ಪಿಯು ವೇಳಾಪಟ್ಟಿ ಪ್ರಕಟವಾಗಿದೆ, ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿ: ಗೃಹ ಸಚಿವ ಆರಗ ಜ್ಞಾನೇಂದ್ರ

ಕಲ್ಲು ತೂರಾಟ ನಡೆಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಸಿದರು.

ಪಿಯು ವೇಳಾಪಟ್ಟಿ ಪ್ರಕಟವಾಗಿದೆ, ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿ: ಗೃಹ ಸಚಿವ ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 08, 2022 | 9:53 PM

ಬೆಂಗಳೂರು: ಕರ್ನಾಟಕದಲ್ಲಿ ಪಿಯುಸಿ ವೇಳಾಪಟ್ಟಿ (PU Time Table) ಪ್ರಕಟವಾಗಿದೆ. ಮಕ್ಕಳ ಶಿಕ್ಷಣದ ಬಗ್ಗೆ ನಾವೆಲ್ಲರೂ ಯೋಚನೆ ಮಾಡಬೇಕಿದೆ. ಪೋಷಕರು ಇತರ ವಿಷಯಗಳನ್ನು ದೊಡ್ಡದು ಮಾಡದೆ, ಮಕ್ಕಳು ಶಾಂತರೀತಿಯಿಂದ ತರಗತಿಗಳಿಗೆ ಹಾಜರಾಗಲು ನೆರವಾಗಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ  (Araga Jnanendra) ಹೇಳಿದರು. ಮಕ್ಕಳ ಶಿಕ್ಷಣದ ಬಗ್ಗೆ ನಾವೆಲ್ಲರೂ ಯೋಜನೆ ಮಾಡಬೇಕಿದೆ. ಕಳೆದ ಐದಾರು ದಿನಗಳಿಂದ ರಾಜ್ಯದಲ್ಲಿ ಹಿಜಾಬ್ ವಿವಾದ ಗರಿಗೆದರಿದೆ. ಹಲವೆಡೆ ಅಹಿತಕರ ಘಟನೆಗಳು ವರದಿಯಾಗಿದ್ದು ಕಲ್ಲು ತೂರಾಟ ನಡೆಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಸಿದರು.

ನಗರದಲ್ಲಿ ಮಂಗಳವಾರ (ಫೆ.8) ಸಂಜೆ ಉನ್ನತ ಮಟ್ಟದ ಸಭೆಯ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲಿಯೇ ಆಗಲಿ, ಕಲ್ಲುತೂರಾಟ ನಡೆಸಿದವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ. ನಾನು ಮೊದಲಿಂದಲೂ ಎಲ್ಲ ಬೆಳವಣಿಗೆ ಗಮನಿಸುತ್ತಿದ್ದೇನೆ. ತಾಳ್ಮೆಯಿಂದ ಈ ವಿವಾದ ನಿಭಾಯಿಸಬೇಕಾಗಿದೆ. ನ್ಯಾಯಾಲಯ ನೀಡುವ ತೀರ್ಪನ್ನು ಎಲ್ಲರೂ ಪಾಲಿಸಬೇಕು. ರಾಜ್ಯದಲ್ಲಿ ನಡೆದಿರುವ ಅಹಿತಕರ ಘಟನೆಗಳ ಹಿಂದೆ ಹಲವರ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ ಎಂದರು. ಏಕರೂಪದ ಸಮವಸ್ತ್ರ ಸಂಹಿತೆಗೆ ಕರ್ನಾಟಕ ಸರ್ಕಾರವು ಬದ್ಧವಾಗಿದೆ. ಇದು ಸೂಕ್ಷ್ಮ ವಿಚಾರ. ಪ್ರತಿಪಕ್ಷಗಳು ಈ ಬಗ್ಗೆ ಎಚ್ಚರದಿಂದ ವರ್ತಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಕಿವಿಮಾತು ಹೇಳಿದರು.

ಮುಖ್ಯಮಂತ್ರಿ ಸೂಚನೆ ಮೇರೆಗೆ ಗೃಹ ಸಚಿವರು ನಡೆಸಿದ ಸಭೆಯಲ್ಲಿ ಪ್ರಾಥಮಿಕ ಮತ್ತು ‌ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ, ಹಿರಿಯ‌ ಪೊಲೀಸ್ ಅಧಿಕಾರಿಗಳು, ಹಿರಿಯ ಐಎಎಸ್ ಅಧಿಕಾರಿಗಳು ಪಾಲ್ಗೊಂಡಿದ್ದರು. ಪ್ರಕರಣದ ವಿಚಾರಣೆಯು ಪ್ರಸ್ತುತ ನ್ಯಾಯಾಲಯದಲ್ಲಿ ಬಾಕಿಯಿದೆ. ಡ್ರೆಸ್ ಕೋಡ್ ಹೇಗಿರಬೇಕು ಎನ್ನುವ ಕುರಿತು ಶಿಕ್ಷಣ ಸಚಿವರು ಸಭೆಯಲ್ಲಿ ವಿವರ ನೀಡಿದರು.

ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆ ಹದಗೆಡಲು ಬಿಡುವುದಿಲ್ಲ. ಮುಖ್ಯಮಂತ್ರಿಗಳು ಶಾಂತಿ‌ ಕಾಪಾಡಲು ಮನವಿ‌ ಮಾಡಿದ್ದಾರೆ. ಪೋಷಕರು ಮಕ್ಕಳಿಗೆ ಈ ಕುರಿತು ಅರಿವು ಮೂಡಿಸಬೇಕಿದೆ. ಕಳೆದ ಎರಡು ವರ್ಷಗಳಿಂದ ಕೋವಿಡ್​ನಿಂದಾಗಿ ಶಾಲಾ ಕಾಲೇಜುಗಳನ್ನು ನಿರೀಕ್ಷಿತ ಪ್ರಮಾಣದಲ್ಲಿ ನಡೆಸಲು ಸಾಧ್ಯವಾಗಿಲ್ಲ. ಈ ಹಿನ್ನಲೆಯಲ್ಲಿ ವಿದ್ಯಾಭ್ಯಾಸದ ಕಡೆಗೆ ಹೆಚ್ವಿನ ಗಮನ ಹರಿಸಬೇಕಿದೆ. ಶಿವಮೊಗ್ಗದಲ್ಲಿ ಹೊರಗಿನಿಂದ ಕಲ್ಲು ತೂರಾಟ ನಡೆಸಲಾಗಿದೆ. ಸಮಾಜಬಾಹಿರ ಕೃತ್ಯದಲ್ಲಿ ತೊಡಗಿಸಿಕೊಂಡರವನ್ನು ಪತ್ತೆಹಚ್ಚಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಘಟನೆ ಸಂಬಂಧ ಪೊಲೀಸುರ ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಿದರು.

ಸಭೆಯ ನಂತರ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥ ನಾರಾಯಣ, ವಿದ್ಯಾರ್ಥಿಗಳ ಸಮವಸ್ತ್ರ ವಿಚಾರದಲ್ಲಿ ಸರ್ಕಾರದ ನಿಲುವು ಸ್ಪಷ್ಟವಾಗಿದೆ. 1995ರ ಶಿಕ್ಷಣ ಕಾಯ್ದೆ ಅನ್ವಯ ರಾಜ್ಯ ಸರ್ಕಾರವು ಸೂಕ್ತ ಕ್ರಮ ಜರುಗಿಸಲಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಿರಲಿ ಎಂದು ರಜೆ ಘೋಷಿಸಲಾಗಿದೆ ಎಂದರು.

ಸಭೆಗೂ ಮುನ್ನ ದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ದೂರವಾಣಿ ಮೂಲಕ ಚರ್ಚೆ ನಡೆಸಿದರು.

ಶಿಕ್ಷಣದಲ್ಲಿ ಧರ್ಮ ಬೆರೆಸುವುದು ಬೇಡ: ಸುಮಲತಾ

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಂಡ್ಯದ ಸಂಸದೆ ಸುಮಲತಾ, ನಮ್ಮ ಧರ್ಮದ ಆಚರಣೆ ನಮ್ಮ ಮನೆಯಲ್ಲಿ ಇರಬೇಕು. ಶಿಕ್ಷಣದ ವಿಚಾರ ಬಂದರೆ ಎಲ್ಲರೂ ಸಮಾನರು. ಶಿಕ್ಷಣದಲ್ಲಿ ಧರ್ಮ ಬೆರೆಸಬಾರದು’ ಎಂದು ಕಿವಿಮಾತು ಹೇಳಿದರು. ವಿದ್ಯೆಗಿಂತ ಮತ್ತೊಬ್ಬ ದೇವರು ಇಲ್ಲ. ಸಣ್ಣ ವಯಸಿನ ಮಕ್ಕಳಲ್ಲಿ ಕೋಮು ಭಾವನೆ ಕೆರಳಿಸಬಾರದು. ಶಿಕ್ಷಣ ಕ್ಷೇತ್ರಕ್ಕೆ ಬಂದರೆ ಸಂವಿಧಾನವೇ ಅಂತಿಮ. ಹಿಜಾಬ್ ವಿವಾದ ಕೋರ್ಟ್​ನಲ್ಲಿದೆ. ಈವರೆಗಿನ ಬೆಳವಣಿಗೆಗಳು ವಿಷಾದನೀಯ ಎಂದರು.

ಇದನ್ನೂ ಓದಿ: ಹಿಜಾಬ್ ವಿವಾದ: ಗದಗ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಿನ್ಸಿಪಾಲ್ ಮತ್ತು ವಿದ್ಯಾರ್ಥಿನಿಯರ ನಡುವೆ ವಾಗ್ವಾದ

ಇದನ್ನೂ ಓದಿ: ಹಿಜಾಬ್ ವಿವಾದಕ್ಕೆ ರಾಜಕಾರಣವೇ ಮುಖ್ಯ ಕಾರಣ ಎಂದ ಕಾಂಗ್ರೆಸ್​ನ ಸಲೀಂ ಅಹ್ಮದ್, ಬಿಜೆಪಿ ಮಾಧುಸ್ವಾಮಿ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