AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರವೇ ನಾರಾಯಣ ಗೌಡಗೆ ನಿಂದನೆ; ರಾಜ್ಯಾದ್ಯಂತ ಕಿಡಿಗೇಡಿಗಳ ವಿರುದ್ಧ ಕೇಸ್ ಬುಕ್, ಆಗಿದ್ದೇನು?

ಕನ್ನಡ-ಹಿಂದಿ ಭಾಷಾ ಸಂಘರ್ಷದಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ ಮತ್ತು ಅವಹೇಳನ ಮಾಡಲಾಗಿದೆ. ಹಿಂದಿ ಹೇರಿಕೆ ವಿರೋಧಿ ಹೋರಾಟದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ಕರವೇ ಕಾರ್ಯಕರ್ತರು ಕಿಡಿಗೇಡಿಗಳ ವಿರುದ್ಧ ಕಾನೂನು ಮೊರೆ ಹೋಗಿದ್ದು, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

ಕರವೇ ನಾರಾಯಣ ಗೌಡಗೆ ನಿಂದನೆ; ರಾಜ್ಯಾದ್ಯಂತ ಕಿಡಿಗೇಡಿಗಳ ವಿರುದ್ಧ ಕೇಸ್ ಬುಕ್, ಆಗಿದ್ದೇನು?
ನಾರಾಯಣ ಗೌಡImage Credit source: google
ಪ್ರದೀಪ್​ ಚಿಕ್ಕಾಟಿ
| Edited By: |

Updated on: Apr 22, 2026 | 10:24 PM

Share

ಬೆಂಗಳೂರು, ಏಪ್ರಿಲ್​ 22: ಕನ್ನಡ ಮತ್ತು ಹಿಂದಿ ಭಾಷಾ (Kannada-Hindi Conflict) ಯುದ್ಧದಲ್ಲಿ ಕನ್ನಡ ಹೋರಾಟಗಾರರ ಬಗ್ಗೆ ಅವಹೇಳನ ಮಾಡಲಾಗುತ್ತಿದೆ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ (Narayana Gowda) ವಿರುದ್ಧ ನೇರವಾಗಿಯೇ ಕಿಡಿಗೇಡಿಗಳು ಕೆಟ್ಟ ಪದಗಳಿಂದ ನಿಂದಿಸಿದ್ದಾರೆ. ಈ ಬಗ್ಗೆ ಕರವೇ ಪಡೆ ಕಾನೂನಿನ ಮೊರೆ ಹೋಗಿದ್ದು, ಅನೇಕ ಕಡೆ ಕೇಸ್ ದಾಖಲಾಗಿವೆ.

ಕನ್ನಡ ನಾಡು, ನುಡಿ, ಜಲದ ಹೋರಾಟಗಳಲ್ಲಿ ಕರವೇ ಸಂಘಟನೆ ಸದಾ ಮುಂಚೂಣಿಯಲ್ಲಿರುತ್ತೆ.‌ ಇತ್ತೀಚೆಗೆ ನಡೆಯುತ್ತಿರುವ ಕನ್ನಡ- ಹಿಂದಿ ಭಾಷಾ ಯುದ್ಧದಲ್ಲೂ ಕರವೇ ನಾರಾಯಣ ಗೌಡ ಹಿಂದಿ ಏರಿಕೆ ವಿರುದ್ಧ ಹರಿಹಾಯ್ದಿದ್ದರು. ಆದರೆ ಕೆಲ ಹಿಂದಿ ಪ್ರೇಮಿಗಳು ಇಷ್ಟಕ್ಕೆ ನಾರಾಯಣ ಗೌಡ ಮೇಲೆ‌ ಮುಗಿಬಿದ್ದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಟೀಕೆ ಮಾಡಿದ್ದಾರೆ.

ಇದನ್ನೂ ಓದಿ: SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಎಸ್​​​ಎಸ್​​ಎಲ್​​ಸಿ ಪರೀಕ್ಷೆಯಲ್ಲಿ ಹಿಂದಿಗೆ ಅಂಕ ಬದಲು ಗ್ರೇಡ್ ನೀಡುವ ಬಗ್ಗೆ ಕರವೇ ನಾರಾಯಣ ಗೌಡ ಮಾತಾಡಿದ್ದರು. ಹೀಗಾಗಿ ಸುಭಾಷ್ ಮಾಲೀ ಎಂಬಾತ ಫೇಸ್ ಬುಕ್​​ನಲ್ಲಿ ನಾರಾಯಣ ಗೌಡ ಬಗ್ಗೆ ಅವಹೇಳನವಾಗಿ ಬರೆದುಕೊಂಡಿದ್ದ. ಇದು ಮಹೇಶ್ ವಿಕ್ರಮ ಹೆಗ್ಡೆ ಎಂಬಾತನ ಪೇಜ್​​ನಲ್ಲೂ ಪೋಸ್ಟ್ ಆಗಿತ್ತು. ಹೀಗಾಗಿ ಕರವೇ ಕಾರ್ಯಕರ್ತರು ಕಿಡಿಗೇಡಿಗಳ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ, ಉಪ್ಪಾರಪೇಟೆ ಸೇರಿದಂತೆ ಅನೇಕ ಜಿಲ್ಲೆಗಳಲ್ಲೂ ದೂರು ನೀಡಿದ್ದಾರೆ.

ಇಂತಹ ಕೆಲಸಕ್ಕೆ ನಾವು ಬಗ್ಗಲ್ಲ ಎಂದ ನಾರಾಯಣ ಗೌಡ 

ಇನ್ನು ಈ ಬಗ್ಗೆ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಮಾತನಾಡಿದ್ದು, ಇಂತಹ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸಕ್ಕೆ ನಾವು ಬಗ್ಗಲ್ಲ. ನಾವು ಕಾನೂನು ಬಿಟ್ಟು ಹೋಗಲ್ಲ. ಪೊಲೀಸರು ಬೇಗ ಕ್ರಮಕೈಗೊಳ್ಳಬೇಕು ಅಂತ ಆಗ್ರಹಿಸಿದ್ದಾರೆ.

ಇದನ್ನೂ ಓದಿ: SSLC ಹಿಂದಿ ಪರೀಕ್ಷೆ ಕೇಂದ್ರಗಳಿಗೆ ಕನ್ನಡ ಸಂಘಟನೆಗಳಿಂದ ಮುತ್ತಿಗೆ ಎಚ್ಚರಿಕೆ: ಪೊಲೀಸ್ ಮೊರೆ ಹೋದ ಶಿಕ್ಷಣ ಇಲಾಖೆ

ಕರವೇ ಆರೋಪಕ್ಕೆ ಫೇಸ್ ಬುಕ್​ನಲ್ಲೇ ಪ್ರತಿಕ್ರಿಯಿಸಿದ್ದ ಮಹೇಶ್ ಹೆಗ್ಡೆ ಎಂಬಾತ ತಾನು ಯಾವುದೇ ಪೋಸ್ಟ್ ಮಾಡಿಲ್ಲ, ತನ್ನ ಹೆಸರಿನ ಪೇಜ್​​ನಲ್ಲಿ ಪೋಸ್ಟ್​​ ಆಗಿದೆ ಎಂದಿದ್ದಾನೆ. ಸದ್ಯ ಅವಹೇಳನ ಮತ್ತು ಬೆದರಿಕೆ ಬಗ್ಗೆ ಅನೇಕ ಪೊಲೀಸ್ ಠಾಣೆಗಳಲ್ಲಿ ಕೇಸ್​​ಗಳು ದಾಖಲಾಗಿದ್ದು, ಮುಂದೇನಾಗುತ್ತೆ ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು