Bengaluru Rain: ಬೆಂಗಳೂರಿನ ಪೂರ್ವ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

| Updated By: ಆಯೇಷಾ ಬಾನು

Updated on: Sep 06, 2022 | 8:49 PM

ಬೆಂಗಳೂರಿನ ಪೂರ್ವ ತಾಲೂಕಿನಲ್ಲಿ ಮಳೆ ಹಿನ್ನೆಲೆ ಪೂರ್ವ ತಾಲೂಕಿನ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Bengaluru Rain: ಬೆಂಗಳೂರಿನ ಪೂರ್ವ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ
ಸಂಗ್ರಹ ಚಿತ್ರ
Follow us on

ಬೆಂಗಳೂರು: ಬೆಂಗಳೂರಿನಲ್ಲಿ ವರುಣನ ಅಬ್ಬರಕ್ಕೆ ಇಡೀ ನಗರ ಮುಳುಗುವ ಸ್ಥಿತಿಗೆ ಬಂದಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಹೀಗಾಗಿ ಬೆಂಗಳೂರಿನ ಪೂರ್ವ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳು ಸೇರಿದಂತೆ 1 ರಿಂದ 12ನೇ ತರಗತಿವರೆಗೂ ನಾಳೆ ರಜೆ ಘೋಷಿಸಿ ಬೆಂಗಳೂರಿನ ದಕ್ಷಿಣ ವಲಯ-4 ಕೆ.ಆರ್.ಪುರಂ ಬಿಇಒ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನ ಪೂರ್ವ ತಾಲೂಕಿನಲ್ಲಿ ಮಳೆ ಹಿನ್ನೆಲೆ ಪೂರ್ವ ತಾಲೂಕಿನ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜೊತೆಗೆ ಮುಂದಿನ 2 ಶನಿವಾರ ಪೂರ್ಣ ದಿನ ತರಗತಿ ನಡೆಸಲು ಸೂಚಿಸಲಾಗಿದೆ.

ಐಟಿ-ಬಿಟಿ ಕಂಪನಿಗಳ ಮುಖ್ಯಸ್ಥರ ಜೊತೆ ಸಚಿವರ ಸಭೆ

ಇನ್ನು ಮತ್ತೊಂದು ಕಡೆ ಬೆಂಗಳೂರು ನಗರದಲ್ಲಿ ಭಾರಿ ಮಳೆಯಿಂದ ಹತ್ತಾರು ಸಮಸ್ಯೆಗಳು ಎದುರಾಗುತ್ತಿರುವ ಹಿನ್ನೆಲೆ ನಾಳೆ ಸಂಜೆ ಐಟಿ-ಬಿಟಿ ಕಂಪನಿಗಳ ಮುಖ್ಯಸ್ಥರ ಜೊತೆ ಸಚಿವರು ಸಭೆ ನಡೆಸಲಿದ್ದಾರೆ. ಐಟಿ-ಬಿಟಿ ಇಲಾಖೆ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅವರು ರಾಜಧಾನಿಯಲ್ಲಿ ಮಳೆಯಿಂದ ಉಂಟಾಗಿರುವ ಸಮಸ್ಯೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಳೆ ಸಂಜೆ 5ಕ್ಕೆ ಸಭೆ ನಡೆಯಲಿದೆ. ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ಬಿಬಿಎಂಪಿ ಮುಖ್ಯ ಆಯುಕ್ತರು, ಜಲಮಂಡಳಿ ಅಧಿಕಾರಿಗಳು, ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು, ಬೆಂಗಳೂರು ಪೊಲೀಸ್ ಆಯುಕ್ತರು ಪಾಲ್ಗೊಳ್ಳಲಿದ್ದಾರೆ. ಇನ್ಫೋಸಿಸ್, ವಿಪ್ರೋ, ಎಂಫಸಿಸ್, ನಾಸ್ಕಾಂ, ಗೋಲ್ಡ್ಮನ್ ಸ್ಯಾಕ್ಸ್, ಇಂಟೆಲ್, ಟಿಸಿಎಸ್, ಫಿಲಿಪ್ಸ್, ಸೊನಾಟಾ ಕಂಪನಿಗಳಿಗೆ ಐಟಿ-ಬಿಟಿ ಸಚಿವ ಅಶ್ವತ್ಥ್ ನಾರಾಯಣ ನೇತೃತ್ವದ ಸಭೆಗೆ ಆಹ್ವಾನಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