AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 15, 16 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ದಕ್ಷಿಣ ಭಾರತ‌ ಉತ್ಸವ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಜೂನ್ 15 ಮತ್ತು 16 ರಂದು ದಕ್ಷಿಣ ಭಾರತ‌ ಉತ್ಸವ(South india Festival) ನಡೆಸಲಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವ ಹೆಚ್​.ಕೆ.ಪಾಟೀಲ್(HK Patil) ಹೇಳಿದರು.

ಜೂನ್ 15, 16 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ದಕ್ಷಿಣ ಭಾರತ‌ ಉತ್ಸವ
ಬೆಂಗಳೂರಿನ ಅರಮನೆ ಮೈದಾನದಲ್ಲಿ ದಕ್ಷಿಣ ಭಾರತ‌ ಉತ್ಸವ
ಕಿರಣ್ ಹನುಮಂತ್​ ಮಾದಾರ್
|

Updated on:Jun 12, 2024 | 5:40 PM

Share

ಬೆಂಗಳೂರು, ಜೂ.12: ಜೂನ್ 15 ಮತ್ತು 16 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ದಕ್ಷಿಣ ಭಾರತ‌ ಉತ್ಸವ(South india Festival) ನಡೆಸಲಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವ ಹೆಚ್​.ಕೆ.ಪಾಟೀಲ್(HK Patil) ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯು ಪ್ರವಾಸೋಧ್ಯಮ ಸಹಯೋಗದಲ್ಲಿ ನಡೆಸುವ ದಕ್ಷಿಣ ಭಾರತ‌ ಉತ್ಸವದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಹಾಗೂ ಸಚಿವರು ಪಾಲ್ಗೋಳಲಿದ್ದಾರೆ ಎಂದರು.

ರಾಜ್ಯದಲ್ಲಿ ಪ್ರವಾಸೋದ್ಯಮ ಉತ್ತೇಜನ ಸಲುವಾಗಿ ಹಂಪಿ, ಬಾದಮಿ ಪಟ್ಟದಕಲ್ಲು ಗದಗ, ಲಕ್ಕುಂಡಿ, ಮೈಸೂರು, ಶ್ರೀರಂಗಪಟ್ಟಣ ಸೇರಿ 384 ಎಕರೆಯಲ್ಲಿ ಮೂಲಭೂತ ಸೌಕರ್ಯಗಳ ಒದಗಿಸಲು ಹಣ ನಿಗದಿ ಮಾಡಲಾಗಿದೆ. ಜಲಾಶಯಗಳ ಕಾರಂಜಿ ಸೇರಿದಂತೆ ವಿವಿಧ ಅಭಿವೃದ್ಧಿ ಮಾಡೋಕೆ ಬಂಡವಾಳ ಆಮಂತ್ರಣ ನೀಡಲಾಗಿದೆ. 320 ಕಿ.ಮೀ ಹೊಂದಿರುವ ಕರಾವಳಿ ಪ್ರದೇಶದಲ್ಲಿ ಪ್ರವಾಸಿತಾಣಗಳ ಅಭಿವೃದ್ಧಿಗೆ ತೀರ್ಮಾನ ಮಾಡಿದ್ದೇವೆ. ಅದರ ಬಗ್ಗೆ ವಿಶೇಷ ಮಾಹಿತಿಯನ್ನು ದಕ್ಷಿಣ ಭಾರತ ಉತ್ಸವ ದಲ್ಲಿ ಪಿಪಿಪಿ ಮಾಡೆಲ್ ಅಭಿವೃದ್ಧಿ ಬಗ್ಗೆ ಕ್ರಮವಹಿಸಲಾಗುತ್ತದೆ. ದಕ್ಷಿಣ ಭಾರತದ ಉತ್ಸವದಲ್ಲಿ ಕರ್ನಾಟಕಕ್ಕೆ ಹೆಚ್ಚಿನ ಬಂಡವಾಳ ಆಕರ್ಷಣೆ ಮಾಡಬೇಕು. ಪ್ರವಾಸಿಗಳಿಗೆ ಮನವರಿಕೆ ಮಾಡಿಕೊಳ್ಳಲು ಈ ದಕ್ಷಿಣ ಭಾರತ ಉತ್ಸವ ಆಯೋಜಿಸಲಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ:ಬೆಂಗಳೂರು ಮಾವಿನ ಮೇಳದಲ್ಲಿ 500 ಟನ್​ ಮಾವು ಮಾರಾಟ

