ಮಕ್ಕಳ ಮನಸ್ಸಿನಲ್ಲಿ ವಿಷಬೀಜ ಬಿತ್ತಿ ಪೊಲೀಸರು ಲಾಠಿ ಬೀಸುವಂತೆ ಆಗಬಾರದು: ಗೃಹ ಸಚಿವ ಆರಗ ಜ್ಞಾನೇಂದ್ರ

ಕೊವಿಡ್ ಬಂದು ಮಕ್ಕಳ ವಿದ್ಯಾಭ್ಯಾಸಕ್ಕೆ ಈಗಾಗಲೇ ತೊಂದರೆಯಾಗಿದೆ. ತರಗತಿಗಳನ್ನು ಶೀಘ್ರ ಆರಂಭಿಸಬೇಕಿದೆ. ಎಲ್ಲ ಪೋಷಕರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ಮಕ್ಕಳ ಮನಸ್ಸಿನಲ್ಲಿ ವಿಷಬೀಜ ಬಿತ್ತಿ ಪೊಲೀಸರು ಲಾಠಿ ಬೀಸುವಂತೆ ಆಗಬಾರದು: ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 10, 2022 | 9:37 PM

ಬೆಂಗಳೂರು: ಕರ್ನಾಟಕದಲ್ಲಿ ಹೈಕೋರ್ಟ್ ಸೂಚನೆಯಂತೆ ಶಾಲೆಗಳನ್ನು ಮತ್ತೆ ಆರಂಭಿಸಲಾಗುತ್ತಿದೆ. ಮಕ್ಕಳ ಮನಸ್ಸಿನಲ್ಲಿ ಯಾವುದೇ ಕಾರಣಕ್ಕೂ ಯಾರೊಬ್ಬರೂ ವಿಷಬೀಜ ಬಿತ್ತಬಾರದು. ಪೊಲೀಸರು ಕಾನೂನು ಕ್ರಮ ಜರುಗಿಸಿ, ಲಾಠಿ ಬೀಸುವಂತೆ ಆಗಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಶಾಲಾ ಕಾಲೇಜುಗಳನ್ನು ಆರಂಭಿಸುವಂತೆ ನ್ಯಾಯಾಲಯವು ಸೂಚನೆ ನೀಡಿದೆ. ಕಾಲೇಜುಗಳನ್ನು ಎಂದಿನಿಂದ ಆರಂಭಿಸಬೇಕು ಎಂಬ ಬಗ್ಗೆ ಭಾನುವಾರ ಅಥವಾ ಸೋಮವಾರ ಚರ್ಚಿಸಿ, ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು. ಪ್ರಸ್ತುತ ರಾಜ್ಯದ ಎಲ್ಲ ಕ್ಯಾಂಪಸ್​ಗಳು ಶಾಂತಿಯುತವಾಗಿವೆ. ಪೊಲೀಸರು ಸಮರ್ಪಕ ರೀತಿಯಲ್ಲಿ ಪರಿಸ್ಥಿತಿ ನಿಭಾಯಿಸುತ್ತಿದ್ದಾರೆ. ಸೋಮವಾರರಿಂದ 10ನೇ ತರಗತಿವರೆಗೆ ಶಾಲೆಗಳು ನಡೆಯಲಿವೆ. ಮುಂದಿನ ಆದೇಶದವರೆಗೂ ಪಿಯುಸಿ ತರಗತಿಗಳಿಗೆ ರಜೆ ಇರುತ್ತದೆ ಎಂದು ತಿಳಿಸಿದರು. ಕೊವಿಡ್ ಬಂದು ಮಕ್ಕಳ ವಿದ್ಯಾಭ್ಯಾಸಕ್ಕೆ ಈಗಾಗಲೇ ತೊಂದರೆಯಾಗಿದೆ. ತರಗತಿಗಳನ್ನು ಶೀಘ್ರ ಆರಂಭಿಸಬೇಕಿದೆ. ಎಲ್ಲ ಪೋಷಕರೂ ಸಹಕರಿಸಬೇಕು. ಮಕ್ಕಳಿಗೆ ಓದಲು ಅನುವು ಮಾಡಿಕೊಡಬೇಕು ಎಂದು ವಿನಂತಿಸಿದರು.

