AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಝೀರೋ ಟ್ರಾಫಿಕ್ ಬೇಡ ಎಂದಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಝೀರೋ ಟ್ರಾಫಿಕ್ ಬಳಸಿದರು!

ಪೊಲೀಸ್ ಇಲಾಖೆ ಝೀರೋ ಟ್ರಾಫಿಕ್ ಸೌಲಭ್ಯ ಒದಗಿಸಿದ್ದ ಕಾರಣ ಅವರು ಝೀರೋ ಟ್ರಾಫಿಕ್ ಬಳಸಿ ಸಿಎಂ ಗೃಹಕಚೇರಿಗೆ ಆಗಮಿಸಿದರು.

ಝೀರೋ ಟ್ರಾಫಿಕ್ ಬೇಡ ಎಂದಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಝೀರೋ ಟ್ರಾಫಿಕ್ ಬಳಸಿದರು!
ಆರಗ ಜ್ಞಾನೇಂದ್ರ
TV9 Web
| Updated By: guruganesh bhat|

Updated on: Aug 10, 2021 | 8:48 PM

Share

ಬೆಂಗಳೂರು: ನಿನ್ನೆಯಷ್ಟೇ ಝೀರೋ ಟ್ರಾಫಿಕ್ ಬೇಡ, ಅದರ ಅಗತ್ಯ ನನಗಿಲ್ಲ ಎಂದಿದ್ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದೇ ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾಗೆ ಝೀರೋ ಟ್ರಾಫಿಕ್ ಸೌಲಭ್ಯದಲ್ಲಿ ಆಗಮಿಸಿದ್ದಾರೆ. ಪೊಲೀಸ್ ಇಲಾಖೆ ಝೀರೋ ಟ್ರಾಫಿಕ್ ಸೌಲಭ್ಯ ಒದಗಿಸಿದ್ದ ಕಾರಣ ಅವರು ಝೀರೋ ಟ್ರಾಫಿಕ್ ಬಳಸಿ ಸಿಎಂ ಗೃಹಕಚೇರಿಗೆ ಆಗಮಿಸಿದರು.

ಕೆಲ ದಿನಗಳ ಹಿಂದೆ ತುಮಕೂರಿನಲ್ಲಿ ಮಾತನಾಡಿದ್ದ ಅವರು, ಆರ್‌ಎಸ್‌ಎಸ್‌, ಬಿಎಸ್‌ವೈ, ಸಿಎಂ ನನ್ನ ಮೇಲೆ ಭರವಸೆ ಇಟ್ಟು ಹಿರಿಯರು ಗೃಹಖಾತೆ ಕೊಟ್ಟಿದ್ದಾರೆ ನನಗೆ ನೀಡಿರುವ ಸ್ಥಾನ ಮತ್ತು ಜವಾಬ್ದಾರಿಯನ್ನು ಬಳಸಿಕೊಂಡು ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡುತ್ತೇನೆ ಎಂದು ತುಮಕೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿದರು. ನಾಳೆ ಗೃಹ ಇಲಾಖೆ ಅಧಿಕಾರಿಗಳ ಜೊತೆ ಮೊದಲ ಸಭೆ ನಡೆಸಲಿದ್ದೇನೆ. ಆ ಮೂಲಕ ಅಧಿಕೃತವಾಗಿ ಚಾರ್ಜ್ ವಹಿಸಿಕೊಳ್ಳಲಿದ್ದೇನೆ.ಅದಕ್ಕೂ ಮುಂಚೆ ಸಿದ್ದಗಂಗಾ ಮಠಕ್ಕೆ ಬಂದು ಆಶೀರ್ವಾದ ಪಡೆದಿದ್ದೇನೆ. ಪೊಲೀಸ್ ಇಲಾಖೆ ಸಶಕ್ತ ವಾಗಿ ಕೆಲಸ ಮಾಡುವ ಹಾಗೆ ಶಕ್ತಿ ತುಂಬಬೇಕು. ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಇಲಾಖೆಯಲ್ಲಿ ಇಷ್ಟು ವರ್ಷ ತರಲಾಗದೇ ಇದ್ದ ಏನಾದರೊಂದು ಬದಲಾವಣೆ ತರಲು ಪ್ರಯತ್ನ ಮಾಡುತ್ತೇನೆ. ಔರಾದ್ಕರ್ ವರದಿ ಅಧ್ಯಯನ ಮಾಡಿ ಪೊಲೀಸರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಅವರು ಕನಸುಗಳನ್ನು ತೆರೆದಿಟ್ಟರು.

ಇದನ್ನೂ ಓದಿ: 

ಆರತಿ ಬೆಳಗುವಾಗ ಪ್ರಸಾದ ನೀಡಿ ಒಲುಮೆ ತೋರಿದ ದೇವಿ; ಗೃಹ ಸಚಿವ ಆರಗ ಜ್ಞಾನೇಂದ್ರ ಕಣ್ಣೆದುರೇ ಅಚ್ಚರಿ

(Home Minister Araga Jnanendra today used Zero Traffic but he says he do not use zero traffic facility)

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