AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಖಾ ಕದಿರೇಶ್ ಹತ್ಯೆ ಪ್ರಕರಣ ಭೇದಿಸಿದ ಪೊಲೀಸ್ ತಂಡಕ್ಕೆ 1.25 ಲಕ್ಷ ಬಹುಮಾನ ನೀಡಿದ ಗೃಹಸಚಿವ ಆರಗ ಜ್ಞಾನೇಂದ್ರ

Rekha Kadiresh: ರೇಖಾ ಕದಿರೇಶ್ (Rekha Kadiresh) ಕೊಲೆ ಕೇಸ್ ಭೇದಿಸಿದ ತಂಡಕ್ಕೆ ಗೃಹಸಚಿವ ಆರಗ ಜ್ಞಾನೇಂದ್ರ 1.25 ಲಕ್ಷ ರೂಪಾಯಿ ನಗದು ಬಹುಮಾನ ನೀಡಿ ಪ್ರಶಂಸಿಸಿದ್ದಾರೆ.

ರೇಖಾ ಕದಿರೇಶ್ ಹತ್ಯೆ ಪ್ರಕರಣ ಭೇದಿಸಿದ ಪೊಲೀಸ್ ತಂಡಕ್ಕೆ 1.25 ಲಕ್ಷ ಬಹುಮಾನ ನೀಡಿದ ಗೃಹಸಚಿವ ಆರಗ ಜ್ಞಾನೇಂದ್ರ
ಕದಿರೇಶ್ ದಂಪತಿ
TV9 Web
| Updated By: ಆಯೇಷಾ ಬಾನು|

Updated on:Aug 18, 2021 | 11:49 AM

Share

ಬೆಂಗಳೂರು: ರೇಖಾ ಕದಿರೇಶ್ (Rekha Kadiresh) ಕೊಲೆ ಕೇಸ್ ಭೇದಿಸಿದ ತಂಡಕ್ಕೆ ಗೃಹಸಚಿವ ಆರಗ ಜ್ಞಾನೇಂದ್ರ 1.25 ಲಕ್ಷ ರೂಪಾಯಿ ನಗದು ಬಹುಮಾನ ನೀಡಿ ಪ್ರಶಂಸಿಸಿದ್ದಾರೆ. ಚಿಕ್ಕಪೇಟೆ ಎಸಿಪಿ ರವಿ ಮತ್ತು ತಂಡಕ್ಕೆ ಗೃಹಸಚಿವ ಆರಗ ಜ್ಞಾನೇಂದ್ರ ಪ್ರಶಂಸಿಸಿದ್ದಾರೆ.

ಈ ವೇಳೆ ಮಾತನಾಡಿದ ಅವರು ಪೊಲೀಸರು ಪ್ರಾಮಾಣಿಕರಾಗಿ ಕೆಲಸ ಮಾಡಬೇಕು. ಇಲ್ಲದಿದ್ದರೆ ಸಮಾಜ ಹಾಳಾಗುತ್ತದೆ. ಅಪ್ರಾಮಾಣಿಕ ಪೊಲೀಸರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಕೊಲೆ ಪ್ರಕರಣಗಳಲ್ಲಿ ಕೆಲ ಪೊಲೀಸರು ಭಾಗಿಯಾಗ್ತಾರೆ. ಅಂತಹ ಪೊಲೀಸರನ್ನು ನೋಡಿದರೆ ಅವಮಾನವಾಗುತ್ತದೆ. ಪ್ರಾಮಾಣಿಕ ಪೊಲೀಸರ ಬೆನ್ನು ತಟ್ಟುವ ಕೆಲಸ ಮಾಡ್ತೇವೆ. ಅಪ್ರಾಮಾಣಿಕ ಪೊಲೀಸರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತೆ. ಅಪರಾಧಿಗಳ ಪರ ನಿಲ್ಲುವಂತಹ ಪೊಲೀಸರ ಪಟ್ಟಿ ಮಾಡಿ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ನಡೆದ 24 ಗಂಟೆಗಳಲ್ಲೇ ಆರೋಪಿಗಳ ಬಂಧಿಸಿದ ಕಾರಣ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 1.25 ಲಕ್ಷ ಬಹುಮಾನ ನೀಡಿ ಗೃಹಸಚಿವ ಆರಗ ಜ್ಞಾನೇಂದ್ರ ತಂಡಕ್ಕೆ ಅಭಿನಂದಿಸಿದ್ದಾರೆ. ರೇಖಾ ಕದಿರೇಶ್ ಹತ್ಯೆ ನಡೆದ 24 ಗಂಟೆಗಳಲ್ಲಿ ಕಾಟನ್ ಪೇಟೆ ಪೊಲೀಸ್ ಸಿಬ್ಬಂದಿ, ಪಶ್ಚಿಮ ವಿಭಾಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.

