AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಹೊಸಕೆರೆಹಳ್ಳಿ ಫ್ಲೈಓವರ್ ಕಾಮಗಾರಿ ಬಹುತೇಕ ಪೂರ್ಣ: ಮುಂದಿನ ವಾರ ಪ್ರಾಯೋಗಿಕ ಸಂಚಾರಕ್ಕೆ ಮುಕ್ತ ಸಾಧ್ಯತೆ

Hosakerehalli PES Flyover; ಬೆಂಗಳೂರಿನಲ್ಲಿ ಅತಿಯಾಗಿರುವ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಮೇಲ್ಸೇತುವೆಗಳ ಅವಶ್ಯಕತೆ ಹೆಚ್ಚಾಗಿದೆ. ಆದರೆ ನಗರದಲ್ಲಿ ಫ್ಲೈಓವರ್ ಕಾಮಗಾರಿಗಳು ನಿಗದಿತ ವೇಳೆಯಲ್ಲಿ ಪೂರ್ಣಗೊಳ್ಳದೆ ಇರುವುದು ಬೇಸರದ ಸಂಗತಿ. ಜನರ ಆಕ್ರೋಶದ ಬಳಿಕ ಇದೀಗ ಕೊನೆಗೂ ಹೊಸಕೆರೆಹಳ್ಳಿ ಬಳಿಯ ಫ್ಲೈಓವರ್ ಪೂರ್ಣಗೊಳ್ಳುವ ಹಂತ ತಲುಪಿದೆ.

ಕೊನೆಗೂ ಹೊಸಕೆರೆಹಳ್ಳಿ ಫ್ಲೈಓವರ್ ಕಾಮಗಾರಿ ಬಹುತೇಕ ಪೂರ್ಣ: ಮುಂದಿನ ವಾರ ಪ್ರಾಯೋಗಿಕ ಸಂಚಾರಕ್ಕೆ ಮುಕ್ತ ಸಾಧ್ಯತೆ
ಹೊಸಕೆರೆಹಳ್ಳಿ ಫ್ಲೈಓವರ್
Ganapathi Sharma
|

Updated on:Nov 10, 2025 | 8:05 AM

Share

ಬೆಂಗಳೂರು, ನವೆಂಬರ್ 10: ಬೆಂಗಳೂರಿನ (Bengaluru) ನಾಯಂಡಹಳ್ಳಿ ಜಂಕ್ಷನ್​ನಿಂದ ಬನಶಂಕರಿ ಕಡೆಗೆ ಸಂಪರ್ಕ ಕಲ್ಪಿಸುವ ಹೊಸಕೆರೆಹಳ್ಳಿ ಫ್ಲೈ ಓವರ್ (Hosakerehalli PES Flyover) ಕಾಮಗಾರಿ ಕೊನೆಗೂ ಮುಗಿಯುವ ಹಂತಕ್ಕೆ ಬಂದಿದೆ. ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ರಾಜರಾಜೇಶ್ವರಿ ನಗರ ಕ್ಷೇತ್ರ ವ್ಯಾಪ್ತಿಯ ಹೊರ ವರ್ತುಲ ರಸ್ತೆಯ ಪಿಇಎಸ್ ಕಾಲೇಜು ಬಳಿಯ ಹೊಸಕೆರೆಹಳ್ಳಿ ಜಂಕ್ಷನ್‌ನಲ್ಲಿ 500 ಮೀಟರ್ ಮೇಲ್ಸೇತುವೆ ಕಾಮಗಾರಿಗೆ ಹಲವು ವಿಘ್ನಗಳು ಎದುರಾಗಿ ವಿಳಂಬ ಆಗಿತ್ತು. ಶೇಕಡಾ 90 ರಷ್ಟು ಕಾಮಗಾರಿ ಮುಗಿದಿದ್ದು, ಮುಂದಿನ ವಾರ ವಾಹನಗಳ ಪ್ರಾಯೋಗಿಕ ಸಂಚಾರಕ್ಕೆ ಅನುವು ಮಾಡಿಕೊಡುವ ಸಾಧ್ಯತೆ ಇದೆ. ಬಳಿಕ ಅಧಿಕೃತವಾಗಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಅತಂತ್ರ ಸ್ಥಿತಿಗೆ ಜಾರಿದ ಆರ್​ಆರ್ ನಗರ ಫ್ಲೈ ಓವರ್ ಕಾಮಗಾರಿ

