Murugha Shree: ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆ

ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀಗಳ ಬಿಡುಗಡೆ ಮಾಡಲಾಗಿದೆ. ಮುರುಘಾಶ್ರೀ ಬಿಡುಗಡೆಗೆ ಹೈಕೋರ್ಟ್‌ನ ನ್ಯಾ.ಸೂರಜ್ ಗೋವಿಂದರಾಜ್‌ರವರಿದ್ದ ಪೀಠ ಆದೇಶ ನೀಡಿತ್ತು. ಜಿಲ್ಲಾ ನ್ಯಾಯಾಲಯದ ಆದೇಶದಿಂದ ಆರೋಪಿ ಮುರುಘಾಶ್ರೀಗೆ ಅನ್ಯಾಯವಾಗಿದೆ. ಹಾಗಾಗಿ ಜಾಮೀನು ರಹಿತ ಬಂಧನದ ವಾರೆಂಟ್​ಗೆ ಹೈಕೋರ್ಟ್ ತಡೆ ನೀಡಲಾಗಿತ್ತು.

Murugha Shree: ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆ
ಡಾ. ಶಿವಮೂರ್ತಿ ಶರಣ
Follow us
Ramesha M
| Updated By: ಗಂಗಾಧರ​ ಬ. ಸಾಬೋಜಿ

Updated on:Nov 20, 2023 | 8:58 PM

ಬೆಂಗಳೂರು, ನವೆಂಬರ್​ 20: ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ (Murugha Shree) ಗಳ ಬಿಡುಗಡೆ ಮಾಡಲಾಗಿದೆ. ಮುರುಘಾಶ್ರೀ ಬಿಡುಗಡೆಗೆ ಹೈಕೋರ್ಟ್‌ನ ನ್ಯಾ.ಸೂರಜ್ ಗೋವಿಂದರಾಜ್‌ರವರಿದ್ದ ಪೀಠ ಆದೇಶ ನೀಡಿತ್ತು.ಜಿಲ್ಲಾ ನ್ಯಾಯಾಲಯದ ಆದೇಶದಿಂದ ಆರೋಪಿ ಮುರುಘಾಶ್ರೀಗೆ ಅನ್ಯಾಯವಾಗಿದೆ. ಹಾಗಾಗಿ ಜಾಮೀನು ರಹಿತ ಬಂಧನದ ವಾರೆಂಟ್​ಗೆ ಹೈಕೋರ್ಟ್ ತಡೆ ನೀಡಲಾಗಿತ್ತು. ಚಿತ್ರದುರ್ಗಕ್ಕೆ ಕರೆತಂದಿರುವುದು ಹೈಕೋರ್ಟ್ ಆದೇಶದ ಉಲ್ಲಂಘನೆ ಆಗಿದೆ. ಮುರುಘಾಶ್ರೀ ಬಿಡುಗಡೆಗೊಳಿಸುವಂತೆ ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಹೈಕೋರ್ಟ್ ನಿರ್ದೇಶನ ನೀಡಿತ್ತು.

ಮತ್ತೆ ಮೌನಕ್ಕೆ ಜಾರಿದ ಮುರುಘಾಶ್ರೀ

ಬಿಡುಗಡೆಯ ಬಳಿಕ ದಾವಣಗೆರೆ ವಿರಕ್ತ ಮಠದತ್ತ ತೆರಳಿದ್ದಾರೆ. ಈ ವೇಳೆ ಪ್ರತಿಕ್ರಿಯಿಸಿದ ಮುರುಘಾಶ್ರೀ, ನಾವು ಸೂಕ್ತವಾದ ಸಂದರ್ಭದಲ್ಲಿ ವಿಚಾರ ಹಂಚಿಕೊಳ್ಳುತ್ತೇವೆ. ನಾವು ಈಗ ಮತ್ತೆ ಮೌನಕ್ಕೆ ಸರಿಯುತ್ತಿದ್ದೇವೆ. ಮುಂದೆ ಮಾತಾಡುತ್ತೇವೆ. ಸದ್ಯ ನೋ ಕಾಮೆಂಟ್ಸ್ ಎಂದಿದ್ದಾರೆ.

ಮುರುಘಾಶ್ರೀ ವಿರುದ್ಧದ 2ನೇ ಪೋಕ್ಸೋ ಕೇಸ್​ನಲ್ಲಿ ಮಧ್ಯಂತರ ಆದೇಶವಿದೆ. ಮುಂದಿನ ಆದೇಶದವರೆಗೂ ವಿಚಾರಣೆ ಮುಂದೂಡುವಂತೆ ಜಿಲ್ಲಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. 1ನೇ ಪೋಕ್ಸೋ ಕೇಸ್​ನಲ್ಲಿ ಹೈಕೋರ್ಟ್ ಜಾಮೀನು ನೀಡಿದೆ. ಚಿತ್ರದುರ್ಗ ಪ್ರವೇಶಿಸದೇ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಲು ಸೂಚಿಸಿದೆ. ಹೀಗಿರುವಾಗ ಸ್ಥಳೀಯ ಅಭಿಯೋಜಕರು ಜಿಲ್ಲಾ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದು, ಮುರುಘಾಶ್ರೀ ಕೋರ್ಟ್​ಗೆ ಹಾಜರಾಗುತ್ತಿಲ್ಲವೆಂದು ದೂರಿದ್ದಾರೆ.

