ನನ್ನ ಮೇಲೆ ಪೆಗಾಸಸ್ ಬಳಸಿ ಗೂಢಚರ್ಯೆ ನಡೆಸಲಾಗುತ್ತಿದೆ: ಸಿದ್ದರಾಮಯ್ಯ ಆತಂಕಕ್ಕೆ ಕೇಂದ್ರ ಗೃಹ ಇಲಾಖೆ ಸ್ಪಂದನೆ
ಕಾನೂನು ಸುವ್ಯವಸ್ಥೆಯು ರಾಜ್ಯ ಸರ್ಕಾರದ ಅಧೀನಕ್ಕೆ ಬರುವ ವಿಷಯವಾಗಿರುವ ಹಿನ್ನೆಲೆಯಲ್ಲಿ ಈ ಪತ್ರವನ್ನು ಪರಿಶೀಲಿಸಿ, ಪತ್ರ ಬರೆದಿರುವವರಿಗೇ ನೇರವಾಗಿ ಲಿಖಿತ ಉತ್ತರ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಗೃಹ ಇಲಾಖೆಯು ಸೂಚಿಸಿದೆ
ಬೆಂಗಳೂರು: ತಮ್ಮ ಮೇಲೆ ಪೆಗಾಸಸ್ ತಂತ್ರಾಂಶ ಬಳಸಿ ಗೂಢಚರ್ಯೆ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕೇಂದ್ರ ಗೃಹ ಇಲಾಖೆಗೆ ಬರೆದಿದ್ದ ಪತ್ರಕ್ಕೆ ಉತ್ತರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಗೃಹ ಇಲಾಖೆಯು ಸೂಚನೆ ನೀಡಿದೆ. ಕಾನೂನು ಸುವ್ಯವಸ್ಥೆಯು ರಾಜ್ಯ ಸರ್ಕಾರದ ಅಧೀನಕ್ಕೆ ಬರುವ ವಿಷಯವಾಗಿರುವ ಹಿನ್ನೆಲೆಯಲ್ಲಿ ಈ ಪತ್ರವನ್ನು ಪರಿಶೀಲಿಸಿ, ಪತ್ರ ಬರೆದಿರುವವರಿಗೇ ನೇರವಾಗಿ ಲಿಖಿತ ಉತ್ತರ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಗೃಹ ಇಲಾಖೆಯು ಸೂಚಿಸಿದೆ.
ಈ ನಡುವೆ ಪೆಗಾಸಸ್ ತಂತ್ರಾಂಶ ಬಳಸಿ ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಸೂಚಿಸಿ ಸುಪ್ರೀಂಕೋರ್ಟ್ ತಜ್ಞರ ಸಮಿತಿಯನ್ನು ರಚಿಸಿದೆ. ಸುಪ್ರೀಂಕೋರ್ಟ್ ನಿವೃತ್ತ ನ್ಯಾ. ನೇತೃತ್ವದ ಸಮಿತಿ ತನಿಖೆ ನಡೆಸಲಿದೆ. ಇದರಿಂದ ಸುಪ್ರೀಂ ಕೋರ್ಟ್ನಲ್ಲಿ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಇದರ ವಿರುದ್ಧದ ಅರ್ಜಿ ತಿರಸ್ಕರಿಸಬೇಕೆಂಬ ಕೇಂದ್ರದ ವಾದ ಒಪ್ಪಲ್ಲ. ಸಮಿತಿ ರಚಿಸುವ ಮನವಿಗೆ ಒಪ್ಪಿಗೆ ಕೊಟ್ಟಿದ್ದೇವೆ. ಸ್ವತಂತ್ರ ಸದಸ್ಯರನ್ನು ಆಯ್ಕೆ ಮಾಡುವುದು ದೊಡ್ಡ ಸವಾಲು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ರಾಜಕೀಯ ಚರ್ಚೆಗೆ ಹೋಗದೇ ಮೌಲ್ಯ ಎತ್ತಿ ಹಿಡಿಯಲು ಶ್ರಮಪಡಬೇಕು. ಪ್ರತಿಯೊಬ್ಬ ಭಾರತೀಯನಿಗೂ ಖಾಸಗಿತನದ ರಕ್ಷಣೆ ನೀಡಬೇಕು. ನಾವು ಮಾಹಿತಿಯ ಯುಗದಲ್ಲಿ ಬದುಕುತ್ತಿದ್ದೇವೆ. ಕೆಲ ಅರ್ಜಿಗಳು ಕೇಂದ್ರ ಸರ್ಕಾರದ ನಿಷ್ಕ್ರಿಯತೆ ಬಗ್ಗೆ ಪ್ರಸ್ತಾಪಿಸಿವೆ. ಈ ತೀರ್ಪಿನಲ್ಲಿ ನಾವು ಖಾಸಗಿತನದ ಹಕ್ಕಿನ ಬಗ್ಗೆ ಚರ್ಚಿಸಿದ್ದೇವೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಭಾರಿ ಪರಿಣಾಮ ಬೀರುತ್ತೆ. ಶಾಸನದ ಮಾನ್ಯತೆ ಇಲ್ಲದೇ ಖಾಸಗಿತನದ ಹಕ್ಕಿನಲ್ಲಿ ಮೂಗುತೂರಿಸುವಿಕೆಗೆ ಅವಕಾಶವಿಲ್ಲ. ಖಾಸಗಿತನದ ಹಕ್ಕು ಅನ್ನು ಅತಿಕ್ರಮಿಸುವ ಮೂಲಕ ಮಾಧ್ಯಮ ಸ್ವಾತಂತ್ರ್ಯವನ್ನು ಕಡೆಗಣಿಸಲಾಗಲ್ಲ. ಖಾಸಗಿತನದ ಹಕ್ಕಿನಲ್ಲಿ ಮೂಗು ತೂರಿಸಲು ಮಸೂದೆ ಪಾಸ್ ಆಗಬೇಕು. ಸಾಂವಿಧಾನಿಕ ಅಗತ್ಯದ ಪರೀಕ್ಷೆ ಪಾಸ್ ಆಗಬೇಕು ಎಂದು ಸುಪ್ರೀಂಕೋರ್ಟ್ ಸಿಜೆ ನೇತೃತ್ವದ ಪೀಠ ತನ್ನ ತೀರ್ಪಿನಲ್ಲಿ ಸ್ಪಷ್ಟವಾಗಿ ಅಭಿಪ್ರಾಯಪಟ್ಟಿದೆ.
ಪೆಗಾಸಸ್ ತಂತ್ರಾಂಶ ಬಳಸಿ ಗೂಢಚಾರಿಕೆ ಪ್ರಕರಣದಲ್ಲಿ ಕಾನೂನು ಎತ್ತಿ ಹಿಡಿಯುವುದೇ ನಮ್ಮ ಉದ್ದೇಶ ಎಂದು ಸಾರಿರುವ ಸುಪ್ರೀಂ ಕೋರ್ಟ್ ಈ ಪ್ರಕರಣ ಆಧುನಿಕ ತಂತ್ರಜ್ಞಾನ ಬಳಕೆಗೆ ಸಂಬಂಧಿಸಿದೆ. ಆಧುನಿಕ ತಂತ್ರಜ್ಞಾನ ಬಳಕೆ ಬಗ್ಗೆ ‘ಸುಪ್ರೀಂ’ ಪರಿಶೀಲಿಸಿದೆ. ಸಾಂವಿಧಾನಿಕ ಮೌಲ್ಯ ಎತ್ತಿ ಹಿಡಿಯಲು ನಮ್ಮ ಶ್ರಮ ಎಂದು ಸಿಜೆಐ ರಮಣ ಆದೇಶಿಸಿದ್ದಾರೆ.
ಇದನ್ನೂ ಓದಿ: ಕಟ್ಟಿದ ಮನೆಯಲ್ಲಿ ವಿಷ ಸರ್ಪದಂತೆ ಸೇರಿಕೊಂಡರು: ಸಿದ್ದರಾಮಯ್ಯ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ಇದನ್ನೂ ಓದಿ: ಬಿಟ್ ಕಾಯಿನ್ ದಂಧೆ: ಸಿದ್ದರಾಮಯ್ಯ, ಸೋಮಣ್ಣ ಆರೋಪ ಪ್ರತ್ಯಾರೋಪ
Published On - 2:59 pm, Sat, 6 November 21