ಮಾಜಿ ಕಾರ್ಪೊರೇಟರ್‌ ರೇಖಾ ಕದಿರೇಶ್ ಹತ್ಯೆ ಪ್ರಕರಣದ ತನಿಖೆಗೆಂದು ಪೊಲೀಸರು 6 ವಿಶೇಷ ತಂಡಗಳನ್ನು ರಚಿಸಿದ್ದರು. ಕಾಟನ್ಪೇಟೆ ಇನ್ಸ್ಪೆಕ್ಟರ್ ಚಿದಾನಂದ ಮೂರ್ತಿ, ಸಿಟಿಮಾರ್ಕೆಟ್ ಇನ್ಸ್ಪೆಕ್ಟರ್ ಕುಮಾರಸ್ವಾಮಿ, ಕಾಮಾಕ್ಷಿಪಾಳ್ಯ ಇನ್ಸ್ಪೆಕ್ಟರ್ ಪ್ರಶಾಂತ್, ಉಪ್ಪಾರಪೇಟೆ ಇನ್ಸ್ಪೆಕ್ಟರ್ ಶಿವಸ್ವಾಮಿ, ಕಲಾಸಿಪಾಳ್ಯ ಇನ್ಸ್ಪೆಕ್ಟರ್ ಚಂದ್ರಕಾಂತ್, ಚಾಮರಾಜಪೇಟೆ ಇನ್ಸ್ಪೆಕ್ಟರ್ ಲೋಕಾಪುರ ನೇತೃತ್ವದ ತಂಡಗಳು ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದವು.

ಕೊಲೆಗೆ ಸಂಬಂಧಿಸಿದಂತೆ ರಾತ್ರಿಯೇ 50ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. 39 ಜನರನ್ನು ಪೊಲೀಸರು ತಮ್ಮ ವಶದಲ್ಲಿಯೇ ಇರಿಸಿಕೊಂಡು ರಾತ್ರಿಯಿಡೀ ವಿಚಾರಣೆ ನಡೆಸಿದ್ದರು. ಈ ವೇಳೆ ಪ್ರಕರಣದ ಪ್ರಮುಖ ಆರೋಪಿ ಪೀಟರ್ ಜೊತೆಗೆ ಸಂಪರ್ಕ ಹೊಂದಿದ್ದ ವ್ಯಕ್ತಿಯೊಬ್ಬ ಪೊಲೀಸರಿಗೆ ಸಿಕ್ಕಿಬಿದ್ದ. ಇವನಿಂದ ಮತ್ತಷ್ಟು ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದರು.

ಎಲೆಕ್ಟ್ರಾನಿಕ್ ಸಿಟಿ, ಹೋಸೂರು ರಸ್ತೆ, ಸಿಂಗೇನ ಅಗ್ರಹಾರ, ಚಂದಾಪುರ, ವರ್ತೂರು, ಹುಸ್ಕೂರು ಬಳಿ ಪೊಲೀಸರು ಹುಡುಕಾಟ ನಡೆಸಿದ್ದರು. ಆರೋಪಿಗಳ ಪತ್ತೆಗಾಗಿ ಅಹೋರಾತ್ರಿ ನಡೆದ ಕಾರ್ಯಾಚರಣೆಯಲ್ಲಿ 30ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.

ಕೊಲೆ ಬಳಿಕೆ ಆರೋಪಿಗಳು ಒಂದೆಡೆ ನೆಲೆ ನಿಂತಿರಲಿಲ್ಲ. ಒಂದು ಕಡೆಯಿಂದ ಮತ್ತೊಂದು ಕಡೆಗೆ ಆಟೊದಲ್ಲಿ ತಿರುಗುತ್ತಲೇ ಇದ್ದರು. ನಸುಕಿನ ಮೂರೂವರೆ ಸುಮಾರಿಗೆ ಆರೋಪಿಗಳು ಆಟೊದಲ್ಲಿ ತಿರುಗಾಡುತ್ತಿರುವ ಮಾಹಿತಿ ಅರಿತ ಪೊಲೀಸರು ಆಟೊ ಬೆನ್ನುಹತ್ತಿದರು. ಆಸ್ಟಿಂಗ್ ಟೌನ್ನಲ್ಲಿ ಪೊಲೀಸರಿಗೆ ಮೊದಲಬಾರಿಗೆ ಆಟೊ ಬಗ್ಗೆ ಮಾಹಿತಿ ಸಿಕ್ಕಿತ್ತು.

