ಬೆಂಗಳೂರಿನ ಭಾರೀ ಮಳೆಗೆ ಕುಸಿದುಬಿದ್ದ ಮನೆ: ಅದೃಷ್ಟವಶಾತ್​ ತಪ್ಪಿದ ಅನಾಹುತ

ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಮನೆ ಕುಸಿದುಬಿದ್ದು, ಮನೆಯಲ್ಲಿ ಯಾರೂ ಇಲ್ಲದಿರುವುದರಿಂದ ಅನಾಹುತ ತಪ್ಪಿರುವಂತಹ ಘಟನೆ ನಡೆದಿದೆ.

ಬೆಂಗಳೂರಿನ ಭಾರೀ ಮಳೆಗೆ ಕುಸಿದುಬಿದ್ದ ಮನೆ: ಅದೃಷ್ಟವಶಾತ್​ ತಪ್ಪಿದ ಅನಾಹುತ
ಮಳೆಯಿಂದ ಕುಸಿದುಬಿದ್ದ ಮನೆ
Follow us
ಗಂಗಾಧರ​ ಬ. ಸಾಬೋಜಿ
|

Updated on:May 08, 2023 | 8:13 PM

ಬೆಂಗಳೂರು: ನಗರದಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಸೋಮವಾರ ಕೂಡ ಜೋರು ಮಳೆಯಾಗಿದ್ದು, ಪರಿಣಾಮ ಮನೆಯೊಂದು ಕುಸಿದೆ. ಇಂದು ಸುರಿದ ಭಾರೀ ಮಳೆಗೆ ಮನೆ ಕುಸಿದುಬಿದ್ದು(House collapses), ಮನೆಯಲ್ಲಿ ಯಾರೂ ಇಲ್ಲದಿರುವುದರಿಂದ ಅನಾಹುತ ತಪ್ಪಿದೆ. ರಿಂಗ್​​ ರೋಡ್​ನ ವೀರಭದ್ರೇಶ್ವರ ನಗರದಲ್ಲಿ ಘಟನೆ ಸಂಭವಿಸಿದೆ. ಅಪಾರ್ಟ್​​ಮೆಂಟ್​ನ ತಡೆಗೋಡೆ ಸಮೇತ ಮನೆ ಕುಸಿದುಬಿದಿದ್ದು, ತಡೆಗೋಡೆ ಪಕ್ಕದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳು ಜಖಂಗೊಂಡಿವೆ. ಅವಘಡದಲ್ಲಿ ಮತ್ತೆರಡು ಕಾರುಗಳಿಗೆ ಹಾನಿ ಆಗಿದೆ. ಗೋಪಾಲ್ ಎಂಬುವರಿಗೆ ಸೇರಿದ ಮನೆ ಇದಾಗಿದ್ದು, ಮನೆಯಲ್ಲಿದ್ದ ವಸ್ತುಗಳೆಲ್ಲವೂ ಸಂಪೂರ್ಣ ಹಾನಿ ಆಗಿವೆ.

ಬಸ್ ಮೇಲೆ ಧರೆಗುರುಳಿ ಬೃಹತ್ ಮರ: ಯುವತಿ ಗಂಭೀರ  

ಗದಗ: ಭಾರೀ ಗಾಳಿ ಮಳೆಗೆ ಬೃಹತ್ ಮರ ಧರೆಗುರುಳಿ ಸಾರಿಗೆ ಸಂಸ್ಥೆಯ ಬಸ್ ಮೇಲೆ ಬಿದಿದ್ದಿದೆ. ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರ ಗ್ರಾಮದ ಬಳಿ ಘಟನೆ ನಡೆದಿದೆ. ಬಸ್​ನಲ್ಲಿದ್ದ ಯುವತಿಗೆ ಗಂಭೀರವಾದ ಗಾಯವಾಗಿದ್ದು, ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ದಾಖಲು ಮಾಡಲಾಗಿದೆ. ಗಜೇಂದ್ರಗಡ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಇದು ನಾಳೆ ಮತ್ತು ನಾಡಿದ್ದು ಮಳೆ ಸಾಧ್ಯತೆ

ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಉಂಟಾದ ಪರಿಣಾಮ ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು, ಇಂದಿನಿಂದ ನಾಲ್ಕು ದಿನಗಳ ಕಾಲ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Bangalore Rain: ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ ನಾಲ್ಕು ದಿನ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಬಂಗಾಳ ಕೊಲ್ಲಿಯಲ್ಲಿ ನಿನ್ನೆ ಮೇಲ್ಮಟ್ಟದಲ್ಲಿ ಸುಳಿಗಾಳಿ ಉಂಟಾಗಿದ್ದು, ಅದರ ಪ್ರಭಾವದಿಂದಾಗಿ ಸಮುದ್ರ ಮಟ್ಟದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದು ನಾಳೆ ಮತ್ತು ನಾಡಿದ್ದು ತೀವ್ರವಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ವಾಯುಭಾರ ಕುಸಿತ ಆಗ್ನೇಯದಿಂದ ಉತ್ತರ ದಿಕ್ಕಿನಲ್ಲಿ ತಲುಪಿ, ಮಧ್ಯಬಂಗಾಳ ಕೊಲ್ಲಿಯಲ್ಲಿ, ಚಂಡಮಾರುತವಾಗುವ ಸಾಧ್ಯತೆಗಳಿವೆ. ಇದರ ಪ್ರಭಾವದಿಂದಾಗಿ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ. ಇದರ ಪ್ರಭಾವ ದಕ್ಷಿಣ ಒಳನಾಡಿನಲ್ಲಿ ಹೆಚ್ಚಾಗಿರುತ್ತದೆ. ಇಂದಿನಿಂದ ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಲಿದ್ದು, ಐದನೇ ದಿನ ಕೆಲವು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಸಂಜೆ ಸುರಿದ ಮಳೆ

ನಗರದ ಶಾಂತಿನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಸಂಜೆ ಮಳೆ ಸುರಿದಿದೆ. ಸದ್ಯ ನಗದ ವಿವಿಧ ಕಡೆಗಳಲ್ಲಿ ಮೋಡಕವಿದ ವಾತಾವರಣ ಇದ್ದು, ಭಾರೀ ಮಳೆಯಾಗುವ ಲಕ್ಷಣಗಳು ಕಾಣುತ್ತಿವೆ. ಮಳೆ ಹೆಚ್ಚಾದರೆ ರಸ್ತೆಗಳಲ್ಲಿ ನೀರು ತುಂಬಿ ಕರೆಯಂತಾಗಲಿದ್ದು, ವಾಹನ ಸವಾರರ ಸಂಚಾರಕ್ಕೆ ಅಡಚಣೆಯಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:53 pm, Mon, 8 May 23

Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