Bengaluru: ಹನಿಟ್ರ್ಯಾಪ್​​​​ ಕೇಸ್ ಆರೋಪಿ ಯುವತಿಯಿಂದ ಸಾಮೂಹಿಕ ಅತ್ಯಾಚಾರ ದೂರು

ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಪ್ರಕರಣದ ಆರೋಪಿ ಯುವತಿಯೊಬ್ಬಳು ತನ್ನ ಮೇಲೆ ಗ್ಯಾಂಗ್‌ರೇಪ್ ನಡೆದಿದೆ ಎಂದು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪ್ರಕರಣ ಸಂಬಂಧ ನಿಖಿಲ್ ಮತ್ತು ಡಿಕ್ಸನ್ ಸಾಂಡ್ರಾ ಎಂಬ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪಾರ್ಟಿಯೊಂದಕ್ಕೆ ಕರೆದೊಯ್ದು ಬಲವಂತವಾಗಿ ಮಾದಕವಸ್ತು ನೀಡಿ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಯುವತಿ ಆರೋಪಿಸಿದ್ದು, ಈ ಪ್ರಕರಣವು ನಗರದಲ್ಲಿ ಸಂಚಲನ ಮೂಡಿಸಿದೆ.

Bengaluru: ಹನಿಟ್ರ್ಯಾಪ್​​​​ ಕೇಸ್ ಆರೋಪಿ ಯುವತಿಯಿಂದ ಸಾಮೂಹಿಕ ಅತ್ಯಾಚಾರ ದೂರು
ಆರೋಪಿತ ಯುವಕರು
Image Credit source: Tv9 Kannada
Edited By:

Updated on: Feb 23, 2026 | 2:33 PM

ಬೆಂಗಳೂರು, ಫೆಬ್ರವರಿ 23: ಹನಿಟ್ರ್ಯಾಪ್​​​​ ಕೇಸ್ ಆರೋಪಿತ ಯುವತಿ ತನ್ನ ಮೇಲೆ ಗ್ಯಾಂಗ್​ರೇಪ್ ನಡೆದಿದೆ ಎಂದು ಆರೋಪಿಸಿ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ಪಾರ್ಟಿಯೊಂದಕ್ಕೆ ಕರೆದೊಯ್ದು ನನ್ನ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂದು ಸಂತ್ರಸ್ತೆ ದೂರಿದ್ದು, ಈ ಸಂಬಂಧ ನಿಖಿಲ್​ ಮತ್ತು ಡಿಕ್ಸನ್​ ಸಾಂಡ್ರಾ ಎಂಬ ಇಬ್ಬರ ವಿರುದ್ಧ ಫೆ.22ರಂದು ಎಫ್​​ಐಆರ್​​ ದಾಖಲಾಗಿದೆ. ಇದಕ್ಕೂ ಮುನ್ನ ಒಂದು ದಿನ ಮೊದಲಷ್ಟೇ ಅಂದರೆ ಫೆ.21ರಂದು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಯುವತಿ ವಿರುದ್ಧ ಹನಿಟ್ರ್ಯಾಪ್ ಕೇಸ್ ದಾಖಲಾಗಿತ್ತು.

ಯುವತಿ ಆರೋಪವೇನು?

2026ರ ಜನವರಿಯಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಡಿಕ್ಸನ್​ ಸಾಂಡ್ರಾ ಎಂಬಾತನ ಪರಿಚಯವಾಗಿದ್ದು, ಸ್ನೇಹ ಪ್ರೀತಿಗೆ ತಿರುಗಿತ್ತು. ಬಳಿಕ ಇಬ್ಬರೂ ಹಲವು ಬಾರಿ ಭೇಟಿ ಆಗಿದ್ದೆವು. ಹೀಗಿರುವಾಗ ಫೆಬ್ರವರಿ 14ರಂದು ಕರೆ ಮಾಡಿದ್ದ ಡಿಕ್ಸನ್, ಜಕ್ಕೂರಿನಲ್ಲಿರುವ ವಿಲ್ಲಾವೊಂದಕ್ಕೆ ಪಾರ್ಟಿಗೆ ಬರುವಂತೆ ಕರೆದಿದ್ದ. ಹೀಗಾಗಿ ಗೆಳತಿಯ ಜೊತೆ ತಾನು ಮಧ್ಯರಾತ್ರಿ ಸುಮಾರು 1.15ಕ್ಕೆ ವಿಲ್ಲಾಗೆ ತೆರಳಿದ್ದು, ಈ ವೇಳೆ ಡಿಕ್ಸನ್​​ ಆತನ ಗೆಳೆಯ ಎಂದು ನಿಖಿಲ್​​ ಎಂಬಾತನನ್ನು ಪರಿಚಯಿಸಿದ್ದ. ಪಾರ್ಟಿ ನಡುವೆ ಡಿಕ್ಸನ್​​ ಮತ್ತು ನಿಖಿಲ್​​ ಸೇರಿ ಬಲವಂತವಾಗಿ ಮಾತ್ರೆಯನ್ನು ತಿನ್ನಿಸಿದ್ದಾರೆ. ಈ ವೇಳೆ ಕಣ್ಣುಗಳು ಮಂಜಾಗತೊಡಗಿದ್ದು, ಡಿಕ್ಸನ್​​ ರೂಮಿಗೆ ಕರೆದೊಯ್ದು ತನ್ನ ಮಲಗಿಸಿದ್ದ. ಆದಾದ ನಂತರ ನನಗೆ ಪ್ರಜ್ಞೆತಪ್ಪಿದೆ. ನನಗೆ ಎಚ್ಚರ ಆದಾಗ ನನ್ನ ದೇಹದ ಮೇಲೆ ಅರ್ಧಂಬರ್ಧ ಬಟ್ಟೆ ಇರುವುದರ ಜೊತೆಗೆ ಪಕ್ಕದಲ್ಲಿ ನಿಖಿಲ್​​ ಇರುವುದನ್ನು ಕಂಡು ಶಾಕ್​​ ಆಗಿದ್ದೇನೆ ಎಂದು ಯುವತಿ ಆರೋಪಿಸಿದ್ದಾಳೆ.

