ಬೆಂಗಳೂರಿನ ಹೋಟೆಲ್ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ, ಹೋಟೆಲ್ ಮಾಲೀಕ ಆಸ್ಪತ್ರೆಗೆ ದಾಖಲು
ಬೆಂಗಳೂರಿನ ಚಂದ್ರಾಲೇಔಟ್ನಲ್ಲಿರುವ ಸಂತೃಪ್ತಿ ಉತ್ತರ ಕರ್ನಾಟಕ ಜವಾರಿ ಊಟದ ಮನೆ ಹೋಟೆಲ್ನಲ್ಲಿ ಬೆಳಗ್ಗೆ 9:45ರ ಸುಮಾರಿಗೆ ಈ ಘಟನೆ ನಡೆದಿದೆ. ಕಟ್ಟಡದ ಗ್ರೌಂಡ್ಫ್ಲೋರ್ನಲ್ಲಿ ಹೋಟೆಲ್ ಕಂ ಪಿಜಿಯಲ್ಲಿ ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಆಗಿದ್ದು ಈ ವೇಳೆ ಮಹೇಶ್ ಮಾತ್ರ ಇದ್ದರು.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹೋಟೆಲ್ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು ಹೋಟೆಲ್ ಮಾಲೀಕ ಮಹೇಶ್ ಸ್ಥಿತಿ ಗಂಭೀರವಾಗಿದೆ. ಸದ್ಯ ಮಹೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬೆಂಗಳೂರಿನ ಚಂದ್ರಾಲೇಔಟ್ನಲ್ಲಿರುವ ಸಂತೃಪ್ತಿ ಉತ್ತರ ಕರ್ನಾಟಕ ಜವಾರಿ ಊಟದ ಮನೆ ಹೋಟೆಲ್ನಲ್ಲಿ ಬೆಳಗ್ಗೆ 9:45ರ ಸುಮಾರಿಗೆ ಈ ಘಟನೆ ನಡೆದಿದೆ. ಕಟ್ಟಡದ ಗ್ರೌಂಡ್ಫ್ಲೋರ್ನಲ್ಲಿ ಹೋಟೆಲ್ ಕಂ ಪಿಜಿಯಲ್ಲಿ ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಆಗಿದ್ದು ಈ ವೇಳೆ ಮಹೇಶ್ ಮಾತ್ರ ಇದ್ದರು. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ. ಹೋಟೆಲ್ ಮಾಲೀಕ ಮಹೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಚಂದ್ರಾಲೇಔಟ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ನೆಲಮಂಗಲ: ಚಿತ್ರ ನಟಿ ಐಶ್ವರ್ಯ ರೈ ತರ ಕಾಣ್ತೀಯ ಅಂತ ಹೇಳಿ ವಿವಾಹಿತ ಮಹಿಳೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಗೆ ವಿವಾಹಿತ ಮಹಿಳೆ ದೂರು ನೀಡಿದ್ದು, ಆರೋಪಿ ಹನುಮಂತರಾಯನನ್ನು ಪೊಲೀಸರು ವಶಕ್ಕೆ ಪಡೆದು ಠಾಣೆ ಬೇಲ್ ಮೇಲೆ ಬಿಟ್ಟು ಕಳುಹಿಸಿದ್ದಾರೆ. ಡಿಸೆಂಬರ್ 28ರಂದು ಈ ಘಟನೆ ನಡೆದಿದ್ದು. ತಡವಾಗಿ ಬೆಳಕಿಗೆ ಬಂದಿದೆ.
ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಂದು, ಶವ ಬಚ್ಚಿಟ್ಟ ಕಾಮುಕರು ಆಟವಾಡಿಕೊಂಡು ಇರುತ್ತಿದ್ದ 5 ವರ್ಷದ ಬಾಲಕಿಯ ಮೇಲೆ ಆಕೆಯ ಮನೆಯಲ್ಲೇ ಅಮಾನುಷವಾಗಿ ಅತ್ಯಾಚಾರ ನಡೆದಿದೆ. ಮಧ್ಯಪ್ರದೇಶದ ಹೋಶಂಗಾಬಾದ್ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ನಿರ್ದಯವಾಗಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಅಲ್ಲದೆ, ಆ ಬಾಲಕಿಯ ಶವವನ್ನು ಮನೆಯ ಚಾವಣಿಯ ಮೇಲೆ ಅಡಗಿಸಿ ಇಟ್ಟಿದ್ದಾರೆ.
ಇದನ್ನೂ ಓದಿ: ಕನ್ನಡದಲ್ಲೊಂದು ವೆಬ್ ಸಿರೀಸ್ ಬಿಡುಗಡೆಗೆ ಸಿದ್ಧ; ಗಮನ ಸೆಳೆದ ‘ವೈಟ್ ಆ್ಯಂಡ್ ಬ್ಲಾಕ್’ ಪೋಸ್ಟರ್
Published On - 2:34 pm, Mon, 3 January 22