ಶೀಘ್ರ PFI, SDPI ಬ್ಯಾನ್: ಪೂರಕ ಸಾಕ್ಷ್ಯ ಕಲೆಹಾಕಿದ ಶಿವಮೊಗ್ಗ ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅಭಿನಂದನೆ
ಸಂಘಟನೆಗಳನ್ನ ಬ್ಯಾನ್ ಮಾಡಲು ಸಮಯ ಬರಬೇಕು. ಶಂಕಿತ ಉಗ್ರರನ್ನ ಬಂಧಿಸಿದ ಪೊಲೀಸರಿಗೆ ಅಭಿನಂದನೆ ಎಂದು ಶಿವಮೊಗ್ಗ ಪೊಲೀಸರಿಗೆ ಗೃಹಸಚಿವ ಅರಗ ಜ್ಞಾನೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರು: ಪ್ರೇಮ್ಸಿಂಗ್ ಚೂರಿ ಇರಿತ ಪ್ರಕರಣದ ತನಿಖೆ ಚುರುಕಾಯುತ್ತಿದ್ದಂತೆ ರಾಜ್ಯ ಸೇರಿ ಇಡೀ ದೇಶಾದ್ಯಂತ ಭಯೋತ್ಪಾದಕ ಚಟುವಟಿಕೆಗೆ ಹೊಂಚು ಹಾಕಿ ಕುಳಿತಿದ್ದ ಶಂಕಿತ ಉಗ್ರ ಮಾಜ್ ಹಾಗೂ ಯಾಸೀನ್ನನ್ನ ಪೊಲೀಸರು ಬಂಧಿಸಿದ್ದಾರೆ. ಮತ್ತೊಂದು ಕಡೆ ಇಂದು ಬೆಂಗಳೂರು, ಮಂಗಳೂರು ಸೇರಿದಂತೆ ದೇಶದಾದ್ಯಂತ 13 ರಾಜ್ಯಗಳಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಾಳಿ ನಡೆಸಿದೆ. ಪಿಎಫ್ಐ (Popular Front of India-PFI) ಮತ್ತು ಎಸ್ಡಿಪಿಐ (Social Democratic Party of India-SDPI) ಕಚೇರಿಗಳ ಮೇಲೆ ದಾಳಿ ಮಾಡಿ ಸುಮಾರು 100ಕ್ಕೂ ಪಿಎಫ್ಐ ನಾಯಕರು, ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಸುದ್ದಿಗೋಷ್ಠಿ ನಡೆಸಿದ್ದು ಸಂಘಟನೆ ಬ್ಯಾನ್ ಮಾಡುವ ನಿಟ್ಟಿನಲ್ಲಿ ಕಾರ್ಯ ನಡೆಯುತ್ತಿದೆ ಎಂದಿದ್ದಾರೆ.
PFI, SDPI ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ. ಕೇಂದ್ರ ಸರ್ಕಾರ ಈ ಕುರಿತು ನಿರ್ಧಾರ ತೆಗೆದುಕೊಳ್ಳುತ್ತೆ. ಸಂಘಟನೆಗಳನ್ನ ಬ್ಯಾನ್ ಮಾಡಲು ಸಮಯ ಬರಬೇಕು. ಶಂಕಿತ ಉಗ್ರರನ್ನ ಬಂಧಿಸಿದ ಪೊಲೀಸರಿಗೆ ಅಭಿನಂದನೆ. ಧರ್ಮ ನೋಡಿ ಪೊಲೀಸರು ಕಾರ್ಯಚರಣೆ ಮಾಡಲ್ಲ ಎಂದು ಶಿವಮೊಗ್ಗ ಪೊಲೀಸರಿಗೆ ಗೃಹಸಚಿವ ಅರಗ ಜ್ಞಾನೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ.
PFI ಸಂಘಟನೆ ಏನೇನು ಕೃತ್ಯ ಮಾಡುತ್ತಿದೆ ಮಾಹಿತಿ ಇದೆ
ಇದೇ ವೇಳೆ ಆರಗ ಜ್ಞಾನೇಂದ್ರ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಮಾಹಿತಿ ಆಧಾರದ ಮೇಲೆ NIAಯವರು ದಾಳಿ ಮಾಡಿದ್ದಾರೆ. ಅದನ್ನ ತಡೆದು ಪ್ರತಿಭಟನೆ ಮಾಡುತ್ತಾರೆ ಅಂದರೆ ಏನರ್ಥ? ಇಂಥ ದುಷ್ಟ ಶಕ್ತಿಗಳಿಗೆ ಬೆಂಬಲ ಕೊಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. NIA ದಾಳಿಯಲ್ಲಿ ಯಾವ ರಾಜಕೀಯ ಇಲ್ಲ. PFI ಸಂಘಟನೆ ಏನೇನು ಕೃತ್ಯ ಮಾಡುತ್ತಿದೆ ಮಾಹಿತಿ ಇದೆ. ಕಾಂಗ್ರೆಸ್ ಇಂಥ ದುಷ್ಟ ಶಕ್ತಿಯನ್ನ ಬೆಳೆಸಿದ್ದರಿಂದ ಪ್ರಾಣಹಾನಿಯಾಗಿದೆ. ವೋಟ್ ಬ್ಯಾಂಕ್ ರಾಜಕಾರಣದಿಂದ ಪ್ರಾಣಹಾನಿ ಆಗುತ್ತಿವೆ ಎಂದು ಕಾಂಗ್ರೆಸ್ ವಿರುದ್ಧ ಗೃಹಸಚಿವ ಆರಗ ಜ್ಞಾನೇಂದ್ರ ಆಕ್ರೋಶ ಹೊರ ಹಾಕಿದ್ರು.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 10:01 am, Thu, 22 September 22