ಆಸ್ಟಿನ್ ಟೌನ್ ಬಳಿಕ ಕೋರಮಂಗಲ, ಎಚ್ಎಸ್ಆರ್ ಲೇಔಟ್, ಎಲೆಕ್ಟ್ರಾನಿಕ್ ಸಿಟಿ, ಸಿಂಗೇನ ಅಗ್ರಹಾರ, ಕೊಡತಿ, ಚಿಕ್ಕನಾಯಕನಹಳ್ಳಿ, ಶ್ರಿರಾಮಪುರ, ರಾಜಾಜಿನಗರ, ವಿಜಯನಗರ, ರಾಜಾಜಿನಗರದಲ್ಲಿ ಆರೋಪಿಗಳು ಸಂಚರಿಸಿದ್ದರು. ಮೈಸೂರು ರಸ್ತೆಯ ಮೂಲಕ ಅರೋಪಿಗಳು ಸಂಚರಿಸಿರುವ ವಿಷಯ ಪೊಲೀಸರಿಗೆ ಪಕ್ಕಾ ಆಗಿತ್ತು. ಆದರೆ ಬೆಳಿಗ್ಗೆ ಒಂಬತ್ತು ಮುಕ್ಕಾಲಿಗೆ ಆರೋಪಿಗಳ ಜಾಡು ಪೊಲೀಸರಿಗೆ ತಪ್ಪಿಹೋಗಿತ್ತು.

ಸ್ವಲ್ಪ ಹೊತ್ತಿನ ನಂತರ ಮಾಗಡಿ ರಸ್ತೆಯಲ್ಲಿ ಆರೋಪಿಗಳ ಚಲನಚಲನದ ಮಾಹಿತಿ ಸಿಕ್ಕಾಗ ಪೊಲೀಸರು ಕಾರ್ಯಾಚರಣೆಯನ್ನು ಇನ್ನಷ್ಟು ಚುರುಕುಗೊಳಿಸಿದರು. ಹಲವು ತಂಡಗಳೊಂದಿಗೆ ಆರೋಪಿಗಳ ಬೆನ್ನುಹತ್ತಿದರು. ಹನ್ನೆರಡು ಗಂಟೆ ವೇಳೆಗೆ ಸುಂಕದಕಟ್ಟೆ ಬಳಿಯ ಬಜಾಜ್ ಗ್ರೌಂಡ್ ಬಳಿ ಆರೋಪಿಗಳು ಇರುವ ಮಾಹಿತಿಯನ್ನು ದೃಢಪಡಿಸಿಕೊಂಡ ಉಪ್ಪಾರಪೇಟೆ ಇನ್ಸ್ಪೆಕ್ಟರ್ ಶಿವಸ್ವಾಮಿ ಮತ್ತು ಕಾಟನ್ಪೇಟೆ ಇನ್ಸ್ಪೆಕ್ಟರ್ ಚಿದಾನಂದಮೂರ್ತಿ ಆರೋಪಿಗಳನ್ನು ಗುರುತಿಸಿ, ಬಂಧಿಸಲು ಮುಂದಾದರು.

ಮದ್ಯಪಾನ ಮಾಡುತ್ತಿದ್ದ ಆರೋಪಿಗಳು ಸಬ್ಇನ್ಸ್ಪೆಕ್ಟರ್ ಕರಿಯಣ್ಣ ಮತ್ತು ಹೆಡ್ ಕಾನ್ಸ್ಟೆಬಲ್ ಚಂದ್ರಶೇಖರ್ ಮೇಲೆ ಹಲ್ಲೆ ಮಾಡಲು ಮುಂದಾದರು. ಈ ವೇಳೆ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ ಪೊಲೀಸರು, ಅರೋಪಿಗಳ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದುಕೊಂಡು ಲಕ್ಷ್ಮೀ ಅಸ್ಪತ್ರೆಗೆ ದಾಖಲು ಮಾಡಿದರು. ಮಾಗಡಿ ರಸ್ತೆ ಠಾಣೆಯ ಇನ್ಸ್ಪೆಕ್ಟರ್ ಶ್ರೀನಿವಾಸ್ ನೇತೃತ್ವದ ತಂಡವು ತಾಂತ್ರಿಕ ಕೆಲಸಗಳನ್ನು ನಿರ್ವಹಿಸಿತ್ತು.

ಇದನ್ನೂ ಓದಿ: Rekha Kadiresh: ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ.. ಮತ್ತೋರ್ವ ಆರೋಪಿ ಅರೆಸ್ಟ್

Published On - 11:38 am, Wed, 18 August 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!