ಇದನ್ನೂ ಓದಿ: Murugha Shree Arrested: ಮೊನ್ನೇ ಅಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಮುರುಘಾಶ್ರೀ ಮತ್ತೆ ಅರೆಸ್ಟ್!

ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಲು ಹೈಕೋರ್ಟ್ ಸೂಚಿಸಿಲ್ಲವೆಂದು ವಾದಿಸಿದ್ದಾರೆ. ಆದರೂ ವಾರಂಟ್ ಹೊರಡಿಸಲು ಜಿಲ್ಲಾ ಕೋರ್ಟ್​ಗೆ ಅಭಿಯೋಜಕರ ಅರ್ಜಿ ಕೋರಿರುವುದು ಅಚ್ಚರಿದಾಯಕವಾಗಿದೆ. ಹೈಕೋರ್ಟ್ ಚಿತ್ರದುರ್ಗಕ್ಕೆ ಪ್ರವೇಶಿಸದಂತೆ ಷರತ್ತು ವಿಧಿಸಿದೆ. ಹೈಕೋರ್ಟ್ ಆದೇಶದಂತೆ ವಿಚಾರಣೆಯನ್ನು ಮುಂದೂಡಬೇಕಿತ್ತು. ಆದರೆ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ. ಕೇಸ್ ಬೇರೆಯದಾದರೂ ನಿರ್ಬಂಧ ಬದಲಾಗುವುದಿಲ್ಲ. ಈಗ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ ಎಂದು ಹೈಕೋರ್ಟ್ ತಿಳಿಸಿದೆ.

ವಕೀಲ ಉಮೇಶ್ ಹೇಳಿದ್ದಿಷ್ಟು

ಚಿತ್ರದುರ್ಗ ಜೈಲು ಬಳಿ ಮುರುಘಾಶ್ರೀ ಪರ ವಕೀಲ ಉಮೇಶ್ ಪ್ರತಿಕ್ರಿಯಿಸಿದ್ದು, ಇ-ಮೇಲ್ ಮೂಲಕ ಹೈಕೋರ್ಟ್ ಆದೇಶ ಕಾರಾಗೃಹಕ್ಕೆ ತಲುಪಿದೆ. ಪರಿಶೀಲಿಸಿ ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಮುರುಘಾಶ್ರೀಗಳು ಬಿಡುಗಡೆ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

2ನೇ ಪೋಕ್ಸೋ ಕೇಸ್​ನಲ್ಲಿ ಮುರುಘಾ ಶರಣರಿಗೆ ಬಂಧನ ಹಿನ್ನೆಲೆ ನ್ಯಾ.ಸೂರಜ್ ಗೋವಿಂದರಾಜ್​ರವರ ಪೀಠದಲ್ಲಿ ತುರ್ತು ವಿಚಾರಣೆ ಮಾಡಲಾಗಿದೆ. ಈಗಾಗಲೇ ಬಂಧನಕ್ಕೊಳಗಾಗಿದ್ದಾರಾ ಎಂದು ಹೈಕೋರ್ಟ್ ಪ್ರಶ್ನಿಸಿದ್ದು, ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಲು ಯತ್ನಿಸಿದರೆ ಕ್ರಮಕೈಗೊಳ್ಳುವುದಾಗಿ ಪೊಲೀಸರಿಗೆ  ನ್ಯಾ.ಸೂರಜ್ ಗೋವಿಂದರಾಜ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಮುರುಘಾಶ್ರೀ ವಿರುದ್ಧ ಅರೆಸ್ಟ್ ವಾರಂಟ್: ಮತ್ತೆ ಬಂಧನದ ಭೀತಿಯಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರು

ಡಾ.ಶಿವಮೂರ್ತಿ ಮುರುಘಾ ಶರಣರು ಕೋರ್ಟ್​ಗೆ ಹಾಜರಾಗಿಲ್ಲ ಎಂದು ಅಭಿಯೋಜಕರು ಜಿಲ್ಲಾ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ವಾರಂಟ್ ಹೊರಡಿಸುವಂತೆ ಕೋರಿದ್ದಾರೆ. ಕೋರ್ಟ್ ವಾರಂಟ್ ಹೊರಡಿಸಿ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿಗೆ ಅಭಿಯೋಜಕರು ತಕರಾರು ಮಾಡಿದ್ದು, ಹೈಕೋರ್ಟ್ ಆದೇಶ ಪರಿಗಣಿಸಿಲ್ಲವೆಂದು ಮುರುಘಾಶ್ರೀ ವಕೀಲರು ವಾದ ಮಂಡಿಸಿದ್ದಾರೆ.

ಹೈಕೋರ್ಟ್ ಆದೇಶವನ್ನು ತಪ್ಪಾಗಿ ವ್ಯಾಖ್ಯಾನಿಸಬಾರದು. ಅಭಿಯೋಜಕರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಆರೋಪಿ ಯಾರೇ ಆದರೂ ಕಾನೂನಿನಂತೆ ಮಾತ್ರ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅಭಿಪ್ರಾಯ ಪಟ್ಟಿದ್ದಾರೆ.

ಸದ್ಯ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಬಳಿಕ ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಮುರುಘಾಶ್ರೀ ಅವರನ್ನು ಶಿಫ್ಟ್ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:51 pm, Mon, 20 November 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