AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬಿಸಿಲ ಬೇಗೆಯಿಂದ ಹೋಟೆಲ್ ಉದ್ಯಮಕ್ಕೂ ಹೊಡೆತ: ವಹಿವಾಟು ಶೇ 30ರಷ್ಟು ಕುಸಿತ

ಬಿಸಿಲ ಬೇಗೆಯ ಧಗೆ ಈಗ ಹೋಟೆಲ್ ಉದ್ಯಮಕ್ಕೂ ತಟ್ಟಲಾರಂಭಿಸಿದೆ. ಹೆಚ್ಚುತ್ತಿರುವ ಉಷ್ಣಾಂಶದಿಂದಾಗಿ ಮನೆಯಿಂದ ಹೊರಡಲು ಹಿಂದೇಟು ಹಾಕುತ್ತಿರುವ ಜನರು ಹೋಟೆಲ್​ಗಳಿಗೂ ತೆರಳುವುದನ್ನು ಕಡಿಮೆ ಮಾಡಿದ್ದಾರೆ. ಪರಿಣಾಮವಾಗಿ ಬೆಂಗಳೂರಿನ ಹೋಟೆಲ್​ಗಳಲ್ಲಿ ವಹಿವಾಟು ಶೇ 30ರಷ್ಟು ಕುಸಿದಿದೆ.

ಬೆಂಗಳೂರಿನಲ್ಲಿ ಬಿಸಿಲ ಬೇಗೆಯಿಂದ ಹೋಟೆಲ್ ಉದ್ಯಮಕ್ಕೂ ಹೊಡೆತ: ವಹಿವಾಟು ಶೇ 30ರಷ್ಟು ಕುಸಿತ
ಸಾಂದರ್ಭಿಕ ಚಿತ್ರ
Poornima Agali Nagaraj
| Updated By: Ganapathi Sharma|

Updated on: Apr 30, 2024 | 7:37 AM

Share

ಬೆಂಗಳೂರು, ಏಪ್ರಿಲ್ 30: ಬೆಂಗಳೂರಿನಲ್ಲಿ (Bengaluru) ದಿನದಿಂದ ದಿನಕ್ಕೆ ಬಿಸಿಲಿನ ಪ್ರಮಾಣ ಜಾಸ್ತಿಯಾಗುತ್ತಿದ್ದು, ಇದು ಹೋಟೆಲ್ ಉದ್ಯಮದ (Hotel Business) ಮೇಲೂ ಪರಿಣಾಮ ಬೀರಿದೆ. ಜನರು ಮೊದಲೇ ರೋಸಿ ಹೋಗುತ್ತಿದ್ದಾರೆ.‌ ಮತ್ತೊಂದು ಕಡೆ ನೀರಿನ ಸಮಸ್ಯೆಯೂ ಬಗೆಹರಿಯುತ್ತಿಲ್ಲ. ಹೀಗಾಗಿ ನಗರದಲ್ಲಿ ಜನರ ಓಡಾಟವೇ ಕಡಿಮೆಯಾಗಿ ಹೋಗಿದ್ದು, ಬಿಸಿಲಿನ ಬಿಸಿ ಇದೀಗ ಹೋಟೆಲ್ ಉದ್ಯಮಕ್ಕೂ ತಟ್ಟಿದೆ. ನಗರದ ಹೋಟೆಲ್​ಗಳ ವಹಿವಾಟಿನಲ್ಲಿ ಶೇ 30 ರಷ್ಟು ಕುಸಿತವಾಗಿರುವ ಬಗ್ಗೆ ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷ ಪಿಸಿ ರಾವ್ ಮಾಹಿತಿ ನೀಡಿದ್ದಾರೆ.

