AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ವಿವಾದ: ಇಂದು ಸಂಜೆ 7 ಗಂಟೆಗೆ ಉನ್ನತ ಸಭೆ ಕರೆ ಗೃಹ ಸಚಿವ, ನಾಳೆ ಸಚಿವ ಸಂಪುಟ ಸಭೆ ನಿಗದಿ, ವಿಸ್ತೃತ ಚರ್ಚೆ ಸಾಧ್ಯತೆ

ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಹ ಭಾಗಿಯಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಹಿಜಾಬ್ ವಿವಾದ: ಇಂದು ಸಂಜೆ 7 ಗಂಟೆಗೆ ಉನ್ನತ ಸಭೆ ಕರೆ ಗೃಹ ಸಚಿವ, ನಾಳೆ ಸಚಿವ ಸಂಪುಟ ಸಭೆ ನಿಗದಿ, ವಿಸ್ತೃತ ಚರ್ಚೆ ಸಾಧ್ಯತೆ
ಆರಗ ಜ್ಞಾನೇಂದ್ರ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Feb 08, 2022 | 6:07 PM

Share

ಬೆಂಗಳೂರು: ಕರ್ನಾಟಕದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಉನ್ನತ ಮಟ್ಟದ ಸಭೆ ಕರೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ನಿಗದಿಯಾಗಿರುವ ಸಭೆಯಲ್ಲಿ ಗೃಹ ಇಲಾಖೆ, ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಹ ಭಾಗಿಯಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಕರ್ನಾಟಕ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ನಾಳೆಗೆ (ಫೆ.9) ನಿಗದಿಯಾಗಿದೆ. ವಿಧಾನಸೌಧದಲ್ಲಿ ನಡೆಯಲಿರುವ ಸಭೆಯಲ್ಲಿ ಹಿಜಾಬ್‌ ಮತ್ತು ಕೇಸರಿ ಶಾಲು ವಿವಾದದ ಬಗ್ಗೆ ಮಹತ್ವದ ಚರ್ಚೆ ನಡೆಯುವ ಸಾಧ್ಯತೆಯಿದೆ. ವಿವಿಧ ಜಿಲ್ಲೆಗಳ ಪರಿಸ್ಥಿತಿ ಕುರಿತು ಮುಖ್ಯಮಂತ್ರಿಗಳು ಸಚಿವರೊಂದಿಗೆ ಚರ್ಚೆ ನಡೆಸಿ, ಮಾಹಿತಿ ಪಡೆದುಕೊಳ್ಳಲಿದ್ದಾರೆ. ಹಲವು ಜಿಲ್ಲೆಗಳ ಉಸ್ತುವಾರಿ ಸಚಿವರಿಂದ ಮುಖ್ಯಮಂತ್ರಿ ಈಗಾಗಲೇ ಮಾಹಿತಿ ಸಂಗ್ರಹಿಸಿದ್ದಾರೆ. ರಾಜ್ಯದಲ್ಲಿ ಶಾಂತಿ ಕಾಪಾಡಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ.

ರಬಕವಿಯಲ್ಲಿ ಕಲ್ಲು ತೂರಾಟ: ಶಿಕ್ಷಕ, ವಿದ್ಯಾರ್ಥಿಗಳಿಗೆ ಗಾಯ ಬಾಗಲಕೋಟೆ: ಹಿಜಾಬ್, ಕೇಸರಿ ಶಾಲು ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆದಿದ್ದು ನಾಲ್ವರು ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ಪಟ್ಟಣದಲ್ಲಿ ನಡೆದಿದೆ. ಕಲ್ಲುತೂರಾಟದಲ್ಲಿ ರಸ್ತೆ ದಾಟುತ್ತಿದ್ದ ಶಿಕ್ಷಕ ಮಂಜುನಾಥ ನಾಯಕ್ ಅವರಿಗೆ ಗಾಯಗಳಾಗಿವೆ. ಮಂಜುನಾಥ ನಾಯಕ ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆ ನಡೆಸಲಾಗಿದೆ. ಇವರು ಮೂಲತಃ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲ್ಲೂಕಿನವರು.

ಇದನ್ನೂ ಓದಿ: Karnataka Hijab Row: ಇತ್ಯರ್ಥವಾಗದ ವಿವಾದ; ಹಿಜಾಬ್ ವಿಚಾರಣೆ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿದ ಹೈಕೋರ್ಟ್

ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಹಿಜಾಬ್ ವಿವಾದವನ್ನು ಸೃಷ್ಟಿಸಿ ಬಿಜೆಪಿ ತಲೆ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದೆ: ಕೆ ಎಸ್ ಈಶ್ವರಪ್ಪ

Published On - 6:06 pm, Tue, 8 February 22

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