ಬೆಂಗಳೂರಿನಲ್ಲಿ ಹಿಟ್​ ಆ್ಯಂಡ್​​​ ರನ್​ಗೆ ಒಂದೇ ಕುಟುಂಬದ ಇಬ್ಬರ ಸಾವು: ಓರ್ವ ಗಂಭೀರ

ಬೆಂಗಳೂರಿನ ಸದಾಶಿವನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಎಂಎಸ್ ರಾಮಯ್ಯ ಬಳಿಯ ಇಸ್ರೋ ಸರ್ಕಲ್​​ನಲ್ಲಿ ಹಿಟ್ ಅಂಡ್ ರನ್​ಗೆ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ಮತ್ತೊರ್ವನ ಸ್ಥಿತಿ ಗಂಭೀರವಾಗಿದೆ.

ಬೆಂಗಳೂರಿನಲ್ಲಿ ಹಿಟ್​ ಆ್ಯಂಡ್​​​ ರನ್​ಗೆ ಒಂದೇ ಕುಟುಂಬದ ಇಬ್ಬರ ಸಾವು: ಓರ್ವ ಗಂಭೀರ
ತಂದೆ ರಘು (ಎಡಚಿತ್ರ) ಮಗ ಚಿರಂಜೀವಿ (ಬಲಚಿತ್ರ)
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ವಿವೇಕ ಬಿರಾದಾರ

Updated on:Aug 07, 2023 | 7:23 AM

ಬೆಂಗಳೂರು: ನಗರದ ಸದಾಶಿವನಗರ ಸಂಚಾರ ಪೊಲೀಸ್ (Police) ಠಾಣಾ ವ್ಯಾಪ್ತಿಯ ಎಂಎಸ್ ರಾಮಯ್ಯ ಬಳಿಯ ಇಸ್ರೋ ಸರ್ಕಲ್​​ನಲ್ಲಿ ಹಿಟ್ ಆ್ಯಂಡ್​​ ರನ್​ಗೆ (Hit and Run) ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ಮತ್ತೊರ್ವನ ಸ್ಥಿತಿ ಗಂಭೀರವಾಗಿದೆ. ಕುವೆಂಪು ನಗರದ ನಿವಾಸಿಗಳಾದ ರಘು ಮತ್ತು ಚಿರಂಜೀವಿ (ಅಪ್ಪ ಮತ್ತು ಮಗ) ಮೃತ ದುರ್ದೈವಿಗಳು ವಾಸು (ಅಳಿಯ) ಸ್ಥಿತಿ ಗಂಭೀರವಾಗಿದೆ.

ಒಂದೇ ಕುಟುಂಬದ ಮೂವರು ಪುಸ್ತಕದ ವ್ಯಾಪಾರ ಮಾಡುತ್ತಿದ್ದರು. ಇವರು ಕಳೆದ ರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಎಂಎಸ್ ರಾಮಯ್ಯ ಅಸ್ಪತ್ರೆ ಕಡೆಯಿಂದ ಬಂದ ಮಾರುತಿ ಇಕೋ ಕಾರು ಮೊದಲು ನಿಂತಿದ್ದ ಒಂದು ಕಾರು ಮತ್ತು ಆಟೋಗೆ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆ ಬದಿ ನಿಂತಿದ್ದ ವಾಸು ಗುದ್ದಿ, ತದನಂತರ ಡಿಯೋ ಸ್ಕೂಟರ್​ನಲ್ಲಿದ್ದ ರಘು ಮತ್ತು ಚಿರಂಜೀವಿ ಅವರಿಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ದಂಪತಿ ದುರ್ಮರಣ: ಹೆಸ್ಕಾಂ ವಿರುದ್ಧ ಆರೋಪ

ಘಟನೆ ಬಳಿಕ ಸ್ಥಳೀಯರು ಕಾರು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಮೂವರ ಪೈಕಿ ಆಕಾಶ್​​ ಎಂಬುವರು ಕಾರಿನಿಂದ ಕೆಳೆಗೆ ಇಳಿದ್ದಿದ್ದು, ಉಳಿದ ಇಬ್ಬರು ಕಾರಿನ ಸಹಿತ ಎಸ್ಕೇಪ್ ಆಗಿದ್ದಾರೆ. ಆಕಾಶ್​​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಕಾಶ್​ ಮಾಗಡಿ ಜಿಲ್ಲಾ ಪಂಚಾಯತಿ ಸದಸ್ಯರ ಮಗ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಸದಾಶಿವನಗರ ಸಂಚಾರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಓವರ್ ಟೆಕ್ ಮಾಡಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ

ಚಿಕ್ಕಮಗಳೂರು: ಓವರ್ ಟೆಕ್ ಮಾಡಲು ಹೋಗಿ ಎರಡು ಕಾರುಗಳ ನಡುವೆ ಅಪಘಾತವಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಜೇನುಬೈಲು ಗ್ರಾಮದ ಬಳಿ  ನಡೆದಿದೆ. ಎರಡು ಕಾರುಗಳ ನಡುವೆ ಡಿಕ್ಕಿಯಾದ ರಭಸಕ್ಕೆ ಒಂದು ಕಾರು ಪಲ್ಟಿಯಾಗಿದೆ. ಎರಡು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ‌ಗಳಾಗಿದ್ದು, ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಾಲಗಿದೆ. ಭೀಕರ ಅಪಘಾತದ ದೃಶ್ಯ ಸಿ.ಸಿ.ಟಿ.ವಿಯಲ್ಲಿ ಸೆರೆ‌ಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:20 am, Mon, 7 August 23

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು