AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲವ್ ಜಿಹಾದ್ ನಿಷೇಧಕ್ಕೆ ಪ್ರತ್ಯೇಕ ಕಾನೂನು, ಕಾರ್ಯಪಡೆ ಜಾರಿಗೆ ಹಿಂದುತ್ವಪರ ಸಂಘಟನೆಗಳ ಆಗ್ರಹ

ಹಿಂದೂ ಜನಜಾಗೃತಿ, ದುರ್ಗಾವಾಹಿನಿ, ರಣರಾಗಿಣಿ ಬ್ರಿಗೇಡ್​​ನಿಂದ ಅಭಿಯಾನ ನಡೆಯಲಿದೆ. ಲವ್​ ಜಿಹಾದ್​ ತಡೆಗೆ ವಿಶೇಷ ಕಾನೂನು ರೂಪಿಸಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.

ಲವ್ ಜಿಹಾದ್ ನಿಷೇಧಕ್ಕೆ ಪ್ರತ್ಯೇಕ ಕಾನೂನು, ಕಾರ್ಯಪಡೆ ಜಾರಿಗೆ ಹಿಂದುತ್ವಪರ ಸಂಘಟನೆಗಳ ಆಗ್ರಹ
ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ಸಂಚಾಲಕ ಮೋಹನ್​ ಗೌಡ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Dec 11, 2022 | 10:58 AM

Share

ಬೆಂಗಳೂರು: ಲವ್ ಜಿಹಾದ್​ (Love Jihad) ವಿರುದ್ಧ ಪ್ರತ್ಯೇಕ ಕಾನೂನು ಜಾರಿ ಮಾಡಬೇಕೆಂಬ ಒತ್ತಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಂಬಂಧ ಚಳಿಗಾಲದ ಅಧಿವೇಶನದಲ್ಲಿಯೇ (Winter Session) ವಿಶೇಷ ಕಾನೂನು ರೂಪಿಸಬೇಕೆಂದು ಸರ್ಕಾರದ ಒತ್ತಡ ಹಾಕಲು ಹಿಂದುತ್ವಪರ ಸಂಘಟನೆಗಳ ಕಾರ್ಯಕರ್ತರು ಸಜ್ಜಾಗಿದ್ದಾರೆ. ಲವ್​ ಜಿಹಾದ್​ ತಡೆಗೆ ಕಾನೂನು, ವಿಶೇಷ ಪೊಲೀಸ್ ದಳ ರಚಿಸಲು ಕಾರ್ಯಕರ್ತರು ಆಗ್ರಹಿಸಿದ್ದಾರೆ. ಈ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭಾನುವಾರ (ಡಿ 11) ಭೇಟಿಯಾಗಿ ಹಿಂದುತ್ವಪರ ಸಂಘಟನೆಗಳು ಆಗ್ರಹಿಸಿವೆ. ಲವ್ ಜಿಹಾದ್​ ನಿಷೇಧ ಕಾನೂನು ರೂಪಿಸುವಂತೆ ಆಗ್ರಹಿಸಲು ಡಿ 18ರವರೆಗೆ ಹಿಂದುತ್ವಪರ ಸಂಘಟನೆಗಳು ರಾಜ್ಯಾದ್ಯಂತ ಅಭಿಯಾನ ರೂಪಿಸಿವೆ.

ಹಿಂದೂ ಜನಜಾಗೃತಿ, ದುರ್ಗಾವಾಹಿನಿ, ರಣರಾಗಿಣಿ ಬ್ರಿಗೇಡ್​​ನಿಂದ ಅಭಿಯಾನ ನಡೆಯಲಿದೆ. ಲವ್​ ಜಿಹಾದ್​ ತಡೆಗೆ ವಿಶೇಷ ಕಾನೂನು ರೂಪಿಸಬೇಕು, ವಿಶೇಷ ಪೊಲೀಸ್ ದಳ ರಚಿಸಬೇಕು. ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲೇ ಕಾನೂನು ಜಾರಿಗೊಳಿಸಬೇಕು ಎಂದು ರಾಜ್ಯದ ಎಲ್ಲಾ ಕ್ಷೇತ್ರಗಳ ಶಾಸಕರಿಗೆ ಸ್ಥಳೀಯ ಕಾರ್ಯಕರ್ತರು ಮನವಿ ಸಲ್ಲಿಸಿದ್ದಾರೆ.

