AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anti Conversion Bill: ವಿಧಾನ ಪರಿಷತ್​ನಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ವಿಧಾನ ಪರಿಷತ್​ನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮತಾಂತರ ನಿಷೇಧ ವಿಧೇಯಕ ಮಂಡಿಸಿದರು.

Anti Conversion Bill: ವಿಧಾನ ಪರಿಷತ್​ನಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Edited By: |

Updated on:Sep 15, 2022 | 1:34 PM

Share

ಬೆಂಗಳೂರು: ವಿಧಾನ ಪರಿಷತ್​ನಲ್ಲಿ ಇಂದು ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ (ಮತಾಂತರ ನಿಷೇಧ ಕಾಯ್ದೆ) ಮಂಡನೆ ಮಾಡಲಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಮತಾಂತರ ನಿಷೇಧ ವಿಧೇಯಕ(Anti Conversion Bill) ಮಂಡಿಸಿದರು.

ಇದು ಬಹಳ ಮಹತ್ವದ ಕಾಯ್ದೆಯನ್ನ ಸರ್ಕಾರ ತಂದಿದೆ. 2013 ರಲ್ಲಿ ಕಾಂಗ್ರೆಸ್‌ ಸರ್ಕಾರ ಇದ್ದಾಗಲು ಇದರ ಬಗ್ಗೆ ಚಿಂತನೆ ನಡೆಸಿತ್ತು. ಎಲ್ಲರಿಗೂ ಅವರವರ ಧಾರ್ಮಿಕ ಹಕ್ಕಿನಲ್ಲಿ ಬದುಕುವ ಅವಕಾಶ ವಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಬಲವಂತದಿಂದ, ಆಮೀಷದ ಮತಾಂತರ ನಡೆಯುತ್ತಿದೆ. ನಮ್ಮ ಶಾಸಕರೇ ಕಳೆದ ಬಾರಿ ವಿಧಾನ ಸಭೆಯಲ್ಲಿ ಹೇಳಿದ್ರು ನನ್ನ ತಾಯಿಯನ್ನೆ ಮತಾಂತರ ಮಾಡಲಾಗಿದೆ ಎಂದು ಹೇಳಿದ್ರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಧಿವೇಶನದಲ್ಲಿ ಪ್ರಸ್ತಾಪಿಸಿದರು. ಇದನ್ನೂ ಓದಿ: ಸದನದ ಕಲಾಪಕ್ಕೆ ತಡವಾಗಿ ಅಗಮಿಸಿದ ಡಾ ಅಶ್ವತ್ಥ್​ ನಾರಾಯಣ್​ರನ್ನು ಸಭಾಧ್ಯಕ್ಷರು ‘ಯಾಕೆ ತಡ’ ಅಂತ ಪ್ರಶ್ನಿಸಿದರು!

ಕಳೆದ ಬಾರಿ ಈ ಕಾಯ್ದೆಯನ್ನು ವಿಧಾನ ಸಭೆಯಲ್ಲಿ ಅಂಗೀಕರಿಸಲಾಗಿತ್ತು. ಮತಾಂತರವಾಗಲು ಎಲ್ಲರಿಗೂ ಅವಕಾಶ ಇದೆ. ಆದರೆ ಬಲವಂತವಾಗಿ, ಒತ್ತಡದಿಂದ, ಆಮೀಷದಿಂದ ಆಗಬಾರದು. ಹೀಗಾಗಿ ಮತಾಂತರ ಮಾಡುವ ವೇಳೆ ಸ್ವಹಿಚ್ಚೆಯಿಂದ ಆಗ್ತಿದ್ದೀನಿ ಎಂದು ಘೋಷಿಸಬೇಕು. ಮತಾಂತರ ಮಾಡುವವರು ಸಹ ವ್ಯಕ್ತಿಯ ಇಚ್ಚೆಯಂತೆ ಮತಾಂತರ ಮಾಡುತ್ತಿದ್ದೇವೆ ಎಂದು ಘೋಷಿಸಬೇಕು. ಮತಾಂತರ ಆದವರು ಈ ಹಿಂದಿನ ತಮ್ಮ ಜಾತಿಯ ಎಲ್ಲ ಸೌಲಭ್ಯ ಕಳೆದುಕೊಳ್ಳುತ್ತಾರೆ ಎಂದರು.

