ಉತ್ತಮ ಗುಣಮಟ್ಟದ ತಾಜಾ ಮೀನು ಮತ್ತು ಮೀನಿನ ಖಾದ್ಯಗಳನ್ನು ಸಾರ್ವಜನಿಕರ ಮನೆಬಾಗಿಲಿಗೆ ತಲುಪಿಸಲಾಗುತ್ತದೆ: ಎಸ್.ಅಂಗಾರ

| Updated By: preethi shettigar

Updated on: Mar 21, 2022 | 6:32 PM

24 ಏಜೆನ್ಸಿ ತಂಡಗಳು ಇಲಾಖೆ ವ್ಯಾಪ್ತಿಯಲ್ಲಿ ಮೀನಿನ ವಿತರಣೆ ಮತ್ತು ಮೀನಿನ ಉತ್ಪನ್ನಗಳನ್ನು ಮನೆಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡುತ್ತವೆ. ವಾಯು ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರಕ್ಕೆ ಇಂಧನದ ಕೊರತೆ ಎದುರಾಗಬಾರದೆಂಬ ದೃಷ್ಠಿಯಿಂದ ಎಲೆಕ್ಟ್ರಿಕ್ ವಾಹನಗಳನ್ನು ಬಳಸಲಾಗುವುದು ಎಂದು ಸಚಿವ ಎಸ್. ಅಂಗಾರ ತಿಳಿಸಿದರು.

ಉತ್ತಮ ಗುಣಮಟ್ಟದ ತಾಜಾ ಮೀನು ಮತ್ತು ಮೀನಿನ ಖಾದ್ಯಗಳನ್ನು ಸಾರ್ವಜನಿಕರ ಮನೆಬಾಗಿಲಿಗೆ ತಲುಪಿಸಲಾಗುತ್ತದೆ: ಎಸ್.ಅಂಗಾರ
ಎಸ್.ಅಂಗಾರ
Follow us on

ಬೆಂಗಳೂರು: ನಗರದ ಕಬ್ಬನ್‍ಪಾರ್ಕ್ ಮತ್ಸ್ಯದರ್ಶಿನಿ ಕ್ಯಾಂಟೀನ್‍ನ 6 ಕಿಲೋಮೀಟರ್ ವ್ಯಾಪ್ತಿಯಲ್ಲಿ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ತಾಜಾ ಮೀನು(Fresh Fish) ಮತ್ತು ಮೀನಿನ ಖಾದ್ಯ ಉತ್ಪನ್ನಗಳನ್ನು ಸಾರ್ವಜನಿಕರಿಗೆ(Public) ಸುಲಭವಾಗಿ ಮನೆಬಾಗಿಲಿಗೆ ತಲುಪಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ(S Angara) ಅವರು ಇಂದು (ಮಾರ್ಚ್​ 21) ತಿಳಿಸಿದ್ದಾರೆ.

ಇಂದು ನಗರದ ಕಬ್ಬನ್‍ಪಾರ್ಕ್ ಆವರಣದಲ್ಲಿರುವ ಮತ್ಸ್ಯದರ್ಶಿನಿ ಕ್ಯಾಂಟೀನ್‍ನಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ, ಮಂಗಳೂರು ಅವರು ಏರ್ಪಡಿಸಿದ್ದ ಆನ್‍ಲೈನ್ ಮೀನು ಮಾರಾಟ ಜಾಲತಾಣ ಲೋಕಾರ್ಪಣೆ ಮಾಡಿ ಮಾತನಾಡಿದ ಸಚಿವರು, ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬ ವ್ಯಕ್ತಿಯ ದೇಹದಲ್ಲಿ ಪೌಷ್ಠಿಕಾಂಶ ಕಡಿಮೆಯಾಗಿ ವಿವಿಧ ರೋಗಗಳಿಗೆ ತುತ್ತಾಗುವ ಸಂದರ್ಭಗಳಿವೆ. ಮೀನು ಒಂದು ಉತ್ತಮ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥವಾಗಿದ್ದು, ಇದರ ಸೇವನೆಯಿಂದ ದೇಹಕ್ಕೆ ಬೇಕಾಗುವ ಉತ್ತಮ ಪೌಷ್ಠಿಕಾಂಶಗಳು ದೊರಕುವುದು ಎಂದು ಹೇಳಿದರು.