ಬಿಸಿಲು ಹೆಚ್ಚಾಗುತ್ತಿದ್ದಂತೆ ಮನೆಯಿಂದ‌ ಹೊರ ಹೋಗುವುದನ್ನು ಆದಷ್ಟು ಕಡಿಮೆ ಮಾಡಿರುವ ಜನ ಹೋಟೆಲ್​​ಗೆ ಹೋಗುವುದನ್ನೂ ಕಡಿಮೆ‌ ಮಾಡಿದ್ದಾರೆ.‌ ಈ‌ ಕಾರಣದಿಂದಾಗಿ ಹೋಟೆಲ್ ವ್ಯಾಪಾರ ವಹಿವಾಟು ಶೇ 30 ರಷ್ಟು ಕುಸಿತವಾಗಿದೆ. ಮಧ್ಯಾಹ್ನ ಆಗುತ್ತಿದ್ದಂತೆ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿದ್ದು, ಮಧ್ಯಹ್ನದ ವೇಳೆ‌ ಹೋಟೆಲ್​​ಗಳಿಗೆ ಜನರು ಬರುವುದೇ ಕಷ್ಟವಾಗಿ ಹೋಗಿದೆ.‌ ಟೀ ಕಾಫಿ ಕುಡಿಯುವುದಕ್ಕಾದರೂ ಅನೇಕರು ಹೋಟೆಲ್​ಗೆ ಹೋಗುತ್ತಿದ್ದರು. ಈಗ ಬಿಸಿಲು ಜಾಸ್ತಿ ಇರುವ ಪರಿಣಾಮ ಟೀ ಕಾಫಿ ಕುಡಿಯುವವರ ಸಂಖ್ಯೆಯೂ ಕಡಿಮೆಯಾಗಿದೆ. ಹೀಗಾಗಿ ವ್ಯಾಪಾರ ವಹಿವಾಟು ಕುಂಠಿತವಾಗಿದೆ. ಮುಂದಿನ ದಿನಗಳಲ್ಲಿ ಇದೇ ರೀತಿ ಮುಂದುವರಿದರೆ ಹೋಟೆಲ್ ಉದ್ಯಮ ಕಷ್ಟವಿದೆ ಎಂದು ಅನೇಕ ವ್ಯಾಪಾರಸ್ಥರು ಹೇಳುತ್ತಿದ್ದಾರೆ.

ಈ ಬಿಸಿಲಿಗೆ ಹೋಟೆಲ್​​ಗೆ ಬರುವುದೇ ಕಷ್ಟ. ಈ ಬಿಸಿಯಲ್ಲಿ ಊಟ ತಿಂಡಿ ಮಾಡುವುದೇ ಕಷ್ಟವಾಗುತ್ತಿದೆ.‌ ಹೀಗಾಗಿ ನಾವು ಹೋಟೆಲ್‌ಗಳಿಗೆ ಬರುವುದನ್ನೇ ಕಡಿಮೆ ಮಾಡಿದ್ದೇವೆ. ಟೀ ಕಾಫಿ ಬದಲು ಜ್ಯೂಸ್ ಎಳನೀರು ಕುಡಿಯುತ್ತಿದ್ದೇವೆ ಎಂದು ಗ್ರಾಹಕರು ಪ್ರತಿಕ್ರಿಯಿಸಿದ್ದಾರೆ.

ಇನ್ನೂ ಐದು ದಿನ ಒಣ ಹವೆ

ಇನ್ನೂ ಐದು ದಿನ ಬೆಂಗಳೂರಿನಲ್ಲಿ ಮತ್ತು ರಾಜ್ಯದ ವಿವಿಧೆಡೆ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮಧ್ಯೆ, ಬೆಂಗಳೂರಿನಲ್ಲಿ ಉಷ್ಣಾಂಶ ಈ ಬಾರಿ ಹಳೆ ದಾಖಲೆಗಳನ್ನು ಮುರಿದಿದೆ.‌ ಈ ಹಿಂದೆ ಏಪ್ರಿಲ್ ತಿಂಗಳಲ್ಲಿ ಗರಿಷ್ಠ ತಾಪಮಾನ ಯಾವಾಗಲೂ ಒಂದು ಅಥವಾ ಎರಡು ದಿನ ಇರುತ್ತಿತ್ತು. ಆದರೆ ಈ ಬಾರಿ ಸತತವಾಗಿ 10 ದಿನಗಳಿಗೂ ಅಧಿಕ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ: ಇತಿಹಾಸದಲ್ಲೇ ಅತಿ ಹೆಚ್ಚು ತಾಪಮಾನ ದಾಖಲು

ಕಳೆದ ಎರಡು ದಿನಗಳಿಂದ ನಗರದಲ್ಲಿ 38 ರಿಂದ 39 ಉಷ್ಣಾಂಶ ದಾಖಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆ ಜೊತೆಗೆ ಕೆಲವು ಜಿಲ್ಲೆಗಳಲ್ಲಿ ಬಿಸಿಗಾಳಿ ಮುಂದುವರೆಯಲಿದೆ. ಈ ಹಿಂದೆ 2016 ರ ಏಪ್ರಿಲ್​​​ಲ್ 25 ರಂದು ಬೆಂಗಳೂರು ನಗರದಲ್ಲಿ 39.2 ಗರಿಷ್ಠ ಉಷ್ಣಾಂಶ ದಾಖಲಾಗಿತ್ತು.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