ಮತಾಂತರ ನಿಷೇಧ ಕಾಯ್ದೆಯ ಮುಖ್ಯಾಂಶಗಳು

1) ಮತಾಂತರ ಅಗಬಯಸುವ ವ್ಯಕ್ತಿ 60 ದಿನಗಳ ಮೊದಲು ಫಾರ್ಮ್ 1 ಅನ್ನು ಭರ್ತಿ ಮಾಡಿ ಜಿಲ್ಲಾಧಿಕಾರಿ ಅಥವಾ ಅಪರ ಜಿಲ್ಲಾಧಿಕಾರಿ ಬಳಿ ಮಾಹಿತಿ ನೀಡತಕ್ಕದ್ದು.

2) ಮತಾಂತರ ಮಾಡಿಸುವ ವ್ಯಕ್ತಿಯೂ ಕೂಡ ಒಂದು ತಿಂಗಳ ಮೊದಲು ಈಗಾಗಲೇ ಫಾರ್ಮ್ 2 ಅನ್ನು ಭರ್ತಿಮಾಡಿ ಜಿಲ್ಲಾಧಿಕಾರಿ ಅಥವಾ ಅಪರ ಜಿಲ್ಲಾಧಿಕಾರಿಗೆ ಮಾಹಿತಿ ನೀಡತಕ್ಕದ್ದು

3) ಮತಾಂತರವಾದ ಒಂದು ತಿಂಗಳ ಬಳಿಕ ಡಿಕ್ಲರೇಷನ್ ಫಾರ್ಮ್ ಅಥವಾ ಘೋಷಣಾಪತ್ರವನ್ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ಭರ್ತಿ ಮಾಡಿ ನೀಡತಕ್ಕದ್ದು

4) ಡಿಕ್ಲರೇಷನ್ ಮಾಡಿದ 21 ದಿನಗಳ ಬಳಿಕ ಮತಾಂತರ ಹೊಂದಿದ ವ್ಯಕ್ತಿ ಖುದ್ದು ಹಾಜರಾಗಿ ಗುರುತು ನೀಡತಕ್ಕದ್ದು

5) ಈ ವೇಳೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತಾಂತರೊತ್ತರ ಘಟನೆಯ ಸಂಪೂರ್ಣ ಘಟನೆಯನ್ನು ದಾಖಲಿಸತಕ್ಕದ್ದು

6) ತಕರಾರುಗಳಿದ್ದಲ್ಲಿ ತಕರಾರು ಎತ್ತಿದ ವ್ಯಕ್ತಿ ಹಾಗೂ ತಕರಾರಿನ ಸ್ವರೂಪವನ್ನ ದಾಖಲಿಸತಕ್ಕದ್ದು

7) ಮತಾಂತರ ಹೊಂದಿದವರಿಗೆ ಜಿಲ್ಲಾ ದಂಡಾಧಿಕಾರಿಗಳು ದೃಢೀಕರಿಸಿದ ಪ್ರತಿಗಳನ್ನು ನೀಡತಕ್ಕದ್ದು

8) ತಕರಾರುಗಳಿದ್ದ ಪಕ್ಷದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಬಂಧ ಪಟ್ಟ ಇಲಾಖೆಗಳಾದ ಕಂದಾಯ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ಸೇರಿದಂತೆ ಇತರ ಸಂಬಂಧ ಪಟ್ಟ ಇಲಾಖೆಗಳಿಗೆ ಮಾಹಿತಿ ನೀಡತಕ್ಕದ್ದು

9) ಮ್ಯಾಜಿಸ್ಟ್ರೇಟ್​‌ರಿಂದ ಮಾಹಿತಿ ಸ್ವಕರಿಸಿದ ಬಳಿಕ ಸಂಬಂಧಪಟ್ಟ ಇಲಾಖೆ ಮತಾಂತರ ಹೊಂದಿದ ವ್ಯಕ್ತಿಯ ಸಾಮಾಜಿಕ ಸ್ಥಾನಮಾನ ಹಾಗೂ ಸರ್ಕಾರದಿಂದ ಸಿಗುವ ಆರ್ಥಿಕ ಲಾಭಗಳ ಬಗ್ಗೆ ಸೂಕ್ತ ಕ್ರಮ ವಹಿಸುವುದು.

Published On - 1:31 pm, Thu, 15 September 22