AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹಿಟ್‌ ಆ್ಯಂಡ್ ರನ್: ಹೊಸಕೆರೆಹಳ್ಳಿ ನೈಸ್ ರಸ್ತೆಯಲ್ಲಿ ಇಬ್ಬರು ಮಹಿಳಾ ಕಾರ್ಮಿಕರು ಸಾವು

ನೈಸ್ ರಸ್ತೆ ಬದಿ ಹುಲ್ಲು ತೆಗೆಯುತ್ತಿದ್ದ ಮಹಿಳಾ ಕಾರ್ಮಿಕರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಮೃತಪಟ್ಟ ಘಟನೆ ಹೊಸಕೆರೆಹಳ್ಳಿ ನೈಸ್ ರಸ್ತೆಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಮೃತರು ಯಾದಗಿರಿ ಮೂಲದವರಾಗಿದ್ದಾರೆ. ಕೆಂಗೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಚಾಲಕನ ಪತ್ತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.

ಬೆಂಗಳೂರಿನಲ್ಲಿ ಹಿಟ್‌ ಆ್ಯಂಡ್ ರನ್: ಹೊಸಕೆರೆಹಳ್ಳಿ ನೈಸ್ ರಸ್ತೆಯಲ್ಲಿ ಇಬ್ಬರು ಮಹಿಳಾ ಕಾರ್ಮಿಕರು ಸಾವು
ಪ್ರಾತಿನಿಧಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on: Dec 13, 2025 | 6:51 AM

Share

ಬೆಂಗಳೂರು, ಡಿಸೆಂಬರ್ 13: ಬೆಂಗಳೂರು (Bengaluru) ನಗರದ ಹೊಸಕೆರೆಹಳ್ಳಿ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ (NICE Road) ಶುಕ್ರವಾರ ಸಂಜೆ ನಡೆದ ಹಿಟ್‌ ಆ್ಯಂಡ್ ರನ್ ಅಪಘಾತದಲ್ಲಿ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪರಿಚಿತ ವಾಹನ ಮಹಿಳಾ ಕಾರ್ಮಿಕರಿಗೆ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಮೃತರನ್ನು ಯಾದಗಿರಿ ಮೂಲದ ರಂಗಮ್ಮ (45) ಹಾಗೂ ಚೌಡಮ್ಮ (55) ಎಂದು ಗುರುತಿಸಲಾಗಿದೆ. ದಿನಗೂಲಿ ಕಾರ್ಮಿಕರಾಗಿದ್ದ ಇವರು ನೈಸ್ ರಸ್ತೆ ಬದಿಯಲ್ಲಿ ಹುಲ್ಲು ತೆರವು ಕಾರ್ಯದಲ್ಲಿ ತೊಡಗಿದ್ದ ಸಂದರ್ಭದಲ್ಲಿ, ಸಂಜೆ ಸುಮಾರು 5:54ರ ವೇಳೆಗೆ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಇಬ್ಬರೂ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣ ಕೆಂಗೇರಿ ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ಸಂಬಂಧ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿಗೆ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ. ಪೊಲೀಸರು ಸ್ಥಳದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಚಾಲಕನ ಪತ್ತೆಗೆ ಮುಂದಾಗಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

ಇದನ್ನೂ ಓದಿ: ಆನೇಕಲ್​​ ಬಳಿ ಭೀಕರ ಬೈಕ್​​ ಅಪಘಾತ: ಎದೆ ಝಲ್​​ ಎನಿಸುವಂತಿದೆ ದೃಶ್ಯ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