Hijab Verdict: ಹಿಜಾಬ್ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ತಮಿಳುನಾಡಿನ ತೌಹೀದ್ ಜಮಾತ್​ನಿಂದ ಬೆದರಿಕೆ

Karnataka High Court Justice: ಗಿರೀಶ್ ಭಾರದ್ವಾಜ್ ಎಂಬುವರಿಂದ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಿಗೆ ಅರ್ಜಿ ಸಲ್ಲಿಸಲಾಗಿದೆ. ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲು ಮನವಿ ಮಾಡಲಾಗಿದೆ. ಈ ಮಧ್ಯೆ ಪಿಎಫ್ಐ ಮತ್ತು ನಟ ಚೇತನ್ ವಿರುದ್ಧವೂ ಕ್ರಮಕ್ಕೆ ಮನವಿ ಮಾಡಿದ್ದಾರೆ.

Hijab Verdict: ಹಿಜಾಬ್ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ತಮಿಳುನಾಡಿನ ತೌಹೀದ್ ಜಮಾತ್​ನಿಂದ ಬೆದರಿಕೆ
ಹಿಜಾಬ್ ತೀರ್ಪು ನೀಡಿದ ನ್ಯಾಯಮೂರ್ತಿಗಳು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Mar 19, 2022 | 4:32 PM

ಬೆಂಗಳೂರು: ಹಿಜಾಬ್ ವಿಚಾರದಲ್ಲಿ ಇತ್ತೀಚೆಗೆ ಮಹತ್ವದ ತೀರ್ಪು (Hijab Verdict) ನೀಡಿದ ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ (Karnataka High Court Justice) ಬೆದರಿಕೆ ಒಡ್ಡಲಾಗಿದೆ. ತಮಿಳುನಾಡಿನ ತೌಹೀದ್ ಜಮಾತ್ ನಿಂದ ಬೆದರಿಕೆ ಆರೋಪ ಕೇಳಿಬಂದಿದೆ. ಇದೀಗ ತೌಹೀದ್ ಜಮಾತ್ ಸಂಘಟನೆಯ ರೆಹಮತುಲ್ಲಾ ವಿರುದ್ಧ ಕ್ರಮ ಕೋರಿ ಅರ್ಜಿ ಸಲ್ಲಿಸಲಾಗಿದೆ. ಗಿರೀಶ್ ಭಾರದ್ವಾಜ್ ಎಂಬುವರಿಂದ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಿಗೆ ಅರ್ಜಿ ಸಲ್ಲಿಸಲಾಗಿದೆ. ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲು ಮನವಿ ಮಾಡಲಾಗಿದೆ. ಈ ಮಧ್ಯೆ ಪಿಎಫ್ಐ ಮತ್ತು ನಟ ಚೇತನ್ ವಿರುದ್ಧವೂ ಕ್ರಮಕ್ಕೆ ಮನವಿ ಮಾಡಿದ್ದಾರೆ. ಗಮನಾರ್ಹವೆಂದರೆ ಹಿಜಾಬ್  ತೀರ್ಪು ನೀಡಿದ ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ತೀರ್ಪು ನೀಡುವ ಸಂದರ್ಭದಲ್ಲಿ ಬೆಂಗಳೂರು ಪೊಲೀಸರು ಅವರ ನಿವಾಸಕ್ಕೆ ಹೆಚ್ಚಿನ ಭದ್ರತೆ ಕಲ್ಪಿಸಿದ್ದಾರೆ.

ಹೈಕೋರ್ಟ್ ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್​ ಅವರ ಪೂರ್ಣ ಪೀಠ ಹಿಜಾಬ್ ತೀರ್ಪು ನೀಡಿದೆ. ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ. ಹಿಜಾಬ್​ ಧಾರಣೆ ಕಡ್ಡಾಯವಲ್ಲ. ಈ ಸಂಬಂಧ ರಾಜ್ಯ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ. ಉಡುಪಿ ಕಾಲೇಜಿಗೆ ನಿರ್ದೇಶನ ಹೇರುವ ಅಗತ್ಯವಿಲ್ಲ ಅಂತ ಕೋರ್ಟ್​ ತನ್ನತೀರ್ಪಿನಲ್ಲಿ ತಿಳಿಸಿದೆ.

Hijab Row ಹಿಜಾಬ್ ಪ್ರಕರಣದಲ್ಲಿ ನಮ್ಮ ಮನವಿ ಆಲಿಸಿ; ಸುಪ್ರೀಂಕೋರ್ಟ್​​ಗೆ ಕೇವಿಯಟ್ ಅರ್ಜಿ ಸಲ್ಲಿಸಿದ ಹಿಂದೂ ಸೇನಾ ಹಿಜಾಬ್ ವಿವಾದಕ್ಕೆ (Hijab Row) ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಹಿಜಾಬ್ ಇಸ್ಲಾಂ ಧರ್ಮದ ಅವಿಭಾಜ್ಯ ಭಾಗವಲ್ಲ ಎಂದು ತೀರ್ಪು ನೀಡಿದೆ. ಈ ತೀರ್ಪು ಪ್ರಶ್ನಿಸಿ ನಿಬಾ ನಾಜ್ ಎಂಬ ವಿದ್ಯಾರ್ಥಿನಿ ಸುಪ್ರೀಂ ಕೋರ್ಟ್ (Supreme Court) ಮೆಟ್ಟಿಲೇರಿದ್ದಾರೆ. ಅದೇ ವೇಳೆ ಹಿಂದೂ ಸೇನಾದ ಅಧ್ಯಕ್ಷ ಸುರ್ಜಿತ್ ಯಾದವ್ ಅವರು ಸುಪ್ರೀಂಕೋರ್ಟ್‌ನಲ್ಲಿ ಕೇವಿಯಟ್ ಅರ್ಜಿ ಸಲ್ಲಿಸಿದ್ದಾರೆ. ಉಚ್ಚ ನ್ಯಾಯಾಲಯವು ಯಾವುದೇ ಆದೇಶವನ್ನು ನೀಡುವ ಮೊದಲು ತನ್ನ ಮನವಿಯನ್ನು ಆಲಿಸಬೇಕು ಎಂದು ಹಿಂದೂ ಸೇನಾ ಹೇಳಿದೆ.

ಹಿಂದೂ ಸೇನೆಯ ಉಪಾಧ್ಯಕ್ಷ ಸುರ್ಜಿತ್ ಸಿಂಗ್ ಯಾದವ್ ಅವರು ವಕೀಲ ಅರುಣ್ ಸಿನ್ಹಾ ಮೂಲಕ ಈ ಕೇವಿಯಟ್ ಸಲ್ಲಿಸಿದ್ದಾರೆ. (ಮಾರ್ಚ್​ 15) ಕರ್ನಾಟಕ ಹೈಕೋರ್ಟ್​ನ (Karnataka High Court) ಪೂರ್ಣ ಪೀಠ ಮಹತ್ವದ ತೀರ್ಪು ನೀಡಿದೆ. ಪ್ರತಿ ಪುಟಕ್ಕೂ ಸಹಿ ಹಾಕಿ ಹೇಳಿಕೆ ನೀಡಿದ ಮುಖ್ಯ ನ್ಯಾಯಮೂರ್ತಿ ಸಿಜೆ ರಿತುರಾಜ್ ಅವಸ್ತಿ, ಕೆಲವು ಪ್ರಶ್ನೆಗಳನ್ನು ರಚಿಸಿದ್ದೇವೆ. ಅವುಗಳಿಗೆ ಉತ್ತರವನ್ನೂ ನೀಡಿದ್ದೇವೆ. ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ. ಸಮವಸ್ತ್ರ ನಿಗದಿಪಡಿಸುವುದು ಸೂಕ್ತವಾದ ನಿರ್ಬಂಧನೆ. ಸರ್ಕಾರದ ಆದೇಶ ಕಾನೂನುಬದ್ದವಾಗಿದೆ ಎಂದಿದ್ದಾರೆ

ಉಡುಪಿಯಿಂದ ಶುರುವಾಗಿದ್ದ ಹಿಜಾಬ್ ಗಲಾಟೆ ಇಡೀ ವಿಶ್ವಕ್ಕೆ ವ್ಯಾಪಿಸಿತ್ತು. ಮುಸ್ಲಿಂ ಸಮುದಾಯದ ಕೆಲ ವಿದ್ಯಾರ್ಥಿನಿಯರು ಹಿಜಾಬ್ ನಮ್ಮ ಹಕ್ಕು, ನಾವು ಧರಿಸಿಯೇ ಶಾಲೆ- ಕಾಲೇಜಿಗೆ ಬರುತ್ತೇವೆ ಎಂದು ಪ್ರತಿಭಟನೆ ನಡೆಸಿದ್ದರು. ಜೊತೆಗೆ ಹಿಜಾಬ್ ಧರಿಸುವವರೆಗೆ ಕೇಸರಿ ಶಾಲು ಧರಿಸುತ್ತೇವೆ ಅಂತ ಹಲವು ಹಿಂದೂ ವಿದ್ಯಾರ್ಥಿಗಳು ಪಟ್ಟು ಬಿದ್ದಿದ್ದರು.

Also read: ಹಿಜಾಬ್ ವಿಚಾರದಲ್ಲಿ ಹೋರಾಟ ಮಾಡುವುದು ಸರಿಯಲ್ಲ; ಪದ್ಮಶ್ರೀ ಪ್ರಶಸ್ತಿ ವಿಜೇತ ಅಬ್ದುಲ್ ಖಾದರ್ ಹೇಳಿಕೆ

Also read: ಹಿಜಾಬ್ ವಿಷಯದಲ್ಲಿ ಸಿದ್ದರಾಮಯ್ಯ ಸಾರ್ವಜನಿಕ ಮತ್ತು ಶೈಕ್ಷಣಿಕ ವಾತಾವರಣನ್ನು ಹಾಳುಮಾಡುತ್ತಿದ್ದಾರೆ: ಸಿಟಿ ರವಿ

Published On - 4:13 pm, Sat, 19 March 22

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