ಹೊಸಕೆರೆಹಳ್ಳಿ ಫ್ಲೈ ಓಪನ್ ಕಾಮಗಾರಿ ಮುಗಿಯಿತು ಎಂಬ ಒಳ್ಳೆ ಸುದ್ದಿ ಒಂದೆಡೆಯಾದರೆ, ಸಮೀಪದಲ್ಲೇ ಇರುವ ಆರ್​ಆರ್ ನಗರ ಪ್ರವೇಶ ದ್ವಾರ ಬಳಿಯ ಫ್ಲೈಓವರ್ ಕಾಮಗಾರಿ ಕಳೆದ 2 ವರ್ಷಗಳಿಂದಲೂ ಅತಂತ್ರ ಸ್ಥಿತಿಯಲ್ಲೇ ಇದೆ. ಮೈಸೂರು ರಸ್ತೆಯೊಂದಿಗೆ ಸಂಪರ್ಕಿಸಲು 2022 ರಲ್ಲಿ ಪ್ರಾರಂಭಿಸಲಾದ 71 ಕೋಟಿ ರೂ.ಗಳ 300 ಮೀಟರ್ ಉದ್ದದ ಯೋಜನೆಯು ಹಳ್ಳ ಹಿಡಿದಿದೆ. ಮೈಸೂರು ರಸ್ತೆ RR ನಗರ ಆರ್ಚ್ ಬಳಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶಕ್ಕೂ ಧಕ್ಕೆ ಉಂಟಾಗಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಹಿತಾಸಕ್ತಿ ಕೊರತೆಯೇ ಇದಕ್ಕೆ ಕಾರಣ ಅಂತ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಬಿಂದಾಸ್ ಲೈಫ್: ಹಳೇ ವಿಡಿಯೋವೆಂದ ಜೈಲಾಧಿಕಾರಿಗಳು! ಹೊಸದೆನ್ನಲು ಇಲ್ಲಿವೆ ಸಾಕ್ಷ್ಯ

ಒಟ್ಟಾರೆಯಾಗಿ, ಬೆಂಗಳೂರು ಮಹಾನಗರ ಇತ್ತೀಚೆಗೆ ಟ್ರಾಫಿಕ್ ಜಾಮ್ ವಿಚಾರಕ್ಕೆ ಕುಖ್ಯಾತಿಗೆ ಗುರಿಯಾಗಿದೆ. ಹೀಗಾಗಿ ಫ್ಲೈ ಓವರ್ ಗಳು ಟ್ರಾಫಿಕ್ ನಿವಾರಣೆಗೆ ಅನಿವಾರ್ಯವಾಗಿದೆ. ಹೊಸಕೆರೆಹಳ್ಳಿ ಶೀಘ್ರವೇ ವಾಹನ ಸವಾರರ ಬಳಕೆಗೆ ಅನುವು ಮಾಡಿಕೊಡಬೇಕು ಎಂಬ ಆಗ್ರಹ ಒಂದೆಡೆಯಾದರೆ, RR ನಗರ ಫ್ಲೈ ಓವರ್ ಕಾಮಗಾರಿ ಬಗ್ಗೆಯೂ ಗಮನ ಹರಿಸಿ ಎಂಬುದು ಜನರ ಒತ್ತಾಯವಾಗಿದೆ.

ವರದಿ: ಲಕ್ಷ್ಮಿ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:03 am, Mon, 10 November 25

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?