AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ; ಈ ಬಾರಿ ಎಂಜಿ ರೋಡ್, ಬ್ರಿಗೇಡ್ ರೋಡ್​ನಲ್ಲಿ ಹೇಗಿರಲಿದೆ ಸೆಲೆಬ್ರೆಷನ್

ಇಂದು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನ್ಯೂ ಇಯರ್ ಸೆಲೆಬ್ರೆಷನ್ಗೆ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಹೊಸವರ್ಷ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ.

ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ; ಈ ಬಾರಿ ಎಂಜಿ ರೋಡ್, ಬ್ರಿಗೇಡ್ ರೋಡ್​ನಲ್ಲಿ ಹೇಗಿರಲಿದೆ ಸೆಲೆಬ್ರೆಷನ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 26, 2021 | 11:23 AM

Share

ಬೆಂಗಳೂರು: ಹೊಸ ವರ್ಷವನ್ನು(New Year) ಸಂತಸದಿಂದ ಬರಮಾಡಿಕೊಳ್ಳಲು ಕ್ಷಣಗಣನೆ ಶುರುವಾಗಿದೆ. ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಕುಣಿದು ಕುಪ್ಪಳಿಸಿ ನ್ಯೂ ಇಯರ್ ಸೆಲೆಬ್ರೆಟ್ ಮಾಡಲು ಕಾಯುತ್ತಿದ್ದ ಜನರಿಗೆ ಸರ್ಕಾರ ಶಾಕ್ ಕೊಟ್ಟಿದೆ. ನಗರದಲ್ಲಿ ಒಮಿಕ್ರಾನ್ ಕಾಟ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ. ಸಭೆಯಲ್ಲಿ ರಾಜ್ಯದಾದ್ಯಂತ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಗೊಳಿಸಿ ಘೋಷಣೆ ಮಾಡಿದ್ದಾರೆ. ಡಿ.28ರಿಂದ 10 ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿ ಇರಲಿದೆ.

ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಹೇಗಿರಲಿದೆ ನ್ಯೂ ಇಯರ್ ಸೆಲೆಬ್ರೆಷನ್ ಇಂದು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನ್ಯೂ ಇಯರ್ ಸೆಲೆಬ್ರೆಷನ್ಗೆ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಹೊಸವರ್ಷ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ. ಹೋಟೆಲ್‌ಗಳಲ್ಲಿ ಶೇಕಡಾ 50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದ್ದು ಹೋಟೆಲ್, ಬಾರ್, ಪಬ್, ಕ್ಲಬ್, ರೆಸ್ಟೋರೆಂಟ್‌ಗಳಲ್ಲಿ ಶೇಕಡಾ 50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಹೀಗಾಗಿ ಈ ಬಾರಿ ಕೂಡ ಹೊಸ ವರ್ಷ ಆಚರಣೆಗೆ ಬ್ರೇಕ್ ಬಿದ್ದಿದೆ.

ಮಹಾಮಾರಿ ಕೊರೊನಾದಿಂದ ಕಳೆದ ವರ್ಷ ಕೂಡ ಹೊಸ ವರ್ಷಾಚರಣೆಗೆ ಬ್ರೇಕ್ ಬಿದ್ದಿತ್ತು. ಈ ಬಾರಿ ಕೂಡ ಸಾರ್ವಜನಿಕ ಸ್ಥಳದಲ್ಲಿ ಹೊಸವರ್ಷ ಕಾರ್ಯಕ್ರಮಗಳಿಗೆ ನಿಷೇಧ ಹೇರಿ ಆದೇಶ ಹೊರಡಿಸಲಾಗಿದೆ. ಅಲ್ಲದೆ ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷದ ಆಚರಣೆಗೆ ಅನುಮತಿ ಇಲ್ಲ ಎಂದು ಬೆಂಗಳೂರು ಪೊಲೀಸರು ಶನಿವಾರ ತಿಳಿಸಿದ್ದರು.

ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಶನಿವಾರ ಮಾತನಾಡಿ, ಹೊಸ ವರ್ಷವನ್ನು ಆಚರಿಸಲು ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳನ್ನು ಮಾಡುವಂತಿಲ್ಲ. ಮುಂಚಿತವಾಗಿ ಬುಕ್ಕಿಂಗ್ ಹೊಂದಿರುವ ಜನರಿಗೆ ಪಬ್‌ಗಳು, ಹೋಟೆಲ್ ಮತ್ತು ಕ್ಲಬ್‌ಗಳಿಗೆ ಭೇಟಿ ನೀಡಲು ಅನುಮತಿ ಇದೆ. ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಸಾರ್ವಜನಿಕ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ ಎಂದು ಹೇಳಿದ್ದರು. ಇದರ ನಡುವೆ ಇಂದು ಸಿಎಂ ಸಭೆಯಲ್ಲಿ ನಡೆದ ಚರ್ಚೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹೊಸವರ್ಷ ಕಾರ್ಯಕ್ರಮಗಳಿಗೆ ನಿಷೇಧ ಹೇರಿ ತೀರ್ಮಾನ ಕೈಗೊಳ್ಳಲಾಗಿದೆ.

ಇದನ್ನೂ ಓದಿ: Night Curfew In Karnataka: ಕರ್ನಾಟಕದಲ್ಲಿ ಡಿ.28ರಿಂದ 10 ದಿನ ನೈಟ್ ಕರ್ಫ್ಯೂ ಜಾರಿ! ಸಭೆ ಸಮಾರಂಭಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್