ಗೃಹಿಣಿ ಆತ್ಮಹತ್ಯೆ ಪ್ರಕರಣ: ಗೋವಾದಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದೇ ರೋಚಕ

ಪತಿ ಸೇರಿದಂತೆ ಮನೆ ಸದಸ್ಯರ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧ ಪೊಲೀಸರು ಆರೋಪಿಗಳನ್ನು ಗೋವಾದಲ್ಲಿ ಬಂಧಿಸಿದ್ದಾರೆ. ಐಶ್ವರ್ಯ ಸಾವಿನ ಬಳಿಕ ಗೋವಾದ ಕ್ಯಾಸಿನೋದಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದೇ ಒಂದು ರೋಚಕ.

ಗೃಹಿಣಿ ಆತ್ಮಹತ್ಯೆ ಪ್ರಕರಣ: ಗೋವಾದಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದೇ ರೋಚಕ
ಪ್ರಾತಿನಿಧಿಕ ಚಿತ್ರ
Follow us
| Updated By: Rakesh Nayak Manchi

Updated on: Nov 03, 2023 | 1:29 PM

ಬೆಂಗಳೂರು, ನ.3: ಪತಿ ಸೇರಿದಂತೆ ಮನೆ ಸದಸ್ಯರ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಐಶ್ವರ್ಯ ಆತ್ಮಹತ್ಯೆ (Suicide) ಮಾಡಿಕೊಂಡ ಪ್ರಕರಣ ಸಂಬಂಧ ಪೊಲೀಸರು ಆರೋಪಿಗಳನ್ನು ಗೋವಾದಲ್ಲಿ ಬಂಧಿಸಿದ್ದಾರೆ. ಐಶ್ವರ್ಯ ಸಾವಿನ ಬಳಿಕ ಗೋವಾದ ಕ್ಯಾಸಿನೋದಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದೇ ಒಂದು ರೋಚಕ.

ಮೃತೆ ಐಶ್ವರ್ಯಾಳ ಪತಿ ರಾಜೇಶ್, ಮಾವ ಗಿರಿಯಪ್ಪ, ಅತ್ತೆ ಸೀತಾ, ಮೈದುನ ವಿಜಯ್ ಹಾಗೂ ಆತನ ಹೆಂಡತಿ ತಸ್ಮಯ್ ಗೋವಾಗೆ ಹೋಗಿದ್ದರು. ಅಲ್ಲಿ ಕ್ಯಾಸಿನೋದಲ್ಲಿ ಮೋಜು ಮಸ್ತಿ ಮಾಡುತ್ತಿದ್ದರು. ಎಲ್ಲರ ಮೊಬೈಲ್ ಫೋನ್​ಗಳನ್ನು ಸ್ವಿಚ್ ಆಪ್ ಮಾಡಿಕೊಂಡು ಎಂಜಾಯ್ ಮಾಡುತ್ತಿದ್ದರು.

ಸುಮಾರು‌ ಮೂರು ದಿನಗಳ ಸಿಡಿಆರ್ ಪರಿಶೀಲನೆ ಬಳಿಕ ಆರೋಪಿಗಳ ಸುಳಿವು ಪೊಲೀಸರಿಗೆ ಲಭ್ಯವಾಗಿದೆ. ಮೂರು ದಿನಗಳ ಕಾಲ ಎಲ್ಲರೂ ಗೋವಾದ ಎರಡು ರೆಸಾರ್ಟ್​ನಲ್ಲಿ ನೆಲೆಸಿದ್ದರು. ಕೊನೆಗೆ ಎರಡು ತಂಡಗಳು ಗೋವಾಗೆ ಹೋಗಿದ್ದು ರೆಸಾರ್ಟ್​​ಗಳ ಪರಿಶೀಲನೆ ನಡೆಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಗೃಹಿಣಿ ಆತ್ಮಹತ್ಯೆ ಕೇಸ್, ವಾರದ ಬಳಿಕ ಹೊರಬಿತ್ತು ಸಾವಿನ ಹಿಂದಿನ ಅಸಲಿ ಕಹಾನಿ

ಈ ವೇಳೆ ಐವರು ಆರೋಪಿಗಳು ವಾಸ್ತವ್ಯ ಇರುವುದು ತಿಳಿದುಬಂದಿದೆ. ನಂತರ ಕ್ಯಾಸಿನೋದಲ್ಲಿ ಮೋಜು ಮಸ್ತಿ ಮಾಡುತ್ತಾ ಇರುವುದು ಗೊತ್ತಾಗಿದೆ. ಐವರು ಗೋವಾದಿಂದ ಮುಂಬೈಗೆ ಶಿಫ್ಟ್ ಆಗುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಗೋವಿಂದರಾಜ ನಗರ ಠಾಣಾ ಪೊಲೀಸರು, ಮುಂಬೈನಲ್ಲಿ‌ ಮಾರ್ಗ ಮಧ್ಯೆ ಬಂಧಿಸಿದ್ದಾರೆ.

ಪ್ರಕಣರದಲ್ಲಿ ಇನ್ನೂ ಐವರು ಆರೋಪಿಗಳು ಭಾಗಿಯಾಗಿದ್ದು, ತಲೆಮರೆಸಿಕೊಂಡಿದ್ದಾರೆ. ಯುಎಸ್​ನಲ್ಲಿ ಇರುವ ಶಾಲಿನಿ ಓಂಪ್ರಕಾಶ್ ಬಂಧನಕ್ಕೂ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ರೆಡ್ ಕಾರ್ನರ್ ನೊಟೀಸ್ ಹೊರಡಿಸಲು ಮುಂದಾಗಿದ್ದಾರೆ. ಡಿಜಿ ಐಜಿಪಿ ಅನುಮತಿ ಪಡೆದು ರೆಡ್ ಕಾರ್ನರ್ ನೋಟೀಸ್ ಹೊರಟಿಸಲು ಸಿದ್ಧತೆ ನಡೆಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​