ಮೀನುಗಾರಿಕೆ ಇಲಾಖೆಯು ಅನೇಕ ರೀತಿಯ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದೆ. ಇತ್ತೀಚಿನ ನವ ಮಾಧ್ಯಮದ ಯುಗದಲ್ಲಿ ಆ್ಯಪ್​ ಬಳಸಿಕೊಂಡು, ಜನರಿಗೆ ಅತ್ಯಂತ ಸುಲಭವಾಗಿ ಮೀನು ತಲುಪಿಸುವ ವ್ಯವಸ್ಥೆಯನ್ನು ಇಲಾಖೆ ಮಾಡಬೇಕು. ಮೀನು ಕೆಟ್ಟು ಹೋಗುವ ವಸ್ತು ಆಗಿದ್ದು, ಮೀನಿನ ಗುಣಮಟ್ಟ ಕಾಪಾಡಬೇಕಾಗುತ್ತದೆ. ಈಗಿನ ತಾಂತ್ರಿಕತೆಯನ್ನು ಬಳಸಿಕೊಂಡು ಕೋಲ್ಡ್ ಸ್ಟೋರೇಜ್ ವ್ಯವಸ್ಥೆಯನ್ನು ಮಾಡಬೇಕಾಗಿದೆ. 24 ಏಜೆನ್ಸಿ ತಂಡಗಳು ಇಲಾಖೆ ವ್ಯಾಪ್ತಿಯಲ್ಲಿ ಮೀನಿನ ವಿತರಣೆ ಮತ್ತು ಮೀನಿನ ಉತ್ಪನ್ನಗಳನ್ನು ಮನೆಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡುತ್ತವೆ. ವಾಯು ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರಕ್ಕೆ ಇಂಧನದ ಕೊರತೆ ಎದುರಾಗಬಾರದೆಂಬ ದೃಷ್ಠಿಯಿಂದ ಎಲೆಕ್ಟ್ರಿಕ್ ವಾಹನಗಳನ್ನು ಬಳಸಲಾಗುವುದು ಎಂದು ಸಚಿವ ಎಸ್. ಅಂಗಾರ ತಿಳಿಸಿದರು.

ಮೀನು ಮತ್ತು ಮೀನಿನ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಅತ್ಯಂತ ಸುಲಭದಲ್ಲಿ ಸಾರ್ವಜನಿಕರಿಗೆ ಒದಗಿಸಲು ಕ್ರಮವಹಿಸಲಾಗುವುದು. ಅಭಿವೃದ್ಧಿ ನಿಗಮಗಳು ಸ್ವಂತ ಕಾಲ ಮೇಲೆ ನಿಲ್ಲಬೇಕು. ವಿವಿಧ ಯೋಜನೆಗಳ ಮೂಲಕ ಜನರಿಗೆ ಸೌಲಭ್ಯವನ್ನು ಒದಗಿಸಬೇಕು. ಆಗ ಸಂಸ್ಥೆಯ ಬಗ್ಗೆ ಜನರಿಗೆ ಒಳ್ಳೆಯ ಅಭಿಪ್ರಾಯ ಮೂಡುತ್ತದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ:

ರಾಯಚೂರು: ಲಕ್ಷಾಂತರ ಮೀನುಗಳ ಮಾರಣಹೋಮ; ಸರ್ಕಾರದಿಂದ ಪರಿಹಾರ ನೀಡುವಂತೆ ಆಗ್ರಹ

ಲಖಿಂಪುರ ಖೇರಿ: ಆಶಿಶ್ ಮಿಶ್ರಾ ಜಾಮೀನು ಕುರಿತು ಉತ್ತರ ಪ್ರದೇಶ ಸರ್ಕಾರದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್

Published On - 6:29 pm, Mon, 21 March 22