ಬೆಂಗಳೂರು: ಚುನಾವಣಾ ಪೂರ್ವದಲ್ಲಿ ನೀಡಿದ ಐದು ಗ್ಯಾರಂಟಿ (5 Guarantee) ಘೋಷಣಿಗಳನ್ನು ಜಾರಿಗೆ ತರುವ ಪ್ರಯತ್ನದಲ್ಲಿರುವ ಕಾಂಗ್ರೆಸ್ (Congress) ಸರ್ಕಾರ, ಇದೀಗ ಬಿಜೆಪಿ (BJP) ಆಡಳಿತಾವಧಿಯಲ್ಲಿ ಜಾರಿಗೊಳಿಸಿದ್ದ ಮಹತ್ವದ ಕಾಯ್ದೆಗಳನ್ನು ರದ್ದುಪಡಿಸಲು ಮುಂದಾಗಿದೆ. ನಿನ್ನೆ (ಜೂ.15) ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಈ ನಿರ್ಧಾರ ಕೈಗೊಳ್ಳಲಾಗಿತ್ತು. ಇದನ್ನು ಖಂಡಿಸಿ ಇಂದು (ಜೂ.17) ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಸಿದ್ದರಾಮಯ್ಯ ಸಿದ್ರಾಮುಲ್ಲಾ ಖಾನ್, ಡಿ.ಕೆ.ಶಿವಕುಮಾರ್ ಏಸು ಕುಮಾರ್’ ಡಿಸಿಎಂ ಡಿ.ಕೆ.ಶಿವಕುಮಾರ್ ಸೋನಿಯಾ ಗಾಂಧಿ ಮಾನಸ ಪುತ್ರನಿದ್ದಂತೆ. ಇವರೆಲ್ಲ ಸೇರಿ ಮತಾಂತರ, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ಗೆ ಹೊರಟಿದ್ದಾರೆ. ಕಾಂಗ್ರೆಸ್ ಸರ್ಕಾರದ ನಡೆ ಇಡೀ ರಾಜ್ಯ, ದೇಶಕ್ಕೆ ಮಾರಕವಾಗಲಿದೆ. ರಾಜ್ಯ ಸರ್ಕಾರ ಕೂಡಲೇ ನಿರ್ಧಾರದಿಂದ ಹಿಂದೆ ಸರಿಯಲಿ ಎಂದು ಹಿಂದೂ ಪರ ಸಂಘಟನೆಗಳು ಆಗ್ರಹಿಸಿವೆ.
ಇದನ್ನೂ ಓದಿ: ಪಠ್ಯ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದೇಕೆ? ತಜ್ಞರು ಕೊಟ್ಟ ಕಾರಣವೇನು? ಇಲ್ಲಿದೆ ವಿವರ
ಇನ್ನು ಹಿಂದಿನ ಸರ್ಕಾರ ಅವಧಿಯಲ್ಲಿ ಮಾಡಿದ್ದ ಪಠ್ಯ ಪರಿಷ್ಕರಣೆಯಲ್ಲಿ ಬಹುಪಾಲು ಅಂಶಗಳನ್ನು ಕೈಬಿಡಲು ಸಂಪುಟ ಸಭೆ ನಿರ್ಧರಿಸಿದ್ದು, ಇದಕ್ಕೂ ಕೂಡ ಹಿಂದೂ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಸಾವರ್ಕರ್ ದೇಶದ್ರೋಹಿಯಲ್ಲ, ಭಯೋತ್ಪಾದಕರಲ್ಲ, ಅಪ್ಪಟ ದೇಶಭಕ್ತ. ಗ್ಯಾರಂಟಿ ನೀಡಿ ಮೋಡಿ ಮಾಡಿ ಅಧಿಕಾರಕ್ಕೆ ಬಂದಿರುವ ಡೋಂಗಿ ಸರ್ಕಾರ. ರಾಜ್ಯ ಕಾಂಗ್ರೆಸ್ ಡೋಂಗಿ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದ್ದಾರೆ.
ಅಲ್ಪಸಂಖ್ಯಾತರನ್ನು ಓಲೈಸಲು ಗೋಹತ್ಯೆ ನಿಷೇಧ ಕಾನೂನು ಹಿಂಪಡೆಯಲು ಹೊರಟಿರುವ ಸರ್ಕಾರಕ್ಕೆ ಧಿಕ್ಕಾರ. ಯಾವುದೇ ಕಾರಣಕ್ಕೂ ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ಮಾಡಬಾರದು. ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಫ್ರೀಡಂಪಾರ್ಕ್ನಲ್ಲಿ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಕಿಡಿಕಾರಿದ್ದಾರೆ.
ಇನ್ನು ಗುರುವಾರ (ಜೂ.15) ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಬಲವಂತದ ಮತಾಂತರ ನಿಷೇಧ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಪಠ್ಯಪುಸ್ತಕ ಪರಿಷ್ಕರಣಿಯನ್ನು ಕೈಬಿಡುವ ನಿರ್ಣಯ ಕೈಗೊಳ್ಳಲಾಗಿತ್ತು.
ಆರ್ಎಸ್ಎಸ್ ಸ್ಥಾಪಕ ಹೆಡ್ಗೆವಾರ್ ಭಾಷಣದ ಅಂಶವಿದ್ದ ಆದರ್ಶ ಪುರುಷ ಯಾರಾಗಬೇಕು?’ ವೀರ ಸಾವರ್ಕರ್ ಕುರಿತ ಪಾಠ, ಚಕ್ರವರ್ತಿ ಸೂಲಿಬೆಲೆ ರಚಿಸಿದ ರಾಜಗುರು, ಸುಖದೇವ್, ಭಗತ್ ಸಿಂಗ್ ಕುರಿತ’ ತಾಯಿ ಭಾರತಿಯ ಅಮರ ಪುತ್ರರು’, ಮತ್ತು ಶತಾವಧಾನಿ ಗಣೇಶ್ ಅವರ ಯಜ್ಞ ಯಾಗಾದಿ ಕುರಿತ ಪಾಠಗಳನ್ನು ಕೈಬಿಡಲು ನಿರ್ಧರಿಸಲಾಗಿತ್ತು.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