ಬೆಂಗಳೂರು, ಜನವರಿ 20: ಮಂಡ್ಯ ಸಂಸದೆ ಮತ್ತು ಕನ್ನಡ ಚಿತ್ರರಂಗದ ಹಿರಿಯ ನಟಿ ಸುಮಲತಾ ಅಂಬರೀಶ್ (Sumalathari Ambareesh) ಅವರಿಗೆ ಗೌರವ ಡಾಕ್ಟರೇಟ್ ಲಭಿಸಿದೆ. ಸಮಾಜ ಸೇವೆ, ರಾಜಕೀಯ ಮತ್ತು ಚಲನಚಿತ್ರಗಳಲ್ಲಿನ ಸೇವೆಗಾಗಿ ಯುಎಸ್ಎ ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಿಂದ ಅನುಮೋದಿಸಲಾದ ಮತ್ತು ಮಾನ್ಯತೆ ಪಡೆದಿರುವ ಹೈದರಾಬಾದ್ನ ಯುನೈಟೆಡ್ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ನಿಂದ ಗೌರವ ಡಾಕ್ಟರೇಟ್ ನೀಡಲಾಗಿದೆ. ಗೌರವ ಡಾಕ್ಟರೇಟ್ ಪಡೆದುಕೊಂಡಿರುವುದಕ್ಕೆ ಸುಮಲತಾ ಅವರು ಅತ್ಯಂತ ವಿನಮ್ರ ಮತ್ತು ಗೌರವ ಪೂರ್ವಕವಾಗಿ ಧನ್ಯವಾದವನ್ನು ಅರ್ಪಿಸಿದ್ದಾರೆ.
ಈ ಕುರಿತಾಗಿ ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದೆ ಸುಮಲತಾ, ಈ ಗೌರವ ನನ್ನ ಮುಂದಿನ ಹಾದಿಯಲ್ಲಿ ನನ್ನನ್ನು ಪ್ರೇರೇಪಿಸಲು ಇದು ಸ್ಫೂರ್ತಿಯಾಗಲಿದೆ. ನಾನು ಈ ಗೌರವವನ್ನು ನನ್ನ ಪತಿ ಅಂಬರೀಶ್, ನನ್ನ ಹೆತ್ತವರು, ನನ್ನ ಹಿತೈಷಿಗಳು, ಚಲನಚಿತ್ರ ಮತ್ತು ರಾಜಕೀಯ ಉದ್ಯಮದ ಬೆಂಬಲಿಗರಿಗೆ ಅರ್ಪಿಸುತ್ತೇನೆ.
ಇಂಥದ್ದೊಂದು ಗೌರವ ಸಿಕ್ಕಿರುವುದು ನನ್ನ ಮೇಲಿನ ನಂಬಿಕೆ ಮತ್ತು ನಿಮ್ಮೆಲ್ಲರ ಆಶೀರ್ವಾದ ಕಾರಣ. ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:08 pm, Sat, 20 January 24