ಬೆಂಗಳೂರಿಗೆ ನಾಯಿ ಮಾಂಸ ಸರಬರಾಜು ಆಗುತ್ತಿದೆಯಾ? ರಾಜಸ್ಥಾನದಿಂದ ಬಂದ ಮಾಂಸದ ಬಾಕ್ಸ್​ಗೆ ತಡೆ

ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಿರುವ ರಾಜಸ್ಥಾನದಿಂದ ಸಿಲಿಕಾನ್ ಸಿಟಿ ಬೆಂಗಳೂರಿಗೆ ಸರಬರಾಜು ಆಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ರಾಜಸ್ಥಾನದಿಂದ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬಂದ ಮಾಂಸದ ಬಾಕ್ಸ್​ಗಳನ್ನು ಹಿಂದೂಪರ ಸಂಘಟನೆ ಕಾರ್ಯಕರ್ತರು ತಡೆ ಹಿಡಿದಿದ್ದಾರೆ. ಈ ಹಿಲ್ಲೆಯಲ್ಲಿ ರೈಲ್ವೆ ಸ್ಟೇಷನ್​ನಲ್ಲಿ ದೊಡ್ಡ ಗಲಾಟೆಯಾಗಿದೆ.

ಬೆಂಗಳೂರಿಗೆ ನಾಯಿ ಮಾಂಸ ಸರಬರಾಜು ಆಗುತ್ತಿದೆಯಾ? ರಾಜಸ್ಥಾನದಿಂದ ಬಂದ ಮಾಂಸದ ಬಾಕ್ಸ್​ಗೆ ತಡೆ
ಮಾಂಸ ಬಾಕ್ಸ್​ ತಡೆದ ಪುನೀತ್ ತಂಡ
Follow us
ರಮೇಶ್ ಬಿ. ಜವಳಗೇರಾ
|

Updated on:Jul 26, 2024 | 11:03 PM

ಬೆಂಗಳೂರು, (ಜುಲೈ 26): ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಇಂದು (ಜುಲೈ 26) ರಾಜಸ್ಥಾನದಿಂದ ಬಂದ ಮಟನ್​ ಮಾಂಸದ ಬಾಕ್ಸ್​ಗಳನ್ನು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರು ತಡೆ ಹಿಡಿದಿದ್ದಾರೆ. ಪ್ರತಿನಿತ್ಯ ವಿವಿಧ ರಾಜ್ಯಗಳಿಂದ ಬೆಂಗಳೂರಿಗೆ ಬರುವ ರೈಲುಗಳಲ್ಲಿ ಅಕ್ರಮವಾಗಿ ಮಾಂಸ ಸರಬರಾಜು ಆಗುತ್ತಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು, ಇಂದು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದು, ಜೈಪುರ ರೈಲು ಬಂದಾಕ್ಷಣ ದಾಳಿ ಮಾಡಿ ಮಾಂಸದ ಬಾಕ್ಸ್​ಗಳನ್ನು ತಡೆಹಿಡಿದಿದ್ದಾರೆ.

ಹಿಂದೂಪರ ಸಂಘಟನೆಯ ಪುನೀತ್ ಕೆರೆಹಳ್ಳಿ ನೇತೃತ್ವದ ತಂಡ ಜೈಪುರ ರೈಲಿನ ಮೇಲೆ ದಾಳಿ ಮಾಡಿದ್ದು, ಮಟನ್ ಮಾಂಸವನ್ನು ಎತ್ತಿ ನೋಡಿದ್ದಾರೆ. ಇದರಲ್ಲಿ ನಾಯಿ ಮಾಂಸ ಇದೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಅಬ್ದುಲ್ ರಜಾಕ್ ಮತ್ತು ಪುನೀತ್ ಕೆರೆಹಳ್ಳಿ ಮಧ್ಯೆ ವಾಗ್ವಾದ ನಡೆದಿದೆ.

