AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಎಂಟಿ ಕಾರ್ಖಾನೆ ಜಾಗ ವಿವಾದ: ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಗಂಭೀರ ಆರೋಪ

HMT Factory Land Row: ಹೆಚ್ಎಂಟಿ ಕಾರ್ಖಾನೆ ಜಾಗದ ವಿವಾದ ಸದ್ಯ ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರವಾಗಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಮಾತನಾಡಿದ್ದು, ಹೆಚ್ಎಂಟಿ ಕಾರ್ಖಾನೆಗೆ ಹೊಸ ರೂಪ ನೀಡಲು ನಿರ್ಧರಿಸಿದ್ದೇವೆ, ಆದರೆ ರಾಜ್ಯ ಸರ್ಕಾರ ಕಾರ್ಖಾನೆ ಮೇಲೆ ದಾಳಿ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಹೆಚ್ಎಂಟಿ ಕಾರ್ಖಾನೆ ಜಾಗ ವಿವಾದ: ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಗಂಭೀರ ಆರೋಪ
ಹೆಚ್.ಡಿ.ಕುಮಾರಸ್ವಾಮಿImage Credit source: tv9 kannada
ಗಂಗಾಧರ​ ಬ. ಸಾಬೋಜಿ
|

Updated on: Jul 16, 2026 | 4:04 PM

Share

ಮುಖ್ಯಾಂಶಗಳು

  • ಹೆಚ್ಎಂಟಿ ಕಾರ್ಖಾನೆ ಜಾಗದ ವಿವಾದ
  • ಬೆಂಗಳೂರಿನ HMT ಕ್ಯಾಂಪಸ್​ಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಭೇಟಿ
  • ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ

ಬೆಂಗಳೂರು, ಜುಲೈ 16: ‘‘ಹೆಚ್ಎಂಟಿ (HMT) ಕಾರ್ಖಾನೆಗೆ ಹೊಸ ರೂಪ ನೀಡಿ, ಅದನ್ನು ಪುನರಾರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆದರೆ, ರಾಜ್ಯ ಸರ್ಕಾರ ನಿರಂತರವಾಗಿ ಕಾರ್ಖಾನೆಯ ಮೇಲೆ ದಾಳಿ ಮಾಡುತ್ತಿದ್ದು, ಭೂಮಿಯನ್ನು ಕಬಳಿಸುವ ಹುನ್ನಾರ ನಡೆಸಿದೆ’’ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಗಂಭೀರ ಆರೋಪ ಮಾಡಿದ್ದಾರೆ.

ಹೆಚ್​ಎಂಟಿ ಕಾರ್ಖಾನೆ ಕ್ಯಾಂಪಸ್​​ಗೆ ಹೆಚ್​ಡಿ ಕುಮಾರಸ್ವಾಮಿ ದಿಢೀರ್​ ಭೇಟಿ

ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಹೆಚ್​ಎಂಟಿ ಕಾರ್ಖಾನೆ ಕ್ಯಾಂಪಸ್​​​ಗೆ ಇಂದು ದಿಢೀರ್​ ಭೇಟಿ ನೀಡಿ ಹೆಚ್​ಡಿ ಕುಮಾರಸ್ವಾಮಿ, ಕಾರ್ಖಾನೆ ಪರಿಶೀಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘‘ಹೆಚ್ಎಂಟಿ ವಿಷಯದಲ್ಲಿ ಯಾಕೆ ಇಷ್ಟು ಚರ್ಚೆಯಾಗುತ್ತಿದೆ. ಮೋದಿ ನಾಯಕಯತ್ವದಲ್ಲಿ ನಾನು ಸಚಿವನಾಗಲು ಅವಕಾಶ ಕೊಟ್ಟಿದ್ದಾರೆ. ನನಗೆ ಬೃಹತ್ ಕೈಗಾರಿಕೆ, ಉಕ್ಕು ಖಾತೆ ಜವಾಬ್ದಾರಿ ನೀಡಿದ್ದಾರೆ. 2-3 ನಿರ್ಧಾರ ಮಾಡಿ 2 ವರ್ಷದಿಂದ ಪ್ರಯತ್ನ ಮಾಡುತ್ತಿದ್ದೇನೆ. ಕಾರ್ಖಾನೆ ಪುನಾರಂಭಿಸಲು ನಾವು ತೀರ್ಮಾನ ಮಾಡಿದ್ದೇವೆ’’ ಎಂದರು.

ಇದನ್ನೂ ಓದಿ: ‘ನಾನು ತಪ್ಪು ಮಾಡಿದ್ದರೆ ಪೊರಕೆಯಿಂದ ನನಗೆ ಹೊಡೆಯಿರಿ’: ಸಿಎಂ ಡಿಕೆ ಶಿವಕುಮಾರ್​​

‘‘ಇನ್ನು ಹೆಚ್ಎಂಟಿ ಕಾರ್ಖಾನೆ ಶುರುವಾದಾಗ ನಾವು ಸಣ್ಣಮಕ್ಕಳು. ಬೆಳಗ್ಗೆ 7 ಗಂಟೆಗೆ ಹೆಚ್ಎಂಟಿ ಕಂಪನಿ ಬಸ್​ಗಳು ಓಡಾಡುತ್ತಿದ್ದವು. ಇಂದು ಹೆಚ್ಎಂಟಿ ಸಂಪೂರ್ಣ ಚಿತ್ರಣವನ್ನು ನೀವು ನೋಡಿದ್ದೀರಿ, ಒಂದು ಕಾಲದಲ್ಲಿ ಹೆಚ್ಎಂಟಿ ಉತ್ತಮ ಕಾರ್ಖಾನೆಯಾಗಿತ್ತು. ಕಾರ್ಮಿಕರ ದುಡಿಮೆಯಿಂದ 6 ಕಡೆ ದೊಡ್ಡ ಕಾರ್ಖಾನೆ ನಿರ್ಮಿಸಿದ್ದರು. ಹೆಚ್​ಎಂಟಿ ಕಾರ್ಖಾನೆ ಅದ್ಭುತವಾಗಿ ನಡೆಯುತ್ತಿತ್ತು. ಕಾರ್ಖಾನೆಯಲ್ಲಿ ಸಣ್ಣಪುಟ್ಟ ಕಾರ್ಮಿಕರು ಇದ್ದಾರೆ. ಮುಖ್ಯ ಕಾರ್ಖಾನೆ ಈಗ ಶೂಟಿಂಗ್​ಗೆ ಬಳಕೆಯಾಗುತ್ತಿದೆ’’ ಎಂದು ಮಾಹಿತಿ ನೀಡಿದರು.

ಸಚಿವ ಈಶ್ವರ ಖಂಡ್ರೆಗೆ ಕುಮಾರಸ್ವಾಮಿ ತಿರುಗೇಟು

“ಹೆಚ್ಎಂಟಿ ಕಾರ್ಖಾನೆ ಇರುವ ಜಾಗವನ್ನು 1967-68ರ ಅವಧಿಯಲ್ಲಿ ಮೈಸೂರು ಮಹಾರಾಜರು ಕಾನೂನುಬದ್ಧವಾಗಿ ಉಡುಗೊರೆಯಾಗಿ ನೀಡಿದ್ದರು. ನ್ಯಾಯಬದ್ಧವಾಗಿ ಸಿಕ್ಕಿರುವ ಈ ಜಾಗದ ವಿಷಯದಲ್ಲಿ ಈಗಿನ ರಾಜ್ಯ ಸರ್ಕಾರ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ನಿತ್ಯವೂ ಒಂದಿಲ್ಲೊಂದು ರೀತಿಯಲ್ಲಿ ತೊಂದರೆ ಕೊಡುತ್ತಿದೆ. ಹೆಚ್ಎಂಟಿ ಜಾಗವನ್ನು ಮಾರಾಟ ಮಾಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಆರೋಪಿಸುತ್ತಿದ್ದಾರೆ. ಇದನ್ನು ನಿಮ್ಮ ಅರಣ್ಯ ಇಲಾಖೆಯವರೇನಾದರೂ ಉಳಿಸಿದ್ದಾರಾ? ಕೋಲಾರದಲ್ಲಿ ಏನಾಗಿದೆ ಎಂಬುದು ನಮಗೆ ಚೆನ್ನಾಗಿ ಗೊತ್ತಿದೆ” ಎಂದು ತಿರುಗೇಟು ನೀಡಿದರು.