ಇದನ್ನೂ ಓದಿ: ಮಹಿಳಾ ಅಧಿಕಾರಿ ಮನೆಯಲ್ಲಿ ಹಿಡನ್ ಕ್ಯಾಮರಾ ಇಟ್ಟಿದ್ದ ಕೇಸ್; ನಕಲಿ ಪತ್ರಕರ್ತರ ಮೊಬೈಲಲ್ಲಿತ್ತು 100ಕ್ಕೂ ಹೆಚ್ಚು ಬೆತ್ತಲೆ ವಿಡಿಯೋ!

ಮೊದಲೇ ಗಾಬರಿಗೊಂಡಿದ್ದ ತಾನು ಡಿಕ್ಸನ್​​ ಬಗ್ಗೆ ಕೇಳಿದಾಗ ಹೊರಗಿನಿಂದ ಬಂದ ಆತ ತನ್ನ ಬಟ್ಟೆಯನ್ನು ಕಿತ್ತೆಸೆದಿದ್ದು, ಇಬ್ಬರೂ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಈ ವೇಳೆ ತಾನು ಜೋರಾಗಿ ಕಿರುಚಾಡಿದ ಪರಿಣಾಮ ನನ್ನನ್ನು ರೂಮ್​​ನಲ್ಲಿ ಲಾಕ್​​ ಮಾಡಲಾಗಿತ್ತು. ಬಳಿಕ ಮರುದಿನ ಮಧ್ಯಾಹ್ನದ ವೇಳೆಗೆ ಆರೋಪಿಗಳು ರೂಮ್​​ ಬಾಗಿಲು ತೆರೆದಿದ್ದು, ರಾತ್ರಿ ನಡೆದ ವಿಚಾರವನ್ನು ಯಾರಿಗಾದರೂ ಅಥವಾ ಪೊಲೀಸರಿಗೆ ಹೇಳಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ನಿಖಿಲ್​​ ಬೆದರಿಕೆ ಹಾಕಿರೋದಾಗಿ ಯುವತಿ ಆರೋಪಿಸಿದ್ದಾಳೆ.

ಇನ್ನು ಫೆ.21ರಂದು ಇದೇ ಯುವತಿಯ ವಿರುದ್ಧ ನಿಖಿಲ್​​ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ. ನಿಖಿಲ್​​ ಮತ್ತು ಡಿಕ್ಸನ್​​ ತನಗೆ ಮಾದಕ ವಸ್ತು ನೀಡಿ ಲೈಂಗಿಕ ದೌರ್ಜನ್ಯ ನಡೆಸಿರೋದಾಗಿ ಯುವತಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾಳೆ. ಅದರ ಬೆನ್ನಲ್ಲೇ ಖಾಸಗಿ ವಾಹನಿಯ ಕ್ರೈಂ ಬ್ಯೂರೋ ಹೆಡ್​​ ಎಂದು ಪರಿಚಯಿಸಿಕೊಂಡ ವ್ಯಕ್ತಿಯೋರ್ವರ ಕರೆ ಬಂದಿದ್ದು, ನಾವು ಹೇಳಿದ ಜಾಗಕ್ಕೆ ನೀವು ಬರಬೇಕು. ಹೇಳಿದಷ್ಟು ಹಣ ಕೊಡಬೇಕು. ಇಲ್ಲದಿದ್ದರೆ ಈ ವಿಚಾರವನ್ನು ನ್ಯೂಸ್​​ ಚಾನೆಲ್​​ನಲ್ಲಿ ಹಾಕಿ ಮಾನ ತೆಗೆಯೋ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿದ್ದ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.