ಇನ್ನು ಜೈಪುರ ರೈಲಿನಲ್ಲಿ ಬೆಂಗಳೂರಿಗೆ ಒಟ್ಟು 90 ಮಾಂಸದ ಬಾಕ್ಸ್‌ಗಳು ಪಾರ್ಸಲ್‌ ಬಂದಿವೆ. ಅದರಲ್ಲಿ ಒಟ್ಟು 4,500 ಕೆ.ಜಿ. ಮಾಂಸವಿದೆ. ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಅವರು ಕಡಿಮೆ ಬೆಲೆಗೆ ರಾಜಸ್ಥಾನದಿಂದ ಮಾಂಸ ತರಿಸಿಕೊಂಡು ಹೆಚ್ಚಿ ದರಕ್ಕೆ ಬೆಂಗಳೂರಿನ ಹಲವು ಹೋಟೆಲ್​ಗಳಿಗೆ ಸರಬರಾಜು ಮಾಡುತ್ತಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಆ್ಯಪ್​ಗಳನ್ನ ನಂಬಿ ಹಣ ಹಾಕೋರು ಈ ಸ್ಟೋರಿ ಮಿಸ್ ಮಾಡದೇ ಓದಿ

ಪುನೀತ್ ಕೆರೆಹಳ್ಳಿ ಆರೋಪವೇನು?

ಇನ್ನೂ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್‌ ಕೆರೆಹಳ್ಳಿ, ಜೈಪುರದಿಂದ ಫಿಶ್ ಮಾಂಸ ಅಂತ ಹೇಳಿ ಬೇರೆ ಮಾಂಸ ತಂದಿದ್ದಾರೆ. ಬೇರೆ ಮಾಂಸದ ಜೊತೆ ನಾಯಿ ಮಾಂಸವನ್ನೂ ತಂದಿದ್ದಾರೆ. ಇದು ರಸಲ್ ಮಾರ್ಕೆಟ್‌ಗೆ ಇದು ಹೋಗುತ್ತೆ. ಮೀನು ಎಂದು ಬೋರ್ಡ್ ಹಾಕಿಕೊಂಡು ಮಾಂಸ ಸಾಗಾಟ ಮಾಡ್ತಿದ್ದಾರೆ. ಮೀನು ತಂದಿದ್ದರೇ ಮೀನು ಅಂತಾ ಬೋರ್ಡ್‌ ಇರಬೇಕಿತ್ತು. ಮಾಂಸ ತಂದು ಅದಕ್ಕೆ ಮೀನು ಎಂದು ಏಕೆ ಬೋರ್ಡ್‌ ಹಾಕಿದ್ದಾರೆ. ನಾಯಿ ಮಾಂಸವೇ ಇರಬೇಕು ಅನ್ನೋ ಅನುಮಾನವಿದೆ. ಬಿಬಿಎಂಪಿ ಅಧಿಕಾರಿಗಳು ಬರಬೇಕು. ಇಲ್ಲೇ ಮಾಂಸ ಸೀಜ್ ಮಾಡಬೇಕು. ಯಾವ ಮಾಂಸ ಅಂತಾ ಗೊತ್ತಾಗಬೇಕು. ಕನಿಷ್ಠ 4 ದಿನದ ಹಿಂದೆ ಕಟ್ ಮಾಡಿರುವ ಮಾಂಸವಿದು. ಇದನ್ನ ಐಸ್ ಬಾಕ್ಸ್‌ನಲ್ಲಿ ತಂದಿರುವುದಕ್ಕೆ ಅನುಮತಿ ಇದೆಯಾ? ಇದರ ಬಗ್ಗೆ ಅನುಮಾನ ಇದೆ ಎಂದು ಆರೋಪಿಸಿದರು.

ಅಬ್ದುಲ್ ರಜಾಕ್​ ಹೇಳುವುದೇನು?

