AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Hostel Guidelines: ಹಾಸ್ಟೆಲ್‌ನಲ್ಲಿ ಮಕ್ಕಳು ಒಟ್ಟಿಗೆ ಊಟಕ್ಕೆ ಹೋಗುವಂತಿಲ್ಲ, ರಾಜ್ಯದ ಹಾಸ್ಟೆಲ್‌ಗಳಿಗೆ ಹೊಸ ಮಾರ್ಗಸೂಚಿ ಜಾರಿ

Karnataka Covid 19 New Guidelines | ಕೋವಿಡ್ 19 ಒಮಿಕ್ರಾನ್ ಮಾರ್ಗಸೂಚಿ: ರಾಜ್ಯದ ಹಾಸ್ಟೆಲ್‌ಗಳಿಗೆ ಹೊಸ ಮಾರ್ಗಸೂಚಿ ಜಾರಿ ಮಾಡಿ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Karnataka Hostel Guidelines: ಹಾಸ್ಟೆಲ್‌ನಲ್ಲಿ ಮಕ್ಕಳು ಒಟ್ಟಿಗೆ ಊಟಕ್ಕೆ ಹೋಗುವಂತಿಲ್ಲ, ರಾಜ್ಯದ ಹಾಸ್ಟೆಲ್‌ಗಳಿಗೆ ಹೊಸ ಮಾರ್ಗಸೂಚಿ ಜಾರಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Updated By: ಆಯೇಷಾ ಬಾನು|

Updated on:Dec 09, 2021 | 1:20 PM

Share

ಬೆಂಗಳೂರು: ಮಹಾಮಾರಿ ಕೊರೊನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಈ ಬಾರಿ ಮಹಾಮಾರಿ ಹೆಚ್ಚಾಗಿ ಮಕ್ಕಳ ಮೇಲೆ, ವಿದ್ಯಾರ್ಥಿಗಳ ಮೇಲೆ ಕಣ್ಣಿಟ್ಟಿದೆ. ಶಾಲಾ-ಕಾಲೇಜುಗಳಲ್ಲಿ ಹೆಚ್ಚಾಗಿ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಸದ್ಯ ರಾಜ್ಯದ ಹಾಸ್ಟೆಲ್‌ಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಹೊಸ ಮಾರ್ಗಸೂಚಿ ಜಾರಿ ಮಾಡಿದ್ದಾರೆ.

ರಾಜ್ಯದ ಹಾಸ್ಟೆಲ್‌ಗಳಿಗೆ ಹೊಸ ಮಾರ್ಗಸೂಚಿ -ಹಾಸ್ಟೆಲ್‌ನಲ್ಲಿ ಮಕ್ಕಳು ಒಟ್ಟಿಗೆ ಊಟಕ್ಕೆ ಹೋಗುವಂತಿಲ್ಲ -ಅಂತರ ಪಾಲಿಸಿಕೊಂಡು ಊಟ ಮಾಡುವುದಕ್ಕೆ ಹಾಸ್ಟೆಲ್‌ಗಳಲ್ಲಿ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ -ಹಾಸ್ಟೆಲ್ ಸಿಬ್ಬಂದಿಗೆ 2 ಡೋಸ್ ಕೊವಿಡ್ ಲಸಿಕೆ ಕಡ್ಡಾಯ -ಹಾಸ್ಟೆಲ್‌ಗಳಿಗೆ ಹೊಸಬರಿಗೆ ಕಡ್ಡಾಯವಾಗಿ ಪ್ರವೇಶ ಇಲ್ಲ.

