AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Karaga 2024: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್

ವಿಶ್ವ ವಿಖ್ಯಾತ ಬೆಂಗಳೂರು ಕರಗ ಮಹೋತ್ಸವ ಏಪ್ರಿಲ್ 15 ರಿಂದ ಏಪ್ರಿಲ್ 23ರವರೆಗೆ ನಡೆಯಲಿದೆ. ಏಪ್ರಿಲ್ 23ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಅವರು ಕರಗ ಹೊರಲಿದ್ದಾರೆ. ನಿನ್ನೆ (ಫೆ.18) ನಡೆದ ಸಭೆಯಲ್ಲಿ ಪೂಜಾರಿ ಎ.ಜ್ಞಾನೇಂದ್ರ ಅವರನ್ನು ಕರಗ ಹೊರಲು ಆಯ್ಕೆ ಮಾಡಲಾಗಿದೆ.

Bengaluru Karaga 2024: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್
ಬೆಂಗಳೂರು ಕರಗ
ಕಿರಣ್​ ಸೂರ್ಯ
| Edited By: ಆಯೇಷಾ ಬಾನು|

Updated on: Feb 19, 2024 | 8:48 AM

Share

ಬೆಂಗಳೂರು, ಫೆ.19: ವಿಶ್ವ ವಿಖ್ಯಾತ, ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ (Bengaluru Karaga) ಮಹೋತ್ಸವಕ್ಕೆ ಡೇಟ್ ಫಿಕ್ಸ್ ಆಗಿದೆ. ಏಪ್ರಿಲ್ 15 ರಿಂದ ಏಪ್ರಿಲ್ 23ರವರೆಗೆ ಬೆಂಗಳೂರು ಕರಗ ಉತ್ಸವ ನಡೆಯಲಿದೆ. ಏಪ್ರಿಲ್ 23ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ (A Jnanendra) ಅವರು ಕರಗ ಹೊರಲಿದ್ದಾರೆ. ಜ್ಞಾನೇಂದ್ರ ಅವರು 14ನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ.

ನಿನ್ನೆ (ಫೆ.18) ನಡೆದ ಸಭೆಯಲ್ಲಿ ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಹಾಗೂ ಮುಜರಾಯಿ ಇಲಾಖೆ ಎ.ಜ್ಞಾನೇಂದ್ರ ಸ್ವಾಮಿ ಅವರನ್ನು ಕರಗ ಹೊರಲು ಆಯ್ಕೆ ಮಾಡಿದೆ. ಕಳೆದ ವರ್ಷ ಕರಗ ಶಕ್ತ್ಯೋತ್ಸವ ನಡೆಯುವ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಕರಗದ ಪೂಜಾರಿ ಎ. ಜ್ಞಾನೇಂದ್ರ ಅವರ ಮೇಲೆ ಕೆಮಿಕಲ್ ಎರಚಿ ಕರಗಕ್ಕೆ ಅಡ್ಡಿಪಡಿಸಲು ಮುಂದಾಗಿದ್ರು, ಆದರೂ ಕರಗದ ಪೂಜಾರಿ ಎ.ಜ್ಞಾನೇಂದ್ರ ಅವರು ಯಶಸ್ವಿಯಾಗಿ ದ್ರೌಪದಿದೇವಿ ಕರಗವನ್ನು ರಾಜಬೀದಿ ಉತ್ಸವ ಮುಗಿಸಿ ಧರ್ಮರಾಯ ಸ್ವಾಮಿ ದೇವಾಲಯ ತಲುಪಿಸಿದ್ದರು.

ಇದನ್ನೂ ಓದಿ: ಬೆಂಗಳೂರು ಕರಗ ಉತ್ಸವದಲ್ಲಿ ಹಿಂದೂ ಹಾಗೂ ಮುಸ್ಲಿಂ ಭಾಯಿ ಭಾಯಿ: ಮಸ್ತಾನ್ ಸಾಬ್ ದರ್ಗಾದಲ್ಲಿ ದ್ರೌಪದಿಗೆ ಧೂಪಾರತಿ

ಕರಗ ಎಂಬ ಹೆಸರು ಹೂವಿನ ದಿಂಡು ಮತ್ತು ದೇವಿಯ ವಿಗ್ರಹವನ್ನು ಹೊಂದಿರುವ ಕಲಶದ ಅನುರೂಪ. ಕರಗವನ್ನು ಮುಟ್ಟದೆ ಅಂದರೆ ಹೂವಿನ ದಿಂಡಿನಿಂದ ಅಲಂಕೃತಗೊಂಡ ಮಣ್ಣಿನ ಮಡಿಕೆ ಅದರಲ್ಲಿರುವ ಕಲಶವನ್ನು ಕೈಯಲ್ಲಿ ಮುಟ್ಟದೆ ಆ ಕಲಶವನ್ನು ಹೊರುವ ವ್ಯಕ್ತಿಯ ತಲೆ ಮೇಲೆ ಇಡಲಾಗುತ್ತದೆ. ಕರಗವನ್ನು ಹೊರುವವರು ಮಹಿಳೆಯಂತೆ ಅಲಂಕಾರ ಮಾಡಿಕೊಳ್ಳಬೇಕು. ಕಂಕಣ, ಮಂಗಳ-ಸೂತ್ರ, ಹಣೆಯ ಮೇಲೆ ಸಿಂಧೂರ ಇಟ್ಟುಕೊಂಡು ಮುತೈದೆಯಂತೆ ಕಾಣಬೇಕು. ಈ ರೀತಿ ಅಲಂಕಾರ ಮಾಡಿಕೊಂಡೇ ಕರಗವನ್ನು ಹೊರಬೇಕು. ಹಿಂದೂ ಮಹಾಕಾವ್ಯವಾದ ಮಹಾಭಾರತದಲ್ಲೂ ಕರಗ ಉತ್ಸವದ ಉಲ್ಲೇಖವನ್ನು ಗಮನಿಸಬಹುದು. ಕರಗವು ದ್ರೌಪದಿಯನ್ನು ಸರ್ವೋತ್ಕೃಷ್ಟ ಮಹಿಳೆ ಎಂದು ಚಿತ್ರಿಸುತ್ತದೆ ಮತ್ತು ಅವಳನ್ನು ಶಕ್ತಿ ದೇವತೆ ಎಂದು ಗೌರವಿಸುತ್ತದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಸ್ವಲ್ಪ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಸ್ವಲ್ಪ ಖರ್ಚು ಹೆಚ್ಚಾಗುವ ಸಾಧ್ಯತೆ
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