಮಡಿಕೇರಿ: ಗಿರಿಜನ ಆಶ್ರಮ ಶಾಲೆಗೆ ಸರ್ಕಾರದಿಂದ ಪೂರೈಕೆಯಾದ ಆಹಾರ ಧಾನ್ಯಗಳಲ್ಲಿ ರಾಶಿ ರಾಶಿ ಹುಳು ಪತ್ತೆ

ರಾಜ್ಯದ ಅನೇಕ ಶಾಲೆಗಳು ಮೂಲಭೂತ ಸೌಕರ್ಯ ಕೊರತೆಯನ್ನು ಎದುರಿಸುತ್ತಿವೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಮಕ್ಕಳು ಪರದಾಡುವಂತ ಸ್ಥಿತಿ ಇರುವ ಬಗ್ಗೆ ವರದಿಯಾಗಿತ್ತು. ಇಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರಿಲ್ಲದೆ ಪ್ರತಿನಿತ್ಯ ವಿದ್ಯಾರ್ಥಿಗಳು ಪರದಾಡುವಂತಹ ಪರಿಸ್ಥಿತಿ ಇದೆ. ಕಲಘಟಗಿ ಪಟ್ಟಣದಲ್ಲಿರುವ ಸರ್ಕಾರಿ ಮಾದರಿ ಶಾಲೆ, ಸರ್ಕಾರಿ ಪ್ರೌಢಶಾಲೆ, ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕುಡಿಯಲು ನೀರಿಲ್ಲದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