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾತನಾಡಿ, ವಿದ್ಯಾರ್ಥಿಗಳು ಸಮವಸ್ತ್ರದಲ್ಲೇ ಶಾಲೆಗೆ ಬರಬೇಕು. ಪೋಷಕರು ಇದನ್ನು ಖಾತ್ರಿಪಡಿಸಿಕೊಳ್ಳಬೇಕು. ನ್ಯಾಯಾಲಯವು ಒಂದು ಹಂತದಲ್ಲಿ ಶಾಲೆಗಳ ಬಾಗಿಲು ತೆಗೆದಯಬೇಕು ಎಂದು ನಿರ್ಣಯ ಕೊಟ್ಟಿದೆ. ಕೊರೊನಾ ಮೂರನೇ ಅಲೆಯಲ್ಲೂ ಶಾಲೆಗಳನ್ನು ತೆರೆದು ಮಕ್ಕಳಿಗೆ ಶಿಕ್ಷಣ ಒದಗಿಸುವ ಕೆಲಸ ಮಾಡಿದ್ದೇವೆ. ನಮ್ಮೆಲ್ಲಾ ತರಗತಿಗಳು ನಡೆದಿದೆ. ಕರ್ನಾಟಕದ ಜನರು ಕೋರ್ಟ್ ತೀರ್ಪು ಉಲ್ಲಂಘಿಸಿಲ್ಲ. ಈ ಬಾರಿಯೂ ನ್ಯಾಯಾಲಯದ ಸೂಚನೆಗೆ ಗೌರವ ಕೊಡುತ್ತಾರೆ ಎಂಬ ವಿಶ್ವಾಸವಿದೆ. ರಾಜ್ಯದಲ್ಲಿ ಈಗ ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಪರೀಕ್ಷೆಗೆ ತಯಾರಿ ನಡೆಯುತ್ತಿದೆ. ಸಾಧ್ಯವಾದಷ್ಟೂ ಬೇಗ ಪಿಯುಸಿ ಮತ್ತು ಡಿಗ್ರಿ ಕಾಲೇಜು ಆರಂಭವಾಗಲಿದೆ ಎಂದರು.

ಪದವಿ ಪರೀಕ್ಷೆ ಮುಂದೂಡಲು ಮನವಿ

ಕೊರೊನಾ ಮತ್ತು ಅತಿಥಿ ಉಪನ್ಯಾಸಕರ ಮುಷ್ಕರದ ಕಾರಣದಿಂದ ಬಹುತೇಕ ಕಾಲೇಜುಗಳಲ್ಲಿ ನಿಗದಿತ ಪಠ್ಯಕ್ರಮದ ಬೋಧನೆ ಮುಗಿದಿಲ್ಲ. ಈ ಹಿನ್ನೆಲೆಯಲ್ಲಿ ಪದವಿ ಕೋರ್ಸ್​ಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಅವಧಿಗೆ ಮುಂದೂಡಬೇಕೆಂದು ಕಾಲೇಜು ಶಿಕ್ಷಣ ಆಯುಕ್ತ ಪ್ರದೀಪ್ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿದ್ದಾರೆ. ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿವೆ. ಆದರೆ ಬೋಧನಾ ಕಾರ್ಯ ಇನ್ನೂ ಮುಗಿದಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದೂಡುವಂತೆ ರಾಜ್ಯದ ಎಲ್ಲಾ ವಿವಿಗಳಿಗೂ ನಿರ್ದೇಶನ ನೀಡಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ಮುಂದೂಡಬೇಕು ಎಂದು ಅವರು ಕೋರಿದ್ದಾರೆ.

ಇದನ್ನೂ ಓದಿ: Karnataka High Court: ಶಾಲೆಗಳಿಗೆ ಶಾಲು, ಹಿಜಾಬ್ ಬೇಡ: ಮೌಖಿಕ ಸೂಚನೆ ಕೊಟ್ಟು ಫೆ 14ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್​

ಇದನ್ನೂ ಓದಿ: ಹಿಜಾಬ್ ವಿಚಾರ ದೊಡ್ಡದು ಮಾಡಿ ಮಕ್ಕಳು ಮನಸ್ಸು ಹಾಳು ಮಾಡಿದ್ದಾರೆ: ರೇಣುಕಾಚಾರ್ಯ ಆಕ್ರೋಶ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM