AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿವೆ ಬರೋಬ್ಬರಿ 25 ಲಕ್ಷ ಪ್ರೈವೆಟ್ ಕಾರುಗಳು! ದೆಹಲಿ, ಮುಂಬೈಗೇ ಸೆಡ್ಡು ಹೊಡೆದ ಸಿಲಿಕಾನ್ ಸಿಟಿ

ದೇಶದ ಐಟಿ ಹಬ್ ಬೆಂಗಳೂರು ಬರೋಬ್ಬರಿ 25 ಲಕ್ಷ ಖಾಸಗಿ ಕಾರುಗಳನ್ನು ಹೊಂದುವ ಮೂಲಕ ಇಡೀ ದೇಶದಲ್ಲೇ ಅತಿ ಹೆಚ್ಚು ಖಾಸಗಿ ಕಾರುಗಳಿರುವ ನಗರವಾಗಿ ಹೊರಹೊಮ್ಮಿದೆ. ವಾಹನ ಒಡೆತನದಲ್ಲಿ ದೆಹಲಿ ಮತ್ತು ಮುಂಬೈ ನಗರಗಳನ್ನು ಹಿಂದಿಕ್ಕಿರುವ ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ರಸ್ತೆಗಳ ಮೇಲಿನ ಒತ್ತಡ ಹಾಗೂ ಸಂಚಾರ ದಟ್ಟಣೆ ತೀವ್ರವಾಗುತ್ತಿದ್ದು, ಪಾರ್ಕಿಂಗ್ ಸಮಸ್ಯೆ ಕೂಡ ಹೆಚ್ಚಾಗಿದೆ.

ಬೆಂಗಳೂರಿನಲ್ಲಿವೆ ಬರೋಬ್ಬರಿ 25 ಲಕ್ಷ ಪ್ರೈವೆಟ್ ಕಾರುಗಳು! ದೆಹಲಿ, ಮುಂಬೈಗೇ ಸೆಡ್ಡು ಹೊಡೆದ ಸಿಲಿಕಾನ್ ಸಿಟಿ
ಸಾಂದರ್ಭಿಕ ಚಿತ್ರImage Credit source: Banglore mirror
ಭಾವನಾ ಹೆಗಡೆ
|

Updated on:Jul 20, 2026 | 9:55 AM

Share

ಮುಖ್ಯಾಂಶಗಳು

  • ಬೆಂಗಳೂರು ಇಡೀ ದೇಶದಲ್ಲೇ ಅತಿ ಹೆಚ್ಚು ಖಾಸಗಿ ಕಾರುಗಳಿರುವ ನಗರವಾಗಿದೆ.
  • ದೆಹಲಿ ಮತ್ತು ಮುಂಬೈ ನಗರಗಳನ್ನು ಹಿಂದಿಕ್ಕಿ ಸಿಲಿಕಾನ್ ಸಿಟಿ ಮೊದಲ ಸ್ಥಾನದಲ್ಲಿದೆ.
  • ವಾಹನಗಳ ಸಂಖ್ಯೆ ಹೆಚ್ಚಳದಿಂದ ನಗರದಲ್ಲಿ ಟ್ರಾಫಿಕ್ ಸಮಸ್ಯೆ ತೀವ್ರವಾಗಿ ಕಾಡುತ್ತಿದೆ.

ಬೆಂಗಳೂರು, ಜುಲೈ 20: ದೇಶದ ಐಟಿ ಹಬ್ ಖಾಸಗಿ ಕಾರುಗಳ ಬಳಕೆಯಲ್ಲಿ ಹೊಸ ದಾಖಲೆ ಬರೆದಿದೆ. ಬೆಂಗಳೂರು ಬರೋಬ್ಬರಿ 25 ಲಕ್ಷ ಖಾಸಗಿ ಕಾರುಗಳನ್ನು (Private Cars) ಹೊಂದುವ ಮೂಲಕ ಇಡೀ ದೇಶದಲ್ಲೇ ಅತಿ ಹೆಚ್ಚು ಖಾಸಗಿ ಕಾರುಗಳಿರುವ ನಗರವಾಗಿ ಹೊರಹೊಮ್ಮಿದೆ. ವಾಹನ ದಟ್ಟಣೆ ಮತ್ತು ಟ್ರಾಫಿಕ್ ಕಿರಿಕಿರಿಗೆ ಈಗಾಗಲೇ ಹೆಸರಾಗಿರುವ ಬೆಂಗಳೂರಿಗೆ ಈ ಅಂಕಿ-ಅಂಶ ಮತ್ತಷ್ಟು ಆತಂಕ ತಂದಿಟ್ಟಿದೆ.

