ಬೆಂಗಳೂರು: ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂಗೆ ಭಾರಿ ವಿರೋಧ ವ್ಯಕ್ತವಾಗಿದೆ. ಹೋಟೆಲ್, ರೆಸ್ಟೋರೆಂಟ್, ಚೌಟ್ರಿ ಮಾಲೀಕರ ಸಂಘ, ಬಾರ್ ಮಾಲೀಕರಿಂದ ವೀಕೆಂಡ್ ಕರ್ಫ್ಯೂಗೆ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಬೆಂಗಳೂರಿನ ಗಾಯತ್ರಿ ವಿಹಾರದಲ್ಲಿ ಸಭೆ ನಡೆಸಿದ್ದಾರೆ. ವಿಕೇಂಡ್ ಕರ್ಫ್ಯೂ ವೇಳೆ ಶೇ.50 ರಷ್ಟು ಅವಕಾಶ ಕೊಡಬೇಕು. ಹೋಟೆಲ್ಗಳಿಗೆ ಶೇ.50 ಅವಕಾಶ ಕೊಡಬೇಕು. ನಾವೇಲ್ಲರೂ ಒಕ್ಕೊರಲಿನಿಂದ ಒತ್ತಾಯ ಮಾಡ್ತೀವಿ. ನೈಟ್ ಕರ್ಫ್ಯೂ ಹಾಗೂ ವಿಕೇಂಡ್ ಕರ್ಫ್ಯೂ ಬಗ್ಗೆ ನಾವು ಆರಂಭದಿಂದಲೂ ವಿರೋಧಿಸುತ್ತಲೇ ಬಂದಿದ್ದೇವೆ. ಸರ್ಕಾರಕ್ಕೆ ಹಲವು ಬಾರೀ ಮನವಿ ಮಾಡಿದ್ರೂ ನಮ್ಮ ಸಮಸ್ಯೆ ಈಡೇರಿಲ್ಲ ಎಂದು ಸಭೆಯಲ್ಲಿ ನಗರದ ಸಂಘಟನೆಗಳ ಪದಾಧಿಕಾರಿಗಳು, ಉದ್ಯಮಿಗಳು ಭಾಗಿಯಾಗಿ ಚರ್ಚೆ ನಡೆಸಿದ್ದಾರೆ.
ಹಲವು ಬಾರಿ ಮನವಿ ಮಾಡಿದ್ರೂ ಸರ್ಕಾರ ಸ್ಪಂದಿಸದ ಹಿನ್ನೆಲೆ ವೀಕೆಂಡ್ ಕರ್ಫ್ಯೂ ವಿರುದ್ಧ ಹೋಟೆಲ್ ಮಾಲೀಕರ ಸಂಘ ಕಿಡಿಕಾರಿದೆ. ವೀಕೆಂಡ್ ಕರ್ಫ್ಯೂ ವೇಳೆ ಹೋಟೆಲ್ ಓಪನ್ ಮಾಡೇ ಮಾಡ್ತೇವೆ. ಎಲ್ಲರಿಗೂ ಒಂದು ನ್ಯಾಯ ನಮಗೊಂದು ನ್ಯಾಯನಾ ಎಂದು ಕಿಡಿಕಾರಿದ್ದಾರೆ. ನಮಗೆ ಯಾವಾಗಲೂ ಅನ್ಯಾಯ ಮಾಡುತ್ತಿದ್ದೀರಾ ಎಂದು ಗರಂ ಆಗಿದ್ದಾರೆ. ಈ ವಾರದ ವೀಕೆಂಡ್ ಕರ್ಫ್ಯೂ ಬಳಿಕ ತೀರ್ಮಾನ ಧಿಕ್ಕರಿಸ್ತೇವೆ. ನೈಟ್ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಸಡಿಲಿಸುವಂತೆ ಮನವಿ ಮಾಡುತ್ತೇವೆ ಎಂದು ಸರ್ಕಾರಕ್ಕೆ ಹೋಟೆಲ್, ಬಾರ್ ಮಾಲೀಕರು ಗಡುವು ಕೊಟ್ಟಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಇಂದು 25,005 ಕೊರೊನಾ ಪ್ರಕರಣಗಳು ಪತ್ತೆ ಆಗಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ 8 ಜನರು ಬಲಿ ಆಗಿದ್ದಾರೆ. ಬೆಂಗಳೂರಿನಲ್ಲಿ ಇಂದು 18,374 ಕೊರೊನಾ ಕೇಸ್ ಪತ್ತೆ ಆಗಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾದಿಂದ ಮೂವರ ಸಾವು ಸಂಭವಿಸಿದೆ. ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 1,15,733 ಆಗಿದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡಾ 12.39ರಷ್ಟು ಇದೆ. ಈ ಬಗ್ಗೆ ಟ್ವಿಟರ್ನಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ
ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ರಾಜ್ಯದ ಕೊವಿಡ್ ಸ್ಥಿತಿ ಬಗ್ಗೆ ಮಾಹಿತಿ ನೀಡಲಾಗಿದೆ. ರಾಜ್ಯದ ಸ್ಥಿತಿ ಬಗ್ಗೆ ಸಿಎಂ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ವಿಡಿಯೋ ಕಾನ್ಫರೆನ್ಸ್‌ನಲ್ಲಿ ಪ್ರಧಾನಿಗೆ ಮಾಹಿತಿ ನೀಡಿದ್ದಾರೆ. ಪ್ರಧಾನಿ ಸಭೆಗೂ ಪೂರ್ವಭಾವಿಯಾಗಿ ಬೊಮ್ಮಾಯಿ ಸಭೆ ನಡೆಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಬೊಮ್ಮಾಯಿ ಸಭೆ ನಡೆಸಿದ್ದು, ಸಭೆಯಲ್ಲಿ ಸಚಿವ ಡಾ.ಸುಧಾಕರ್, ಸಿಎಸ್ ರವಿಕುಮಾರ್, ಹಿರಿಯ ಅಧಿಕಾರಿಗಳ ಜೊತೆ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ.
ಹೋಮ್ ಐಸೋಲೇಷನ್ ಜಾಸ್ತಿಯಾಗುತ್ತಿದೆ. ಅದರ ಬಗ್ಗೆ ಜಾಸ್ತಿ ನಿಗಾ ಇಡಿ. ಸಣ್ಣ ಪ್ರಮಾಣದ ಲಕ್ಷಣಗಳಿಗೆ ಹೋಮ್ ಐಸೋಲೇಷನ್ ಆದ್ಯತೆ ಕೊಡಿ. ಟ್ರೇಸಿಂಗ್, ಟ್ರ್ಯಾಕಿಂಗ್, ಟೆಸ್ಟಿಂಗ್, ಟ್ರಯಾಜಿಂಗ್ ಗೆ ಹೆಚ್ಚು ಗಮನ ಇರಲಿ. ಪಾಸಿಟಿವಿಟಿ ಜಾಸ್ತಿ ಇರುವ ರಾಜ್ಯಗಳಲ್ಲಿ ಲಸಿಕೆ ಪ್ರಮಾಣ ಹೆಚ್ಚಾಗಲಿ ಎಂದು ವೀಡಿಯೋ ಕಾನ್ಫರೆನ್ಸ್ ನಲ್ಲಿ ರಾಜ್ಯಗಳಿಗೆ ಪ್ರಧಾನಿ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: Coronavirus: ಬೆಂಗಳೂರು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಕೊರೊನಾ ಮಾರ್ಗಸೂಚಿ ಬಿಡುಗಡೆ, ಕೊಪ್ಪಳ ಗವಿಮಠ ಜಾತ್ರೆ ರದ್ದು
ಇದನ್ನೂ ಓದಿ: ಜನರ ಆರೋಗ್ಯ ಗಮನದಲ್ಲಿಟ್ಟು ಪಾದಯಾತ್ರೆ ಸ್ಥಗಿತ, ಕೊರೊನಾ ಕಡಿಮೆಯಾದ ಬಳಿಕ ಮತ್ತೆ ಪಾದಯಾತ್ರೆ: ಡಿಕೆ ಶಿವಕುಮಾರ್
Published On - 6:52 pm, Thu, 13 January 22