ಲವ್ ಜಿಹಾದ್​ ವಿರುದ್ಧ ರಾಜ್ಯದಲ್ಲಿ ಪ್ರತ್ಯೇಕ ಕಾನೂನು ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ಸಂಚಾಲಕ ಮೋಹನ್​ ಗೌಡ, ಈ ಅಧಿವೇಶನದಲ್ಲೇ ಲವ್​ ಜಿಹಾದ್ ನಿಷೇಧ ಕಾನೂನು ಜಾರಿ ಆಗಬೇಕು. ಈ ಸಂಬಂಧ ಮುಖ್ಯಮಂತ್ರಿ ಬೊಮ್ಮಾಯಿಗೂ ಮನವಿ ಮಾಡುತ್ತೇವೆ ಎಂದರು.

ವಿಎಚ್‌ಪಿಯಿಂದ ರಾಷ್ಟ್ರವ್ಯಾಪಿ ಆಂದೋಲನ

ಲವ್ ಜಿಹಾದ್ ವಿರುದ್ಧ ರಾಷ್ಟ್ರ ವ್ಯಾಪಿ ಜನಜಾಗೃತಿ ಮೂಡಿಸುವ ಅಭಿಯಾನವನ್ನು ವಿಶ್ವ ಹಿಂದೂ ಪರಿಷತ್ ಆರಂಭಿಸಿದೆ. ಈ ಅಭಿಯಾನಕ್ಕೆ ‘ಜನ್ ಜಾಗರಣ್ ಅಭಿಯಾನ’ ಎಂದು ಕರೆಯಲಾಗಿದೆ. ಯುವಜನರು, ಹರೆಯದ ಹುಡುಗಿಯರು ಮತ್ತು ಮಹಿಳೆಯರನ್ನು ಅಕ್ರಮವಾಗಿ ಮತಾಂತರ ಮಾಡಲು ಪ್ರೀತಿಯನ್ನು ಒಂದು ಅಸ್ತ್ರವಾಗಿ ಬಳಸಿಕೊಳ್ಳಲಾಗುತ್ತಿದೆ. ಜಾಗೃತಿ ಮೂಡಿಸುವ ಮೂಲಕ ಈ ಪಿಡುಗಿಗೆ ತಡೆಯೊಡ್ಡಲು ಕಾರ್ಯಪಡೆ ರೂಪಿಸಬೇಕು ಎಂದು ವಿಎಚ್​ಪಿ ಒತ್ತಾಯಿಸಿದೆ.

ಡಿಸೆಂಬರ್ 10ರಿಂದ ದೇಶದ ಮೂಲೆಮೂಲೆಗಳಲ್ಲಿ ವಿಎಚ್‌ಪಿಯ ಯುವ ಘಟಕವಾದ ಬಜರಂಗದಳವು ಶೌರ್ಯ ಯಾತ್ರೆ ನಡೆಸಲಿದೆ. ನಮ್ಮ ಸಹೋದರಿಯರನ್ನು ಲವ್‌ ಜಿಹಾದ್‌ನಂಥ ಅಕ್ರಮಗಳ ಸಂತ್ರಸ್ತರಾಗಿಸುವ ಧೈರ್ಯ ಯಾರಿಗೂ ಇರಬಾರದು ಎಂದು ವಿಎಚ್​ಪಿ ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೈನ್ ಹೇಳಿದ್ದರು. ವಿಎಚ್‌ಪಿಯ ಮಹಿಳಾ ಘಟಕವಾದ ದುರ್ಗಾ ವಾಹಿನಿ ಕೂಡಾ ಪ್ರತ್ಯೇಕ ಅಭಿಯಾನವನ್ನು ಕೈಗೊಳ್ಳಲಿದೆ‍ ಲವ್‌ ಜಿಹಾದ್‌ಗೆ ಸಂಬಂಧಿಸಿದ ಸುಮಾರು 400 ಪ್ರಕರಣಗಳ ಪಟ್ಟಿಯನ್ನು ವಿಎಚ್​ಪಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಶೀಘ್ರ ಲವ್ ಜಿಹಾದ್ ವಿರೋಧಿ ಕಾನೂನು ಜಾರಿಗೆ ಆಗ್ರಹ, ಮುಸ್ಲಿಂ ಬಾಲಕಿಯರಿಗೆ ಪ್ರತ್ಯೇಕ ಕಾಲೇಜು ಚಿಂತನೆಗೆ ವಿರೋಧ

ಲವ್ ಜಿಹಾದ್​ಗೆ ಸಂಬಂಧಿಸಿದ ಇನ್ನಷ್ಟು ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:58 am, Sun, 11 December 22

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್