AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನೂನಿನ ಉಲ್ಲಂಘನೆ ಮಾಡಿದ್ರೆ ಸುಮ್ಮನಿರಲು ಆಗಲ್ಲ -ಗೃಹಸಚಿವ ಪರಮೇಶ್ವರ್ ಖಡಕ್ ಎಚ್ಚರಿಕೆ

ನಾವು ಯಾರ ಪರವೂ ಇಲ್ಲ, ವಿರೋಧವೂ ಇಲ್ಲ. ಕಾನೂನನ್ನ ಯಾರೇ ಉಲ್ಲಂಘಿಸಿದ್ದರೂ ಸುಮ್ಮನಿರಲ್ಲ. ಬೆಂಗಳೂರಿನಲ್ಲಿ ಗೃಹಸಚಿವ ಡಾ. ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಕಾನೂನಿನ ಉಲ್ಲಂಘನೆ ಮಾಡಿದ್ರೆ ಸುಮ್ಮನಿರಲು ಆಗಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಕಾನೂನಿನ ಉಲ್ಲಂಘನೆ ಮಾಡಿದ್ರೆ ಸುಮ್ಮನಿರಲು ಆಗಲ್ಲ -ಗೃಹಸಚಿವ ಪರಮೇಶ್ವರ್ ಖಡಕ್ ಎಚ್ಚರಿಕೆ
ಗೃಹಸಚಿವ ಡಾ.ಜಿ.ಪರಮೇಶ್ವರ್
TV9 Web
| Edited By: |

Updated on: Dec 28, 2023 | 12:16 PM

Share

ಬೆಂಗಳೂರು, ಡಿ.28: ರಾಜ್ಯ ಹಾಗೂ ರಾಜಧಾನಿಯಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸಬೇಕೆಂದು ಒತ್ತಾಯಿಸಿ ನಡೆದ ಕರವೇ (Karnataka Rakshana Vedike) ಪ್ರತಿಭಟನೆಯಲ್ಲಿ ಕಲ್ಲು ತೂರಾಟ ನಡೆದಿದ್ದು 29 ಕರವೇ ಕಾರ್ಯಕರ್ತರು ಪರಪ್ಪನ ಅಗ್ರಹಾರ ಸೇರಿದ್ದಾರೆ. ಈ ಘಟನೆ ಸಂಬಂಧ ಬೆಂಗಳೂರಿನಲ್ಲಿ ಗೃಹಸಚಿವ ಡಾ. ಜಿ.ಪರಮೇಶ್ವರ್ (Dr G Parameshwar) ಪ್ರತಿಕ್ರಿಯೆ ನೀಡಿದ್ದು, ಕಾನೂನಿನ ಉಲ್ಲಂಘನೆ ಮಾಡಿದ್ರೆ ಸುಮ್ಮನಿರಲು ಆಗಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ನಮ್ಮ ಸರ್ಕಾರ ಕನ್ನಡದ ಪರವಾಗಿ, ಯೋಜನೆಗಳನ್ನ, ತೀರ್ಮಾನಗಳ ಬಗ್ಗೆ ನಿಂತಿದೆ. ಕನ್ನಡ ಅನುಷ್ಠಾನದ ಬಗ್ಗೆ ಹಲವು ಬಾರಿ ತೀರ್ಮಾನ ಮಾಡಿದ್ದೇವೆ. ಲೈಸೆನ್ಸ್ ಕೊಡುವ ಸಮಯದಲ್ಲಿ ಕೂಡ ಕನ್ನಡ ಬೋರ್ಡ್ ಬಗ್ಗೆ ಹೇಳಿದ್ದೇನೆ. ಈಗ ಕರವೇ ಬಲವಂತವಾಗಿ ಬೋರ್ಡ್ ತೆಗೆಯೋದು, ಒಡೆಯೋದು ಮಾಡಿದ್ದಾರೆ. ಸಮಸ್ಯೆ ಇದ್ರೆ ನಮ್ಮ ಗಮನಕ್ಕೆ ತರಬೇಕಿತ್ತು. ಸಾರ್ವಜನಿಕರಿಗೆ ಧಕ್ಕೆ ತರುವ ಕೆಲಸ ಮಾಡಬಾರದಾಗಿತ್ತು. ಅದಕ್ಕಾಗಿ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಕನ್ನಡ ಕಡ್ಡಾಯ ಮಾಡೋದಕ್ಕೆ ಸೂಚನೆ ಕೊಟ್ಟಿದ್ದೇವೆ. ಬಿಬಿಎಂಪಿಯವರು ಫೆಬ್ರವರಿ 28 ಗಡುವು ನೀಡಿದ್ದಾರೆ. ಕಡ್ಡಾಯ ಮಾಡ್ತೀವೆ ಸ್ವಲ್ಪ ಸಮಯ ಕಾಯಬೇಕಲ್ವಾ ಎಂದು ಹೇಳಿದರು.

ಇದನ್ನೂ ಓದಿ: ನಾರಾಯಣಗೌಡ ಸೇರಿ 29 ಕರವೇ ಕಾರ್ಯಕರ್ತರಿಗೆ 13 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್​ ​ ಪೊಲೀಸರು ಸರಿಯಾಗಿ ನಡೆಸಿಕೊಂಡಿಲ್ಲ ಅಂದ್ರೆ ಹೇಗೆ? ಪ್ರತಿಭಟನೆ ಮಾಡೋಕೆ ಒಂದಷ್ಟು ಸಮಯ ಕೊಡ್ತಾರೆ. ಕಾನೂನಿನ ಉಲ್ಲಂಘನೆ ಮಾಡಿದ್ರೆ ಸುಮ್ಮನಿರೋಕೆ ಆಗಲ್ಲ. ಮಾಲ್​ಗಳಲ್ಲೂ ಕೂಡ ಭದ್ರತೆ ಕೇಳ್ತಾರೆ, ಕೊಡಬೇಕಲ್ವಾ? ನಾವು ಯಾರ ಪರವೂ ಇಲ್ಲ, ವಿರೋಧವೂ ಇಲ್ಲ. ಕಾನೂನನ್ನ ಯಾರೇ ಉಲ್ಲಂಘಿಸಿದ್ದರೂ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದರು. ಇನ್ನು ಮುಂದಿನ ಚುನಾವಣೆಯಲ್ಲಿ ಪಾಠ ಕಲಿಸ್ತೀವಿ ಅಂತಾ ನಾರಾಯಣಗೌಡ ಎಚ್ಚರಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಗೃಹ ಸಚಿವರು, ಈಗಾಗಲೇ ನಾವು ಸಾಕಷ್ಟು ಪಾಠ ಕಲಿತಿದ್ದೇವೆ. ಬೇರೆಯವರಿಂದ ಪಾಠ ಕಲಿಯೋ ಅವಶ್ಯಕತೆಯಿಲ್ಲ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್