AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಪ್ರಾಣಬಿಟ್ಟ ಆಂಧ್ರದ ಯುವಕ: ಕಾರಣ ನಿಗೂಢ

ಬೆಂಗಳೂರಿನಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆಂಧ್ರ ಮೂಲದ ವಿಶ್ವನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನಾ ಸ್ಥಳದಿಂದ 400 ಮೀಟರ್ ದೂರದಲ್ಲಿ ನಾಯಿಗಳು ಎಳೆದೊಯ್ದಿದ್ದ ರುಂಡ ಪತ್ತೆಯಾಗಿದೆ. ಇನ್ನು ಆತ್ಮಹತ್ಯೆಗೂ ಮುನ್ನ ಗರ್ಲ್​ಫ್ರೆಂಡ್​ಗೆ ವಿಶ್ವನಾಥ್ ಕರೆ ಮಾಡಿದ್ದರು ಎಂಬ ವಿಚಾರವೂ ತನಿಖೆ ವೇಳೆ ಗೊತ್ತಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಪ್ರಾಣಬಿಟ್ಟ ಆಂಧ್ರದ ಯುವಕ: ಕಾರಣ ನಿಗೂಢ
ಮೃತ ಯುವಕImage Credit source: Tv9 and Getty Images
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jul 29, 2026 | 1:03 PM

Share

ಬೆಂಗಳೂರು, ಜುಲೈ 29: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಮೃತನನ್ನು ಆಂಧ್ರ ಮೂಲದ ವಿಶ್ವನಾಥ್(28) ಎಂದು ಗುರುತಿಸಲಾಗಿದ್ದು, ತಲೆಯಿಲ್ಲದ ದೇಹ ಮಾತ್ರ ನಿನ್ನೆ ಪತ್ತೆಯಾಗಿತ್ತು. ಹೀಗಾಗಿ ಸ್ಥಳಕ್ಕೆ ಭೇಟಿ ನೀಡಿದ್ದ ರೈಲ್ವೇ ಪೊಲೀಸರು ಘಟನೆ ಸಂಬಂಧ ಯುಡಿಆರ್​​ ದಾಖಲಿಸಿಕೊಂಡಿದ್ದರು. ಆದರೆ ಇಂದು ರುಂಡವೂ ಪತ್ತೆಯಾಗಿದ್ದು, ಘಟನೆಯ ಬಗ್ಗೆ ಪೊಲೀಸರಿಗೆ ಸ್ಪಷ್ಟತೆ ಸಿಕ್ಕಿದೆ.

ರುಂಡವನ್ನು ಎಳೆದು ತಂದಿದ್ದ ನಾಯಿಗಳು

ರೈಲಿಗೆ ತಲೆಕೊಟ್ಟು ವಿಶ್ವನಾಥ್​​ ಆತ್ಮಹತ್ಯೆಯ ವೇಳೆ ರುಂಡ ಮತ್ತು ದೇಹ ಎರಡೂ ಬೇರೆ ಬೇರೆ ಆಗಿತ್ತು. 400 ಮೀಟರ್​ನಷ್ಟು ದೂರಕ್ಕೆ ತಲೆಯನ್ನು ನಾಯಿಗಳು ಎಳಲೆದು ತಂದಿದ್ದು, ಇಂದು ಮೈದಾನದಲ್ಲಿ ಅದನ್ನು ಸ್ಥಳೀಯರು ಗಮನಿಸಿದ್ದಾರೆ. ಕೂಡಲೇ ಅವರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಅಸಲಿ ವಿಚಾರ ಗೊತ್ತಾಗಿದೆ. ಸಿಕ್ಕಿರುವ ರುಂಡವನ್ನು ವರ್ತೂರು ಪೊಲೀಸರು ರೈಲ್ವೆ ಪೊಲೀಸರಿಗೆ ಹಸ್ತಾಂತರಿಸಲಿದ್ದಾರೆ.

ಇದನ್ನೂ ಓದಿ: ಮದುವೆಯಾದರೂ ಪರ ಪುರುಷನ ಜೊತೆ ಅನೈತಿಕ ಸಂಬಂಧ: ಪತಿಯಿಂದಲೇ ಪತ್ನಿಯ ಭೀಕರ ಕೊಲೆ

ಆತ್ಮಹತ್ಯೆಗೂ ಮುನ್ನ ಗರ್ಲ್​ಫ್ರೆಂಡ್​ಗೆ ಕರೆ

ಇನ್ನು ಆತ್ಮಹತ್ಯೆಗೂ ಮುನ್ನ ಗರ್ಲ್​ಫ್ರೆಂಡ್​ಗೆ ವಿಶ್ವನಾಥ್ ಕರೆ ಮಾಡಿದ್ದರು ಎಂಬ ವಿಚಾರವೂ ತನಿಖೆ ವೇಳೆ ಗೊತ್ತಾಗಿದೆ. ಪ್ರೇಯಸಿ ಜೊತೆ ಮಾತನಾಡಿದ ಬಳಿಕವೇ ಅವರು ಚಲಿಸುತ್ತಿರುವ ರೈಲಿಗೆ ತಲೆ ಕೊಟ್ಟಿದ್ದಾರೆ ಎಂಬುದು ತಿಳಿದುಬಂದಿದೆ. ಘಟನೆ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:02 pm, Wed, 29 July 26

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?