5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆ; ಮಾ.22 ರಂದು ತೀರ್ಪು ಪ್ರಕಟಿಸಲಿರುವ ಹೈಕೋರ್ಟ್

5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ(ಮಾ.22) ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಇರುವ ಹೈಕೋರ್ಟ್(High Court) ವಿಭಾಗೀಯ ಪೀಠ ತೀರ್ಪು ಪ್ರಕಟಿಸಲಿದೆ.

5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆ; ಮಾ.22 ರಂದು ತೀರ್ಪು ಪ್ರಕಟಿಸಲಿರುವ ಹೈಕೋರ್ಟ್
5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆ ಬಗ್ಗೆ ಮಾ.22 ರಂದು ತೀರ್ಪು ಪ್ರಕಟಿಸಲಿರುವ ಹೈಕೋರ್ಟ್
Follow us
Ramesha M
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 21, 2024 | 10:41 PM

ಬೆಂಗಳೂರು, ಮಾ.21: 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ(ಮಾ.22) ಬೆಳಗ್ಗೆ 10.30ಕ್ಕೆ ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಇರುವ ಹೈಕೋರ್ಟ್(High Court) ವಿಭಾಗೀಯ ಪೀಠ ತೀರ್ಪು ಪ್ರಕಟಿಸಲಿದೆ. ಏಕಸದಸ್ಯ ಪೀಠ, ಶಾಲೆಗಳ ಬೋರ್ಡ್ ಪರೀಕ್ಷೆ ರದ್ದುಪಡಿಸಿತ್ತು. ನಂತರ ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆ ನೀಡಿತ್ತು. ಬಳಿಕ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿ, ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂಕೋರ್ಟ್ ಸೂಚಿಸಿತ್ತು. ಈ ಹಿನ್ನಲೆ ಸರ್ಕಾರದ ಮೇಲ್ಮನವಿ ಸಂಬಂಧ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು.

5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆ ತೀರ್ಪು ಕಾಯ್ದಿರಿಸಿದ್ದ ಹೈಕೋರ್ಟ್

ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5,8,9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ಇತ್ತೀಚೆಗೆ ರದ್ದುಪಡಿಸಿ ಆದೇಶ ನೀಡಿತ್ತು. ಹೈಕೋರ್ಟ್ ದ್ವಿಸದಸ್ಯ ಪೀಠದ ಮಧ್ಯಂತರ ತೀರ್ಪನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದವು. ಇದನ್ನು ಸುಪ್ರೀಂಕೋರ್ಟ್ ವಿಚಾರಣೆ ಮಾಡಿದ್ದು,  ಆದೇಶದಲ್ಲಿ ಮಧ್ಯಂತರ ತೀರ್ಪನ್ನು ರದ್ದುಪಡಿಸಿತ್ತು.

ಇದನ್ನೂ ಓದಿ:5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆ: ಸರ್ಕಾರದ ಮೇಲ್ಮನವಿಯ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಈ ಹಿನ್ನೆಲೆ ಕೆಲ ದಿನಗಳ ಹಿಂದೆ ನಡೆಯಬೇಕಾಗಿದ್ದ 5, 8 ಮತ್ತು 9ನೇ ತರಗತಿಗಳ SA-2 ಮೌಲ್ಯಾಂಕನ ಪರೀಕ್ಷೆಗಳನ್ನು ಶಿಕ್ಷಣ ಇಲಾಖೆ ಮುಂದಿನ ಆದೇಶದವರೆಗೆ ಮುಂದೂಡುವಂತೆ ಶಾಲೆಗಳಿಗೆ ಸೂಚಿಸಿ, ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿಬಿ ಕಾವೇರಿ ಆದೇಶ ಹೊರಡಿಸಿದ್ದರು. 5, 8, 9 ಹಾಗೂ 11 ನೇ ತರಗತಿಗಳ ಬೋರ್ಡ್​ ಪರೀಕ್ಷೆಗೆ ಅನುಮತಿ ನೀಡುವ ಕರ್ನಾಟಕ ಹೈಕೋರ್ಟ್​ನ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಹೈಕೋರ್ಟ್ ಆದೇಶವನ್ನು ರೂಪ್ಸ ಹಾಗೂ ಅವರ್ ಸ್ಕೂಲ್ಸ್ ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಿತ್ತು. ಅದರಂತೆ ಮೇಲ್ಮನವಿಯನ್ನು ಪುರಸ್ಕರಿಸಿದ ಸುಪ್ರೀಂ, ಪರೀಕ್ಷೆ ನಡೆಸದಂತೆ ಇತ್ತೀಚೆಗೆ ತಡೆ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್