ಬೆಂಗಳೂರು, ಜೂ.12: ಜೂನ್ 15 ಮತ್ತು 16 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ದಕ್ಷಿಣ ಭಾರತ ಉತ್ಸವ(South india Festival) ನಡೆಸಲಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್(HK Patil) ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯು ಪ್ರವಾಸೋಧ್ಯಮ ಸಹಯೋಗದಲ್ಲಿ ನಡೆಸುವ ದಕ್ಷಿಣ ಭಾರತ ಉತ್ಸವದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವರು ಪಾಲ್ಗೋಳಲಿದ್ದಾರೆ ಎಂದರು.
ರಾಜ್ಯದಲ್ಲಿ ಪ್ರವಾಸೋದ್ಯಮ ಉತ್ತೇಜನ ಸಲುವಾಗಿ ಹಂಪಿ, ಬಾದಮಿ ಪಟ್ಟದಕಲ್ಲು ಗದಗ, ಲಕ್ಕುಂಡಿ, ಮೈಸೂರು, ಶ್ರೀರಂಗಪಟ್ಟಣ ಸೇರಿ 384 ಎಕರೆಯಲ್ಲಿ ಮೂಲಭೂತ ಸೌಕರ್ಯಗಳ ಒದಗಿಸಲು ಹಣ ನಿಗದಿ ಮಾಡಲಾಗಿದೆ. ಜಲಾಶಯಗಳ ಕಾರಂಜಿ ಸೇರಿದಂತೆ ವಿವಿಧ ಅಭಿವೃದ್ಧಿ ಮಾಡೋಕೆ ಬಂಡವಾಳ ಆಮಂತ್ರಣ ನೀಡಲಾಗಿದೆ. 320 ಕಿ.ಮೀ ಹೊಂದಿರುವ ಕರಾವಳಿ ಪ್ರದೇಶದಲ್ಲಿ ಪ್ರವಾಸಿತಾಣಗಳ ಅಭಿವೃದ್ಧಿಗೆ ತೀರ್ಮಾನ ಮಾಡಿದ್ದೇವೆ. ಅದರ ಬಗ್ಗೆ ವಿಶೇಷ ಮಾಹಿತಿಯನ್ನು ದಕ್ಷಿಣ ಭಾರತ ಉತ್ಸವ ದಲ್ಲಿ ಪಿಪಿಪಿ ಮಾಡೆಲ್ ಅಭಿವೃದ್ಧಿ ಬಗ್ಗೆ ಕ್ರಮವಹಿಸಲಾಗುತ್ತದೆ. ದಕ್ಷಿಣ ಭಾರತದ ಉತ್ಸವದಲ್ಲಿ ಕರ್ನಾಟಕಕ್ಕೆ ಹೆಚ್ಚಿನ ಬಂಡವಾಳ ಆಕರ್ಷಣೆ ಮಾಡಬೇಕು. ಪ್ರವಾಸಿಗಳಿಗೆ ಮನವರಿಕೆ ಮಾಡಿಕೊಳ್ಳಲು ಈ ದಕ್ಷಿಣ ಭಾರತ ಉತ್ಸವ ಆಯೋಜಿಸಲಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ:ಬೆಂಗಳೂರು ಮಾವಿನ ಮೇಳದಲ್ಲಿ 500 ಟನ್ ಮಾವು ಮಾರಾಟ
ದಕ್ಷಿಣ ಭಾರತ ಉತ್ಸವದ ಸಲುವಾಗಿ ಬಂಡವಾಳ ಹೂಡಿಕೆ ಆಕರ್ಷಿಸಲು ನಮ್ಮ ರಾಜ್ಯದ ಚಿಕ್ಕಮಗಳೂರು, ಮೈಸೂರು, ಉಡುಪಿ ಜಿಲ್ಲೆಗಳಲ್ಲಿ ಹಾಗೂ ನೆರೆಯ ರಾಜ್ಯದ ಹೈದರಾಬಾದ್, ಚೆನ್ನೈ, ವಿಜಯವಾಡ ಮತ್ತು ಕೊಚ್ಚಿಯಲ್ಲಿ ಪ್ರವಾಸೋದ್ಯಮ ಇಲಾಖೆಯ ಸಹಯೋಗಯೊಂದಿಗೆ ಅನೇಕ ರೋಡ್ ಶೋಗಳನ್ನು ನಡೆಸಿ ಅಲ್ಲಿನ ಹೂಡಿಕೆದಾರರೊಂದಿಗೆ ಸಭೆ ನಡೆಸಿದ್ದೇವೆ ಎಂದು ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:39 pm, Wed, 12 June 24