AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಾಪಕ ಮಳೆ: ಬೆಂಗಳೂರಿನಲ್ಲಿ ಅ.16ರಂದು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರಿನಲ್ಲಿ 2 ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಇಂದು (ಅಕ್ಟೋಬರ್ 15) ಬೆಳ್ಳಂಬೆಳಗ್ಗೆಯೇ ಮಳೆ ಸುರಿದ ಪರಿಣಾಮ ವಾಹನ ಸವಾರರು ಪರದಾಡುವಂತಾಯಿತು. ವರುಣನ ಆರ್ಭಟ ಇನ್ನೂ ಮೂರು ದಿನ ರಾಜ್ಯದಲ್ಲಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ನಾಳೆ(ಅಕ್ಟೋಬರ್ 16) ಬೆಂಗಳೂರಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ವ್ಯಾಪಕ ಮಳೆ: ಬೆಂಗಳೂರಿನಲ್ಲಿ ಅ.16ರಂದು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ
ಮಕ್ಕಳು Image Credit source: Indian Express
Vinay Kashappanavar
| Edited By: |

Updated on:Oct 15, 2024 | 7:44 PM

Share

ಬೆಂಗಳೂರು, ಅಕ್ಟೋಬರ್ 15) : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರ್ನಾಟಕದ ಒಳನಾಡಿನಲ್ಲಿ ಮಳೆ ಆರಂಭವಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಇಂದು(ಅಕ್ಟೊಬರ್ 15) ಬೆಳಗ್ಗೆಯಿಂದ ಭಾರೀ ಮಳೆ ಸುರಿಯುತ್ತಿದ್ದು, ರಸ್ತೆ-ಚರಂಡಿಗಳು ತುಂಬಿ ಹರಿಯುತ್ತಿವೆ. ಅಲ್ಲದೇ ವಿವಿಧ ಏರಿಯಾಗಳಲ್ಲಿ ಮರಗಳು ಸಹ ಮುರಿದುಬಿದ್ದು,  ಮಳೆ ನಗರದ ಹಲವೆಡೆ ಭಾರೀ ಅನಾಹುತ ಸೃಷ್ಟಿಸಿದೆ. ಆದರೂ ಮುಂದಿನ ಮೂರು ದಿನ ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ನಾಳೆ(ಅಕ್ಟೋಬರ್ 16) ಬೆಂಗಳೂರಿನ ಎಲ್ಲಾ ಶಾಲಾಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ರಾಜಧಾನಿಯಲ್ಲಿ ವ್ಯಾಪಕ ಮಳೆ ಹಿನ್ನಲೆಯಲ್ಲಿ ಅಕ್ಟೋಬರ್ 16ರಂದು ಬೆಂಗಳೂರಿನ ಎಲ್ಲಾ ಶಾಲಾ ರಜೆ ನೀಡಿ ಜಿಲ್ಲಾಧಿಕಾರಿ ಜಗದೀಶ್ ಸೂಚಿಸಿದ್ದಾರೆ. ಅಲ್ಲದೇ ಕಾಲೇಜು ತರಗತಿಗಳಿಗಳು ಮಾತ್ರ ಎಂದಿನಂತೆ ನಡೆಯಲಿವೆ.

ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅಕ್ಟೋಬರ್ 20 ರವರೆಗೆ ದಸರಾ ರಜೆ ಇದೆ. ಆದ್ರೆ ಖಾಸಗಿ ಶಾಲೆಗಳು ಶಾಲೆ ಆರಂಭ ಮಾಡಿವೆ. ಸೋಮುವಾರದಿಂದಲೆ ಖಾಸಗಿ ಶಾಲೆಗಳು ಪುನರಾರಂಭವಾಗಿವೆ. ಹೀಗಾಗಿ ಮಕ್ಕಳಿಗೆ ಶಾಲೆಗೆ ಬರಲು ಕಷ್ಟ ಎದುರಾಗಿದೆ. ಇದರಿಂದ ರಾಜಧಾನಿಯ ಶಾಲೆಗಳಿಗೆ ರಜೆ ನೀಡಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಸೂಚನೆ ನೀಡಿದ್ದಾರೆ.

Published On - 3:35 pm, Tue, 15 October 24