AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಟಿ, ಮಂಡ್ಯ ಸಂಸದೆ ಸುಮಲತಾರಿಗೆ ಗೌರವ ಡಾಕ್ಟರೇಟ್

ಸಮಾಜ ಸೇವೆ, ರಾಜಕೀಯ ಮತ್ತು ಚಲನಚಿತ್ರಗಳಲ್ಲಿನ ಸೇವೆಗಾಗಿ ಯುಎಸ್​ಎ ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಿಂದ ಅನುಮೋದಿಸಲಾದ ಮತ್ತು ಮಾನ್ಯತೆ ಪಡೆದಿರುವ ಹೈದರಾಬಾದ್​ನ ಯುನೈಟೆಡ್ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್​ನಿಂದ ಮಂಡ್ಯ ಸಂಸದೆ ಮತ್ತು ಕನ್ನಡ ಚಿತ್ರರಂಗದ ಹಿರಿಯ ನಟಿ ಸುಮಲತಾ ಅಂಬರೀಶ್​ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ.

ಹಿರಿಯ ನಟಿ, ಮಂಡ್ಯ ಸಂಸದೆ ಸುಮಲತಾರಿಗೆ ಗೌರವ ಡಾಕ್ಟರೇಟ್
ಸುಮಲತಾ ಅಂಬರೀಶ್​ ಅವರಿಗೆ ಗೌರವ ಡಾಕ್ಟರೇಟ್
TV9 Web
| Edited By: |

Updated on:Jan 20, 2024 | 10:11 PM

Share

ಬೆಂಗಳೂರು, ಜನವರಿ 20: ಮಂಡ್ಯ ಸಂಸದೆ ಮತ್ತು ಕನ್ನಡ ಚಿತ್ರರಂಗದ ಹಿರಿಯ ನಟಿ ಸುಮಲತಾ ಅಂಬರೀಶ್ (Sumalathari Ambareesh) ಅವರಿಗೆ ಗೌರವ ಡಾಕ್ಟರೇಟ್ ಲಭಿಸಿದೆ. ಸಮಾಜ ಸೇವೆ, ರಾಜಕೀಯ ಮತ್ತು ಚಲನಚಿತ್ರಗಳಲ್ಲಿನ ಸೇವೆಗಾಗಿ ಯುಎಸ್​ಎ ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಿಂದ ಅನುಮೋದಿಸಲಾದ ಮತ್ತು ಮಾನ್ಯತೆ ಪಡೆದಿರುವ ಹೈದರಾಬಾದ್​ನ ಯುನೈಟೆಡ್ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್​ನಿಂದ ಗೌರವ ಡಾಕ್ಟರೇಟ್ ನೀಡಲಾಗಿದೆ. ಗೌರವ ಡಾಕ್ಟರೇಟ್ ಪಡೆದುಕೊಂಡಿರುವುದಕ್ಕೆ ಸುಮಲತಾ ಅವರು ಅತ್ಯಂತ ವಿನಮ್ರ ಮತ್ತು ಗೌರವ ಪೂರ್ವಕವಾಗಿ ಧನ್ಯವಾದವನ್ನು ಅರ್ಪಿಸಿದ್ದಾರೆ.

ಈ ಕುರಿತಾಗಿ ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದೆ ಸುಮಲತಾ, ಈ ಗೌರವ ನನ್ನ ಮುಂದಿನ ಹಾದಿಯಲ್ಲಿ ನನ್ನನ್ನು ಪ್ರೇರೇಪಿಸಲು ಇದು ಸ್ಫೂರ್ತಿಯಾಗಲಿದೆ. ನಾನು ಈ ಗೌರವವನ್ನು ನನ್ನ ಪತಿ ಅಂಬರೀಶ್, ನನ್ನ ಹೆತ್ತವರು, ನನ್ನ ಹಿತೈಷಿಗಳು, ಚಲನಚಿತ್ರ ಮತ್ತು ರಾಜಕೀಯ ಉದ್ಯಮದ ಬೆಂಬಲಿಗರಿಗೆ ಅರ್ಪಿಸುತ್ತೇನೆ.

ಸಂಸದೆ ಸುಮಲತಾ ಅಂಬರೀಶ್ ಫೇಸ್​ಬುಕ್ ಪೋಸ್ಟ್

ಇಂಥದ್ದೊಂದು ಗೌರವ ಸಿಕ್ಕಿರುವುದು ನನ್ನ ಮೇಲಿನ ನಂಬಿಕೆ ಮತ್ತು ನಿಮ್ಮೆಲ್ಲರ ಆಶೀರ್ವಾದ ಕಾರಣ. ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:08 pm, Sat, 20 January 24

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