AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರದಲ್ಲಿ ಜೈಲು ಬಂಧಿಗಳ ಪುಂಡಾಟ: ವಾರ್ಡರ್​​ ಕೊಲೆಗೆ ಯತ್ನ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳು ಜೈಲಿನ ವಾರ್ಡರ್ ಮೇಲೆ ಭೀಕರ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಆಘಾತಕಾರಿ ಘಟನೆ ನಡೆದಿದೆ. ತಿಂಗಳ ಹಿಂದೆ ಭದ್ರತಾ ವಿಭಾಗದಿಂದ ಅನೆಕ್ಸ್-1 ಕಾರಾಗೃಹಕ್ಕೆ ಕೆಲ ಜೈಲು ಬಂಧಿಗಳ ಶಿಫ್ಟ್​ ಮಾಡಲಾಗಿತ್ತು. ಈ ವೇಳೆ ಮಂಜುನಾಥ್ ಬಂಧಿಗಳ ವಸ್ತುಗಳನ್ನು ತಪಾಸಣೆ ಮಾಡಿದ್ದರು. ಅಲ್ಲದೆ, ಹೆಚ್ಚುವರಿ ವಸ್ತು ತೆಗೆದುಕೊಂಡು ಹೋಗಲು ಅವಕಾಶ ನೀಡಿರಲಿಲ್ಲ. ಇದೇ ಸಿಟ್ಟಿಗೆ ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಪರಪ್ಪನ ಅಗ್ರಹಾರದಲ್ಲಿ ಜೈಲು ಬಂಧಿಗಳ ಪುಂಡಾಟ: ವಾರ್ಡರ್​​ ಕೊಲೆಗೆ ಯತ್ನ
ವಾರ್ಡರ್​​ ಕೊಲೆಗೆ ಯತ್ನ Image Credit source: Tv9 Kannada
ರಾಮು, ಆನೇಕಲ್​
| Edited By: |

Updated on:Sep 04, 2026 | 2:04 PM

Share

ಆನೇಕಲ್​​, ಸೆಪ್ಟೆಂಬರ್​​ 04: ಕೊಲೆ ಕೇಸ್​​ ಆರೋಪಿಗಳು ಜೈಲಿನ ವಾರ್ಡರ್​​ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ. ಮಂಗಳೂರಿನ ಭಜರಂಗದಳ ಕಾರ್ಯಕರ್ತನಾಗಿದ್ದ ಸುಹಾಸ್ ಶೆಟ್ಟಿ ಕೊಲೆ ಕೇಸ್​ನ ಆರೋಪಿಗಳು ವಾರ್ಡರ್ ಮಂಜುನಾಥ್​ ಮೇಲೆ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ್ದು, ಪರಪ್ಪನ ಅಗ್ರಹಾರ ಜೈಲಿನ ಶಿಕ್ಷಾ ಬಂಧಿ ವಿಭಾಗದಲ್ಲಿ ಸೆ.2ರಂದು ಬೆಳಗ್ಗೆ 11.30ಕ್ಕೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆ ಮೂಲಕ ಪರಪ್ಪನ ಅಗ್ರಹಾರ ಜೈಲು ಮತ್ತೆ ಸುದ್ದಿಯಾಗಿದೆ.

ಅವಧಿಪೂರ್ವ ಬಿಡುಗಡೆಗೆ ಸಂಬಂಧಿಸಿದಂತೆ ವಿಷಯ ನಿರ್ವಾಹಕರಾಗಿ ಸೇವೆ ಸಂಬಂಧ ವೀಕ್ಷಕ‌ ಮಂಜುನಾಥ್ ಶಿಕ್ಷಾ ಬಂಧಿ ವಿಭಾಗಕ್ಕೆ ತೆರಳಿದ್ದರು. ಈ ವೇಳೆ ಸುಹಾಸ್ ಕೊಲೆ ಆರೋಪಿಗಳಾದ ಮೊಹಮ್ಮದ್ ಮುಜಾಮಿಲ್, ಅಬ್ದುಲ್ ಶಫ್ಘಾನ್, ಮೊಹಮ್ಮದ್ ರಿಜ್ವಾನ್, ನಯಾಜ್ ಮತ್ತು ಕಲಂದರ್ ಶಫಿ ವಾರ್ಡರ್​​ರನ್ನು ಅವ್ಯಾಚ ಶಬ್ದಗಳಿಂದ ನಿಂದಿಸಿದ್ದಾರೆ. ಜೊತೆಗೆ ಏಕಾಏಕಿ ಮಂಜುನಾಥ್​​ ಅವರನ್ನು ಬ್ಯಾರಕ್​ನ ಕೊಠಡಿ ಸಂಖ್ಯೆ 4ಕ್ಕೆ ಎಳೆದೊಯ್ದು ಆರೋಪಿಗಳು ಮನಸೋ ಇಚ್ಛೆ ಹಲ್ಲೆ ನಡೆಸಿದ್ದು, ಕುತ್ತಿಗೆಯನ್ನು ಬಲವಾಗಿ ಹಿಸುಕಿ ಉಸಿರುಗಟ್ಟಿಸಿ ಕೊಲೆ ಯತ್ನ ನಡೆಸಿದ್ದಾರೆ. ಕೂಡಲೇ ಅಲರ್ಟ್​​ ಆದ ಕರ್ತವ್ಯನಿರತ ಇನ್ನುಳಿದ ಅಧಿಕಾರಿ, ಸಿಬ್ಬಂದಿ ಮಂಜುನಾಥ್​​ ಅವರ ರಕ್ಷಣೆ ಧಾವಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:  ಲಾಲ್‌ಬಾಗ್‌ ಶಿಲಾ ರಚನೆ ಕುರಿತ ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ: ಹೆಬ್ಬಾಳ ಕೆರೆಗೂ ಟನಲ್‌ ರೋಡ್‌ ಟೆನ್ಷನ್

ತಿಂಗಳ ಹಿಂದೆ ಭದ್ರತಾ ವಿಭಾಗದಿಂದ ಅನೆಕ್ಸ್-1 ಕಾರಾಗೃಹಕ್ಕೆ ಕೆಲ ಜೈಲು ಬಂಧಿಗಳ ಶಿಫ್ಟ್​ ಮಾಡಲಾಗಿತ್ತು. ಈ ವೇಳೆ ಮಂಜುನಾಥ್ ಬಂಧಿಗಳ ವಸ್ತುಗಳನ್ನು ತಪಾಸಣೆ ಮಾಡಿದ್ದರು. ಅಲ್ಲದೆ, ಹೆಚ್ಚುವರಿ ವಸ್ತು ತೆಗೆದುಕೊಂಡು ಹೋಗಲು ಅವಕಾಶ ನೀಡಿರಲಿಲ್ಲ. ಇದೇ ವಿಚಾರವಾಗಿ ಜೈಲಿನಲ್ಲಿ ಆರೋಪಿಗಳ ನಡುವೆ ವಾಗ್ವಾದ ಆಗಿತ್ತು. ಅಕ್ರಮ ಚಟುವಟಿಕೆಗಳ ಬಗ್ಗೆ ಅಧಿಕಾರಿಗಳಿಗೆ ವಾರ್ಡರ್​ ತಿಳಿಸುತ್ತಿದ್ದ ಎಂಬ ಕಾರಣಕ್ಕೆ ಆರೋಪಿಗಳು ಹಲ್ಲೆ ನಡೆಸಿದ್ದು, ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:04 pm, Fri, 4 September 26

Follow Us
ರಾಮು, ಆನೇಕಲ್​
ರಾಮು, ಆನೇಕಲ್​

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More