ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಬಿಜೆಪಿ ದೂರು ನೀಡಿದೆ. ಶಾಂತಿ ಕದಡುವ ಸುಳ್ಳು ಸುದ್ದಿ ಪೋಸ್ಟ್ ಮಾಡಿದ ಆರೋಪ ಮಾಡಿ ದೂರು ನೀಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿದ ಆರೋಪದಲ್ಲಿ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ಗೆ ದೂರು ಕೊಡಲಾಗಿದೆ. ರಾಜ್ಯ ಬಿಜೆಪಿ ಕೋಶಾಧ್ಯಕ್ಷ ಸುಬ್ಬನರಸಿಂಹ ನೇತೃತ್ವದಲ್ಲಿ ಪ್ರವೀಣ್ ಸೂದ್ಗೆ ದೂರು ನೀಡಿದ್ದಾರೆ.
ಕೇಸರಿ ಧ್ವಜ ಹಾರಿಸಿದ್ದಕ್ಕೆ ರಾಷ್ಟ್ರಧ್ವಜ ಕೆಳಗಿಳಿಸಿದ ಪ್ರಕರಣ ಎಂದದ್ದರಿಂದ ಏನು ಸಾಧಿಸಲಾಗಿದೆ ಎಂದು ಅರ್ಥ ಆಗ್ತಿಲ್ಲ. ನಿನ್ನೆ ರಾಷ್ಟ್ರಧ್ವಜ ಅಲ್ಲಿ ಇತ್ತು ಎಂದು ಡಿಕೆಶಿ ಹೇಳಿದ್ದರು. ಹೀಗಾಗಿ ಎನ್‌ಎಸ್‌ಯುಐನವ್ರು ರಾಷ್ಟ್ರಧ್ವಜ ಹಾರಿಸಿದ್ದಾರೆ. ಹಿಂದೆ ನಿಂತು ಪ್ರಚೋದಿಸಿ ಅಶಾಂತಿ ಹರಡುವ ಕೆಲಸ ಆಗುತ್ತಿದೆ. ಡಿ.ಕೆ.ಶಿವಕುಮಾರ್ ಏನು ಬೇಕಾದ್ರೂ ಆರೋಪಿಸುತ್ತಾರೆ. ನಿನ್ನೆ ಕೊಟ್ಟ ಹೇಳಿಕೆಯನ್ನು ಟ್ವಿಸ್ಟ್ ಮಾಡಿ ಹೇಳಿದ್ದಾರೆ. ಮತಾಂಧ ಶಕ್ತಿಯನ್ನು ಅಪ್ರತ್ಯಕ್ಷವಾಗಿ ಬೆಂಬಲಿಸ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷ ದೇಶದಲ್ಲಿ ಕಳೆದು ಹೋಗಿದೆ. ಮತೀಯ ಶಕ್ತಿಗಳ ಜೊತೆ ಆಟವಾಡುವ ಕೆಲಸ ಬೇಡ ಎಂದು ಬುಧವಾರ ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದರು.
ಶಿವಮೊಗ್ಗದಲ್ಲಿ ಕೇಸರಿ ಧ್ವಜ ಹಾರಿಸಿದ್ದ ವಿಚಾರಕ್ಕೆ ಸಂಬಂಧಿಸಿ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದರು. ಇದೀಗ, ಡಿ.ಕೆ. ಶಿವಕುಮಾರ್ ವಿರುದ್ಧ ದೂರು ನೀಡಲಾಗಿದೆ. ಹಿಜಾಬ್- ಕೇಸರಿ ಶಾಲು ವಿವಾದಕ್ಕೆ ಅನ್ಯ ಪಕ್ಷಗಳು ಕಾರಣ ಎಂದು ಬಿಜೆಪಿ ಹಾಗೂ ಕಾಂಗ್ರೆಸ್ ಪರಸ್ಪರ ಆರೋಪ ಮಾಡಿಕೊಳ್ಳುತ್ತಿವೆ. ಈ ಮಧ್ಯೆ, ಕರ್ನಾಟಕದಲ್ಲಿ ಹಬ್ಬಿರುವ ಹಿಜಾಬ್ ವಿವಾದ ಪ್ರಕರಣ ಬುಧವಾರ ಹೈಕೋರ್ಟ್ನಿಂದ ವರ್ಗಾವಣೆಗೊಂಡಿದೆ. ಅಂತಿಮವಾಗಿ ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾಯಿಸಿ ಏಕಸದಸ್ಯ ಪೀಠ ಆದೇಶ ನೀಡಿದೆ.
ಇತ್ತ ಶಾಲಾ-ಕಾಲೇಜುಗಳಿಗೆ ರಜೆ ಮುಂದುವರಿಸುವ ವಿಚಾರವನ್ನು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಿ ತೀರ್ಮಾನ ಮಾಡಲಾಗುವುದು. ಸಿಎಂ, ನಾನು, ಶಿಕ್ಷಣ ಸಚಿವರು ಸೇರಿ ತೀರ್ಮಾನಿಸ್ತೇವೆ. ರಜೆ ಮುಂದುವರಿಸಬೇಕೆ, ಬೇಡವೇ ಎಂದು ತೀರ್ಮಾನ ಮಾಡುತ್ತೇವೆ. ಹೈಕೋರ್ಟ್ ಯಾವ ಆದೇಶ ನೀಡುತ್ತೆಂದೂ ನೋಡ್ತೇವೆ. ಬೆಂಗಳೂರಿನಲ್ಲಿ ಯಾವುದೇ ಸಮಸ್ಯೆ ಆಗಿಲ್ಲ. ಆದ್ರೂ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕಾಲೇಜು ಬಳಿ ಸೂಕ್ತ ಬಂದೋಬಸ್ತ್ ಮಾಡಲಾಗಿದೆ. ಹೆಚ್ಚಿನ ಭದ್ರತೆ ಹಿನ್ನೆಲೆ ರಾಜ್ಯದಲ್ಲಿ ಶಾಂತಿಯುತವಾಗಿದೆ ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ಹಿಜಾಬ್ ವಿವಾದ ಪ್ರಕರಣ ವರ್ಗಾವಣೆ: ಸರ್ಕಾರದ ಮಟ್ಟದಲ್ಲಿ ಸಭೆ ಬಳಿಕ ಮುಂದಿನ ನಿರ್ಧಾರ ಎಂದ ಆರಗ ಜ್ಞಾನೇಂದ್ರ
ಇದನ್ನೂ ಓದಿ: Karnataka Hijab Row: ಇತ್ಯರ್ಥವಾಗದ ಹಿಜಾಬ್ ಅರ್ಜಿ: ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಕರಣ ವರ್ಗಾವಣೆ
Published On - 6:16 pm, Wed, 9 February 22