ಸದ್ಯ ಕೊರೊನಾ ವಿಚಾರದಲ್ಲಿ, ಒಮಿಕ್ರಾನ್ ವಿಚಾರದಲ್ಲಿ ಗಾಬರಿ, ಆತಂಕ ಅಗತ್ಯ ಇಲ್ಲ. ಈಗ ಸಭೆಯಲ್ಲಿ ಕ್ಲಸ್ಟರ್ ಮತ್ತು ಹಾಸ್ಟೆಲ್​ಗಳಲ್ಲಿ ಹೊಸ ಕೋವಿಡ್ ನಿಯಮಗಳ ಜಾರಿಗೆ ನಿರ್ಧರಿಸಲಾಯಿತು. ಹಾಸ್ಟೆಲ್​ಗಳಲ್ಲಿ ವಿಭಾಗಿಸಿ ಉಪಹಾರ, ಊಟದ ವ್ಯವಸ್ಥೆ ಮಾಡಬೇಕು. ಹಾಸ್ಟೆಲ್, ಕ್ಲಸ್ಟರ್ ಗಳಿಗೆ ಪ್ರತ್ಯೇಕ‌ ನಿಯಮ ತರಲಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯ ಬಳಿಕ ತಿಳಿಸಿದ್ದಾರೆ.

ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಬಳಿಕ ಗೈಡ್‌ಲೈನ್ಸ್ ಇನ್ನು ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಪರಿಶೀಲಿಸಿ ಸರ್ಕಾರದಿಂದ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತೆ. ನಾಳೆ ಅಥವಾ ನಾಡಿದ್ದು ಸಮಿತಿಯಿಂದ ಸರ್ಕಾರಕ್ಕೆ ಶಿಫಾರಸು ಮಾಡಲಾಗುತ್ತೆ. ಬಹುತೇಕ ಸಭೆ, ಸಮಾರಂಭ, ಱಲಿ, ಕಾರ್ಯಕ್ರಮಗಳು, ಹೊಸ ವರ್ಷಾಚರಣೆಗೂ ಈ ಬಾರಿ ಬ್ರೇಕ್ ಬೀಳುವ ಸಾಧ್ಯತೆ ಇದೆ. ನೈಟ್ ಕರ್ಫ್ಯೂ, ಲಾಕ್‌ಡೌನ್ ಮಾಡದೆ ಗೈಡ್‌ಲೈನ್ಸ್ ಸಾಧ್ಯತೆ ಇದೆ.

ಶಾಲೆಗಳನ್ನು ಮುಚ್ಚಬೇಕಾದಷ್ಟು ಗಂಭೀರ ಸ್ಥಿತಿ ಸದ್ಯಕ್ಕೆ ಇಲ್ಲ ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಕೋವಿಡ್ ಸಂಖ್ಯೆ ಇಳಿಮುಖವಾಗಿದೆ. ಮೌಂಟ್ ಕಾರ್ಮೆಲ್ ಪಿಯು ತರಗತಿಯಲ್ಲಿ ಮಾತ್ರ ಪಾಸಿಟಿವ್ ಆಗಿದೆ. ಕೋವಿಡ್ ಅಟ್ಯಾಕ್ ಆದವರೆಲ್ಲ ಆರೋಗ್ಯವಾಗಿದ್ದಾರೆ. ಶಾಲೆಗಳೆಲ್ಲ ಮತ್ತೆ ಓಪನ್ ಆಗಿದೆ. ಶಾಲೆಗಳಿಗೆ ಮಕ್ಕಳು ಆಸಕ್ತಯಿಂದಲೇ ಬರುತ್ತಿದ್ದಾರೆ. ಎಸ್.ಎಸ್.ಎಲ್ಸಿ ತೆಗೆದುಕೊಳ್ಳದೇ ನೇರವಾಗಿ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. ಇವತ್ತಿನವರೆಗೂ 172 ಶಿಕ್ಷಕರು ಮತ್ತು ಮಕ್ಕಳಿಗೆ ಸೋಂಕು ತಗುಲಿದೆ. 100 ಮಕ್ಕಳು ಇದರಿಂದ ರಿಕವರಿ ಆಗಿದ್ದಾರೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.

ಇದನ್ನೂ ಓದಿ: ಉದ್ಯಮಿ ಗಾಂಧಿಗೆ ವಂಚನೆ: 100 ಕೋಟಿ ಸಾಲದ ಆಸೆ ತೋರಿಸಿ 1.80 ಕೋಟಿ ರೂ ಎಗರಿಸಿ, ಪರಾರಿ!

Published On - 12:52 pm, Thu, 9 December 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!