ದಕ್ಷಿಣ ಭಾರತ ಉತ್ಸವದ ಉದ್ದೇಶಗಳು

  • ದಕ್ಷಿಣ ಭಾರತದಲ್ಲಿ ಲಭ್ಯವಿರುವ ಹೂಡಿಕೆ ಅವಕಾಶಗಳನ್ನು ಪ್ರದರ್ಶಿಸುವುದು ಮತ್ತು ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸುವುದು.
  • ದಕ್ಷಿಣ ಭಾರತದ ಪ್ರವಾಸೋದ್ಯಮದ ಸಾಮರ್ಥ್ಯ ಮತ್ತು ಆಕರ್ಷಣೆಗಳನ್ನು ಪ್ರದರ್ಶಿಸುವುದು.
  • ಪ್ರವಾಸೋದ್ಯಮವನ್ನು ಉತ್ತೇಜಿಸುವುದು. ಸಾಂಸ್ಕೃತಿಕ ವಿನಿಮಯವನ್ನು ಉತ್ತೇಜಿಸುವುದು ಮತ್ತು ವ್ಯಾಪಾರ ಅವಕಾಶಗಳನ್ನು ಸುಗಮಗೊಳಿಸುವುದು.
  • ದಕ್ಷಿಣ ಭಾರತದ ಶ್ರೀಮಂತ ಸಾಂಸ್ಕೃತಿಕ, ಐತಿಹಾಸಿಕ ಮತ್ತು ಭೌಗೋಳಿಕ ವೈವಿಧ್ಯತೆಯನ್ನು ಪ್ರದರ್ಶಿಸುವುದು.
  • ದಕ್ಷಿಣ ಭಾರತದ ವಿಶಿಷ್ಟ ಕೊಡುಗೆಗಳನ್ನು ಅನ್ವೇಷಿಸಲು ದೇಶೀಯ ಮತ್ತು ಅಂತರರಾಷ್ಟ್ರೀಯ ಪ್ರವಾಸಿಗರನ್ನು ಸೆಳೆಯುವುದು ಹಾಗೂ ಪ್ರೋತ್ಸಾಹಿಸುವುದು.
  • ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಪಾಲುದಾರರಿಗೆ ನೆಟ್‌ವರ್ಕಿಂಗ್ ಸಹಯೋಗ ಮತ್ತು ಪಾಲುದಾರಿಕೆಗಳನ್ನು ರೂಪಿಸಲು ವೇದಿಕೆಯನ್ನು ಒದಗಿಸುವುದು.
  • ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ತಮ್ಮ ಉತ್ಪನ್ನಗಳು ಮತ್ತು ಸೇವೆಗಳನ್ನು ಪ್ರದರ್ಶಿಸಲು ಉದ್ಯಮಗಳಿಗೆ ಅವಕಾಶಗಳನ್ನು ಸೃಷ್ಟಿಸುವುದು.
  • ದಕ್ಷಿಣ ಭಾರತದಲ್ಲಿ ಜವಾಬ್ದಾರಿಯುತ ಪ್ರವಾಸೋದ್ಯಮ ಪದ್ಧತಿಗಳು, ಸಂರಕ್ಷಣಾ ಪ್ರಯತ್ನಗಳು ಮತ್ತು ಸಮುದಾಯ ಆಧಾರಿತ ಪ್ರವಾಸೋದ್ಯಮ ಉಪಕ್ರಮಗಳ ಮಹತ್ವದ ಬಗ್ಗೆ ಪ್ರತಿನಿಧಿಗಳಿಗೆ ವಿಚಾರಗೋಷ್ಠಿಗಳು, ಕಾರ್ಯಾಗಾರಗಳು ಮತ್ತು ಸಂವಾದಾತ್ಮಕ ಅಧಿವೇಶನಗಳನ್ನು ಆಯೋಜಿಸುವುದು.
  • ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ದಕ್ಷಿಣ ಭಾರತವನ್ನು ಪ್ರಮುಖ ಪ್ರವಾಸೋದ್ಯಮ ತಾಣವಾಗಿ ಬಿಂಬಿಸುವುದು.
  • ದಕ್ಷಿಣ ಭಾರತದ ರೋಮಾಂಚಕ ಕಲೆ, ಸಾಂಸ್ಕೃತಿಕ ಪರಂಪರೆಯನ್ನು ಆಚರಿಸುವುದು.

ದಕ್ಷಿಣ ಭಾರತ ಉತ್ಸವದ ಸಲುವಾಗಿ ಬಂಡವಾಳ ಹೂಡಿಕೆ ಆಕರ್ಷಿಸಲು ನಮ್ಮ ರಾಜ್ಯದ ಚಿಕ್ಕಮಗಳೂರು, ಮೈಸೂರು, ಉಡುಪಿ ಜಿಲ್ಲೆಗಳಲ್ಲಿ ಹಾಗೂ ನೆರೆಯ ರಾಜ್ಯದ ಹೈದರಾಬಾದ್, ಚೆನ್ನೈ, ವಿಜಯವಾಡ ಮತ್ತು ಕೊಚ್ಚಿಯಲ್ಲಿ ಪ್ರವಾಸೋದ್ಯಮ ಇಲಾಖೆಯ ಸಹಯೋಗಯೊಂದಿಗೆ ಅನೇಕ ರೋಡ್ ಶೋಗಳನ್ನು ನಡೆಸಿ ಅಲ್ಲಿನ ಹೂಡಿಕೆದಾರರೊಂದಿಗೆ ಸಭೆ ನಡೆಸಿದ್ದೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:39 pm, Wed, 12 June 24

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್