ದೆಹಲಿ, ಮುಂಬೈ ಹಿಂದಿಕ್ಕಿದ ಸಿಲಿಕಾನ್ ಸಿಟಿ

ಸಾಮಾನ್ಯವಾಗಿ ದೇಶದಲ್ಲೇ ಅತಿ ಹೆಚ್ಚು ವಾಹನಗಳಿರುವ ನಗರ ಎಂದರೆ ದೆಹಲಿ ಎಂಬ ಭಾವನೆ ಇತ್ತು. ಆದರೆ  ಖಾಸಗಿ ಕಾರುಗಳ ಒಡೆತನದ ವಿಷಯಕ್ಕೆ ಬಂದರೆ ಬೆಂಗಳೂರು ಈಗ ದೆಹಲಿ ಮತ್ತು ಮುಂಬೈ ನಗರಗಳನ್ನೂ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ. ಸಾರ್ವಜನಿಕ ಸಾರಿಗೆಗಿಂತಲೂ ಸ್ವಂತ ಕಾರುಗಳ ಬಳಕೆಗೆ ಬೆಂಗಳೂರಿಗರು ಹೆಚ್ಚಿನ ಆದ್ಯತೆ ನೀಡುತ್ತಿರುವುದನ್ನು ಈ ವರದಿ ಸಾಬೀತುಪಡಿಸಿದೆ. ಐಟಿ ಉದ್ಯೋಗಿಗಳ ಸಂಖ್ಯೆ ಹೆಚ್ಚಿರುವುದು ಮತ್ತು ನಗರದ ಆರ್ಥಿಕ ಬೆಳವಣಿಗೆಯೂ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.

ಟ್ರಾಫಿಕ್ ಕಿರಿಕಿರಿ ಹೆಚ್ಚು

ನಗರದಲ್ಲಿ ಕಾರುಗಳ ಸಂಖ್ಯೆ 25 ಲಕ್ಷ ತಲುಪಿರುವುದರಿಂದ ಬೆಂಗಳೂರಿನ ರಸ್ತೆಗಳ ಮೇಲಿನ ಒತ್ತಡ ಗಣನೀಯವಾಗಿ ಹೆಚ್ಚಾಗಿದೆ. ಕಿರಿದಾದ ರಸ್ತೆಗಳು ಮತ್ತು ಮೂಲಸೌಕರ್ಯಗಳ ಕೊರತೆಯ ನಡುವೆ ಇಷ್ಟೊಂದು ಬೃಹತ್ ಪ್ರಮಾಣದ ಕಾರುಗಳು ರಸ್ತೆಗಿಳಿಯುತ್ತಿರುವುದರಿಂದ ಪೀಕ್ ಅವರ್‌ಗಳಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವುದು ಸಂಚಾರ ಪೊಲೀಸರಿಗೂ ದೊಡ್ಡ ಸವಾಲಾಗಿದೆ. ಮೆಟ್ರೋ ವಿಸ್ತರಣೆ ಮತ್ತು ಬಿಎಂಟಿಸಿ ಬಸ್‌ಗಳ ಸೌಲಭ್ಯವಿದ್ದರೂ ಕಾರುಗಳ ಸಂಖ್ಯೆ ಮಾತ್ರ ವರ್ಷದಿಂದ ವರ್ಷಕ್ಕೆ ದಾಖಲೆ ಮಟ್ಟದಲ್ಲಿ ಏರುತ್ತಲೇ ಸಾಗಿದೆ.

ಇದನ್ನೂ ಓದಿ Auto Tips: ವಿವಿಧ ರೀತಿಯ ಹೈಬ್ರಿಡ್ ಕಾರುಗಳು ಯಾವುವು?, ಅವು ಹೇಗೆ ಕಾರ್ಯನಿರ್ವಹಿಸುತ್ತವೆ?

ಮಾಲಿನ್ಯ ಮತ್ತು ಪಾರ್ಕಿಂಗ್ ಸಮಸ್ಯೆ

ಖಾಸಗಿ ಕಾರುಗಳ ಈ ಅತಿಯಾದ ಸಂಖ್ಯೆಯಿಂದಾಗಿ ನಗರದಲ್ಲಿ ವಾಯುಮಾಲಿನ್ಯದ ಪ್ರಮಾಣ ಹೆಚ್ಚುತ್ತಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಈಗ ‘ಪಾರ್ಕಿಂಗ್’ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ವಸತಿ ಪ್ರದೇಶಗಳು ಹಾಗೂ ವಾಣಿಜ್ಯ ಮಾರುಕಟ್ಟೆಗಳಲ್ಲಿ ವಾಹನ ನಿಲ್ಲಿಸಲು ಜಾಗವಿಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ. ಸಾರ್ವಜನಿಕ ಸಾರಿಗೆಯನ್ನು ಬಳಸದೆ ಪ್ರತಿಯೊಬ್ಬರೂ ಖಾಸಗಿ ಕಾರು ಅವಲಂಬನೆ ಮುಂದುವರಿಸಿದರೆ ಮುಂದಿನ ದಿನಗಳಲ್ಲಿ ಬೆಂಗಳೂರಿನ ರಸ್ತೆಗಳಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:17 am, Mon, 20 July 26

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್