ಬೆಂಗಳೂರು: ಕೆಲ ತಿಂಗಳ ಹಿಂದೆ ವಿವಾದದ ಕೇಂದ್ರ ಬಿಂದುವಾಗಿದ್ದ ಚಾಮರಾಜಪೇಟೆ ಈದ್ಗಾ ಮೈದಾನ (Chamarajpet Idgah Maidan) ಸದ್ಯ ಮತ್ತೆ ಮುನ್ನಲೆಗೆ ಬಂದಿದೆ. ಚಾಮರಾಜಪೇಟೆ ಮೈದಾನದಲ್ಲಿ ಜ. 26ರಂದು ಗಣರಾಜ್ಯೋತ್ಸವ ಆಚರಣೆಗೆ ಪಟ್ಟು ಹಿಡಿದಿದ್ದು, ಹಿಂದೂ ಜೈಭೀಮ್ ಸೇನೆ ತ್ರಿವರ್ಣಧ್ವಜ ಹಾರಿಸಲು ಅನುಮತಿ ನೀಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ, ಚಾಮರಾಜಪೇಟೆ ಠಾಣೆಗೆ ಮನವಿ ಮಾಡಿದೆ. 26 ಜನವರಿ 2023 ರಂದು ಬೆಳಿಗ್ಗೆ 8 ಯಿಂದ 9 ಗಂಟೆಯವರೆಗೆ ತ್ರಿವರ್ಣಧ್ವಜ ಹಾರಿಸಲು ಅನುಮತಿ ಕೋರಲಾಗಿದೆ ಎನ್ನಲಾಗುತ್ತಿದೆ. ಗಣರಾಜ್ಯೋತ್ಸವದ ದಿನ ರಾಷ್ಟ್ರಗೀತೆ, ಭರತನಾಟ್ಯ, ಸಂಗೀತ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜ. 26ರ ಸಂಜೆವರೆಗೆ ಗಣರಾಜ್ಯೋತ್ಸವ ಆಚರಣೆಗೆ ಅನುಮತಿ ಕೋರಿ ಪತ್ರ ಬರೆಯಲಾಗಿದೆ.
ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಒತ್ತಾಯ: ಗೊಂದಲದಲ್ಲಿ ಸಿಲುಕಿತಾ ಕಂದಾಯ ಇಲಾಖೆ?
ಇನ್ನು ಇತ್ತೀಚೆಗೆ ನವೆಂಬರ್ 1ರಂದು ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರು. ಆದರೆ ಜಿಲ್ಲಾಡಳಿತ ನಾಗರಿಕರ ಒಕ್ಕೂಟದ ಮನವಿಯನ್ನು ತಿರಸ್ಕರಿಸಿತ್ತು.
ಕಾನೂನು ವಿರುದ್ಧವಾಗಿ ಕನ್ನಡ ಧ್ವಜ ಹಾರಿಸುತ್ತೇವೆ: ಒಕ್ಕೂಟದ ಸದಸ್ಯರು
ಈ ವಿಚಾರವಾಗಿ ಮಾತನಾಡಿದ್ದ ಒಕ್ಕೂಟದ ಸದಸ್ಯರು, ಸರ್ಕಾರಕ್ಕೆ ಕನ್ನಡದ ಬಗ್ಗೆ ಗೌರವ ಇಲ್ಲ. ಅಭಿಮಾನ, ಪ್ರೀತಿ ಇದ್ದಿದ್ರೆ ಅನುಮತಿ ಕೊಡುತ್ತಿದ್ದರು. ಇಂದು ಸಂಜೆಯವರೆಗೆ ಸರ್ಕಾರಕ್ಕೆ ಗಡುವನ್ನ ಕೊಟ್ಟಿದ್ದೇವೆ. ಅನುಮತಿ ಕೊಟ್ಟು ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ಕೊಡಬೇಕು. ಒಂದು ವೇಳೆ ಅವಕಾಶ ಕೊಡದಿದ್ದರೆ, ನಾವೇ ಕಾನೂನು ವಿರುದ್ಧವಾಗಿ ಕನ್ನಡ ಧ್ವಜ ಹಾರಿಸುತ್ತೇವೆ. ನಮ್ಮ ಮನವಿಯನ್ನ ಸರ್ಕಾರಕ್ಕೆ ಜಿಲ್ಲಾಡಳಿತ ತಲುಪಿಸಿಲ್ಲ. ಅನುಮತಿ ನೀಡದಿರೋದಕ್ಕೆ ಸ್ಥಳೀಯ ಶಾಸಕರೇ ನೇರ ಹೊಣೆ. ನಮ್ಮ ಜೊತೆಗೂಡಿ ರಾಜ್ಯೋತ್ಸವ ಮಾಡುತ್ತೇವೆ ಎಂದಿದ್ದರು.
ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಬಗ್ಗೆ ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸುವೆ ಎಂದ ಕಂದಾಯ ಸಚಿವ
ಈಗ ಜಮೀರ್ ಸೇರಿದಂತೆ ಕಂದಾಯ ಇಲಾಖೆ ಸಚಿವ ಆರ್.ಅಶೋಕ್, ಸಂಸದ ಪಿಸಿ ಮೋಹನ್ ಸೈಲೆಂಟ್ ಆಗಿದ್ದಾರೆ. ಯಾರು ಸುಮ್ಮನಿದ್ದರೂ ಪರವಾಗಿಲ್ಲ. ಸರ್ಕಾರದ ವಿರುದ್ಧವೇ ನಾವು ನಾಳೆ ಕನ್ನಡ ಬಾವುಟದ ಧ್ವಜಾರೋಹಣ ಮಾಡುತ್ತೇವೆ ಎಂದು ಒಕ್ಕೂಟ ಸದಸ್ಯರು ಹೇಳಿದ್ದರು. ಇನ್ನು ಅನುಮತಿ ನೀಡದಿದ್ದರೂ ಕಾನೂನಾತ್ಮಕವಾಗಿ ನಾಡ ಧ್ವಜ ಹಾರಿಸ್ತೀವೆ ಎಂಬ ಹೇಳಿಕೆ ವಿಚಾರವಾಗಿ ಚಾಮರಾಜಪೇಟೆ ನಾಗರಿಕರ ಒಕ್ಕೂಟದ ಖಜಾಂಚಿ ಯಶವಂತ್ಗೆ ಚಾಮರಾಜಪೇಟೆ ಪೊಲೀಸರು ಬುಲಾವ್ ನೀಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:29 pm, Thu, 29 December 22