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಅಬ್ದುಲ್ ರಜಾಕ್, ಪುನೀತ್ ಕೆರೆಹಳ್ಳಿ ರೋಲ್ ಕಾಲ್ ಮಾಡಲು ಬಂದಿದ್ದ. ರೋಲ್​ಕಾಲ್​ಗೆ ಅವಕಾಶ ಕೊಟ್ಟಿಲ್ಲ ಎಂದು ಕುರಿ ಮಾಂಸದ ಜತೆ ನಾಯಿ ಮಾಂಸ ಬೆರೆಸಿದ ಆರೋಪ ಮಾಡಿದ್ದಾನೆ. ಇದು ಅಕ್ರಮ ಬ್ಯುಸಿನೆಸ್ ಅಲ್ಲ. ನಮ್ಮ ಬಳಿ ಎಲ್ಲ ಸರ್ಟಿಫಿಕೇಟ್ ಇದೆ. ಎಲ್ಲ ಬಾಕ್ಸ್​ಗಳಲ್ಲಿ ಕುರಿ ಮಾಂಸ ಮಾತ್ರವಿದೆ. ನಾವು 12 ವರ್ಷದಿಂದ ಈ ಬ್ಯುಸಿನೆಸ್ ಮಾಡುತ್ತಿದ್ದೇವೆ. ಅವರೇ ಬಾಕ್ಸ್ ತೆರೆದಿದ್ದಾರೆ, ಕುರಿ ಮಾಂಸ ನೋಡಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಸ್ಥಳಕ್ಕೆ ಬಂದ ಬಿಬಿಎಂಪಿ ಆರೋಗ್ಯ ಅಧಿಕಾರಿ ದೌಡು

ಇನ್ನು ಜೈಪುರಿಂದ ಬಂದ ಮಾಂಸದ ಬಗ್ಗೆ ವಾಗ್ದಾದ ನಡೆದಿರುವ ಮಧ್ಯ ವಿಷಯ ತಿಳಿದು ಸ್ಥಳಕ್ಕೆ ಬಿಬಿಎಂಪಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಅಧಿಕಾರಿಯಾಗಿ ದೌಡಾಯಿಸಿದ್ದು, ಸ್ಥಳೀಯ ಪೊಲೀಸರೊಂದಿಗೆ ಸೇರಿ ಮಾಂಸದ ಬಾಕ್ಸ್ ಗಳನ್ನು ಓಪನ್ ಮಾಡಿ ಪರಿಶೀಲನೆ ಮಾಡಿದ್ದಾರೆ. ಗುಣಮಟ್ಡ ಹಾಗೂ ಮಾಂಸ ದೃಢೀಕರಣಕ್ಕಾಗಿ ಸ್ಯಾಂಪಲ್ ಪಡೆದುಕೊಂಡಿದ್ದಾರೆ.

ಈ ವೇಳೆ ಮಾತನಾಡಿದ ಬಿಬಿಎಂಪಿ ಆಹಾರ ಸುರಕ್ಷತೆ ಅಧಿಕಾರಿ ಸುಬ್ರಮಣ್ಯ, ನಾವು ಒಟ್ಟು ನಾಲ್ಕು ಬಾಕ್ಸ್ ಗಳಿಂದ ಸ್ಯಾಂಪಲ್ ಕಲೆಕ್ಟ್ ಮಾಡಿದ್ದೇವೆ. ವಿವಿಧ ಭಾಗಗಳಿಂದ ಮಾಂಸವನ್ನು ಸ್ಯಾಂಪಲ್‌ ಆಗಿ ಪಡೆದಿದ್ದೇವೆ. ಇದನ್ನು ಲ್ಯಾಬ್ ಗೆ ರವಾನಿಸಿ ಪರೀಕ್ಷಿಸಲಾಗುತ್ತೆ. ಇದರ ವರದಿ ಬರುವುದಕ್ಕೆ 14 ದಿನಗಳ ಕಾಲವಕಾಶ ಬೇಕು. ಮೇಲ್ನೋಟಕ್ಕೆ ನೋಡಿ ಇದು ಯಾವ ಮಾಂಸ ಎಂದು ಹೇಳಲಾಗುವುದಿಲ್ಲ. ಈ ಮಾಂಸದ ಗುಣಮಟ್ಟ ಹಾಗೂ ಯಾವುದರ ಮಾಂಸ ಎಂಬ ದೃಢೀಕರಣ ಟೆಸ್ಟಿಂಗ್ ನಲ್ಲಿ ಗೊತ್ತಾಗುತ್ತೆ. ಒಂದು ವೇಳೆ ಇದು ದೂರುದಾರರ ದೂರಿನಂತೆ ನಾಯಿ ಮಾಂಸ ಆಗಿದ್ದರೆ ಮಾಲೀಕ‌ನ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಕುರಿ ಮಾಂಸವೇ ಆಗಿದ್ದರೆ ದೂರುದಾರನ ಮೇಲೆ ಕ್ರಮ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶ ಇದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:46 pm, Fri, 26 July 24

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್