Bengaluru News: ಮಸೀದಿ ಸಿಬ್ಬಂದಿಗಳ ಮೇಲಿನ ಕೋಪಕ್ಕೆ ಕುಚೇಷ್ಟೇ; ಹುಸಿ ಬಾಂಬ್ ಕರೆ ಮಾಡಿದ್ದ ಆರೋಪಿಯ ಬಂಧನ

ಬೆಂಗಳೂರಿನ ಶಿವಾಜಿನಗರದ ಮಸೀದಿಯಲ್ಲಿ ಬಾಂಬ್​ ಇದೆ ಎಂದು ಹುಸಿ ಕರೆ ಮಾಡಿದ್ದ ಆರೋಪಿಯನ್ನು ಶಿವಾಜಿನಗರ ಪೊಲೀಸರು ಬಂಧಿಸಿದ್ದಾರೆ.

Bengaluru News: ಮಸೀದಿ ಸಿಬ್ಬಂದಿಗಳ ಮೇಲಿನ ಕೋಪಕ್ಕೆ ಕುಚೇಷ್ಟೇ; ಹುಸಿ ಬಾಂಬ್ ಕರೆ ಮಾಡಿದ್ದ ಆರೋಪಿಯ ಬಂಧನ
ಆರೋಪಿ ಸೈಯದ್​ ಮಹಮ್ಮದ್ ಅನ್ವರ್ (ಎಡಚಿತ್ರ) ರೆಸೆಲ್​ ಮಾರುಕಟ್ಟೆ​ಶಿವಾಜಿನಗರ​ (ಬಲಚಿತ್ರ)
Follow us
Jagadisha B
| Updated By: ವಿವೇಕ ಬಿರಾದಾರ

Updated on: Jul 10, 2023 | 8:48 AM

ಬೆಂಗಳೂರು: ನಗರದ ಶಿವಾಜಿನಗರದ (Shivajinagar) ಆಜಾಂ ಮಸೀದಿಯಲ್ಲಿ (Mosque) ಬಾಂಬ್​ ಇದೆ ಎಂದು ಹುಸಿ ಕರೆ ಮಾಡಿದ್ದ ಆರೋಪಿಯನ್ನು ಶಿವಾಜಿನಗರ ಪೊಲೀಸರು (Shivajinagar Police) ಬಂಧಿಸಿದ್ದಾರೆ. ಮಹಾರಾಷ್ಟ್ರ (Maharashtra) ಮೂಲದ ಸೈಯದ್​ ಮಹಮ್ಮದ್ ಅನ್ವರ್​(37) ಬಂಧಿತ ಆರೋಪಿ.

ಜುಲೈ 4ರಂದು ಬೆಂಗಳೂರಿಗೆ ಬಂದಿದ್ದ ಸೈಯದ್​ ಮಹಮ್ಮದ್ ಅನ್ವರ್, ಮದರಸಾ ಹೆಸರಿನಲ್ಲಿ ಮಸೀದಿಗಳ ಬಳಿ ಚಂದಾ ಕೇಳುತ್ತಿದ್ದನು. ಹೀಗೆ ಶಿವಾಜಿನಗರದ ರಸೆಲ್ ಮಾರ್ಕೆಟ್ ಹಿಂದಿರುವ ಆಜಾಂ ಮಸೀದಿ ಬಳಿ ಚಂದಾ ಪಡೆದಿದ್ದ ಸೈಯದ್​ ರಾತ್ರಿ ಮಸೀದಿಯಲ್ಲಿ ಮಲಗಲು ಅವಕಾಶ ಕೇಳಿದ್ದಾನೆ. ಇದಕ್ಕೆ ಸಿಬ್ಬಂದಿ ಮಸೀದಿಯಲ್ಲಿ ಮಲಗಲು ಅವಕಾಶವಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಟೊಮೆಟೊ ತುಂಬಿದ್ದ ಬೊಲೆರೋ ವಾಹನ ಕಳವು, ರೈತ ಕಂಗಾಲು

ಇದರಿಂದ ಬೇಸರಗೊಂಡು ಮೆಜೆಸ್ಟಿಕ್​ಗೆ ತೆರಳಿ ಕರ್ನೂಲ್​ ಬಸ್​ ಹತ್ತಿದ್ದಾನೆ. ಬಸ್​​ ದೇವನಹಳ್ಳಿ ದಾಟುತ್ತಿದ್ದಂತೆ 112ಗೆ ಕರೆ ಮಾಡಿದ್ದ ಸೈಯದ್ ಮಸೀದಿಯಲ್ಲಿ ಬಾಂಬ್ ಇಟ್ಟಿದ್ದಾರೆಂದು ಹುಸಿ ಕರೆ ಮಾಡಿದ್ದಾನೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದಾಗ ಬಾಂಬ್​ ಇರಲಿಲ್ಲ. ಹುಸಿ ಬಾಂಬ್​ ಕರೆಯಂದು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಂತರ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಆಂಧ್ರಕ್ಕೆ ತೆರಳಿದ್ದ ಆರೋಪಿ ಸೈಯದ್​ನನ್ನು ಶಿವಾಜಿನಗರ ಪೊಲೀಸರು ಕರ್ನೂಲ್​ನಿಂದ ತೆಲಂಗಾಣದ ಮೆಹಬೂಬ್​ನಗರಕ್ಕೆ ತೆರಳಿದ್ದಾಗ ಬಂಧಿಸಿದ್ದಾರೆ. ಸೈಯದ್​ ಮಹಮ್ಮದ್ ಬಿಎಸ್​ಸಿ ಪದವಿ ಮುಗಿಸಿದ್ದು ಕೆಲಸ ಇರಲಿಲ್ಲ. ಹೀಗಾಗಿ ಊರೂರು ಸುತ್ತಿ ​ ಮಸೀದಿಗಳ ಬಳಿ ಚಂದಾ ಕೇಳುತ್ತಿದ್ದ. ಆರೋಪಿ ಸೈಯದ್​ ಮಹಮ್ಮದ್ ಈ ಹಣದಲ್ಲೇ ಜೀವನ ಸಾಗಿಸುತ್ತಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