ಮತ್ತೊಬ್ಬರನ್ನು ತೆಗೆಳಲು ಟೌನ್​ಶಿಪ್ ಬಗ್ಗೆ ಮಾತನಾಡುತ್ತಿಲ್ಲ: ಹೆಚ್​ಡಿ ಕುಮಾರಸ್ವಾಮಿ

ಬಿಡದಿ ಟೌನ್​ಶಿಪ್ ವಿರೋಧಿಸಿ ರೈತರ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಅವರು, ‘‘ಆಡಳಿತ ನಡೆಸುವವರ ಕಣ್ಣು ತೆರೆಸಲು ಸಹಾಯ ಆಗುತ್ತದೆ. ನಾನು ಸ್ಪಷ್ಟವಾಗಿ ಹೇಳುತ್ತೇನೆ ಪ್ರಚಾರಕ್ಕಾಗಿ ಮಾತನಾಡುತ್ತಿಲ್ಲ. ಮತ್ತೊಬ್ಬರನ್ನು ತೆಗೆಳಲು ಟೌನ್​ಶಿಪ್ ಬಗ್ಗೆ ಮಾತನಾಡುತ್ತಿಲ್ಲ. ನಿನ್ನೆ ಸಿಎಂ ಡಿಕೆ ಶಿವಕುಮಾರ್​​ ತುಂಬಾ ನೋವಿನಲ್ಲಿ ಮಾತನಾಡಿದ್ದಾರೆ. ನಮಗೂ ನೋವು ಕೊಟ್ಕೋ ಬೇಡಿ ಎಂದು ಸಿಎಂ ಹೇಳಿದ್ದಾರೆ. ರಾಜ್ಯದಲ್ಲಿ ಇಂತಹ ಘಟನೆಯಿಂದ ನೋವಾಗುವುದು ಸಹಜ. ಕಠಿಣ ಹೃದಯ ಇದ್ದವರಿಗೆ ಯಾವುದೇ ರೀತಿಯ ನೋವಾಗಲ್ಲ ಎಂದು ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ.

ವರದಿ: ಈರಣ್ಣ ಬಸವ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ
ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ
ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ
ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ
ಮೂರೇ ವಾರಕ್ಕೆ ಕುಸಿದ 4,700 ಕೋಟಿ ವೆಚ್ಚದ ಲಕ್ನೋ-ಕಾನ್ಪುರ ಹೆದ್ದಾರಿ
ಮೂರೇ ವಾರಕ್ಕೆ ಕುಸಿದ 4,700 ಕೋಟಿ ವೆಚ್ಚದ ಲಕ್ನೋ-ಕಾನ್ಪುರ ಹೆದ್ದಾರಿ
ಒಳ್ಳೆಯ ಸಿನಿಮಾಕ್ಕಾಗಿ ನನ್ನ ಬಳಿ ಸಾಕಷ್ಟು ಹಣ ಇದೆ: ನಿರ್ಮಾಪಕ ವೆಂಕಟ್
ಒಳ್ಳೆಯ ಸಿನಿಮಾಕ್ಕಾಗಿ ನನ್ನ ಬಳಿ ಸಾಕಷ್ಟು ಹಣ ಇದೆ: ನಿರ್ಮಾಪಕ ವೆಂಕಟ್
ಟಾಕ್ಸಿಕ್ ಟ್ರೇಲರ್​: ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು’ ಎಂದ ಶಿವಣ್ಣ
ಟಾಕ್ಸಿಕ್ ಟ್ರೇಲರ್​: ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು’ ಎಂದ ಶಿವಣ್ಣ
‘ನನ್ನ ಜೀವನದ ಸ್ಮರಣೀಯ ಅನುಭವ’: ಟಾಕ್ಸಿಕ್ ಚಿತ್ರದ ಬಗ್ಗೆ ನಟ ಅಕ್ಷಯ್ ಓಬೆರಾ
‘ನನ್ನ ಜೀವನದ ಸ್ಮರಣೀಯ ಅನುಭವ’: ಟಾಕ್ಸಿಕ್ ಚಿತ್ರದ ಬಗ್ಗೆ ನಟ ಅಕ್ಷಯ್ ಓಬೆರಾ
‘ಆಲ್​ ದಿ ಬೆಸ್ಟ್​ ಟಾಕ್ಸಿಕ್’: ಟ್ರೈಲರ್​ ಲಾಂಚ್ ಮಾಡಿದ ಶಿವಣ್ಣ
‘ಆಲ್​ ದಿ ಬೆಸ್ಟ್​ ಟಾಕ್ಸಿಕ್’: ಟ್ರೈಲರ್​ ಲಾಂಚ್ ಮಾಡಿದ ಶಿವಣ್ಣ
ಕಾಂಗ್ರೆಸ್ ಅಸಮಾಧಾನಿತ ಶಾಸಕರಿಗೆ ಕುಮಾರಸ್ವಾಮಿ ಓಪರ್ ಆಫರ್!
ಕಾಂಗ್ರೆಸ್ ಅಸಮಾಧಾನಿತ ಶಾಸಕರಿಗೆ ಕುಮಾರಸ್ವಾಮಿ ಓಪರ್ ಆಫರ್!