ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ; ಈ ಬಾರಿ ಎಂಜಿ ರೋಡ್, ಬ್ರಿಗೇಡ್ ರೋಡ್​ನಲ್ಲಿ ಹೇಗಿರಲಿದೆ ಸೆಲೆಬ್ರೆಷನ್

| Updated By: ಆಯೇಷಾ ಬಾನು

Updated on: Dec 26, 2021 | 11:23 AM

ಇಂದು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನ್ಯೂ ಇಯರ್ ಸೆಲೆಬ್ರೆಷನ್ಗೆ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಹೊಸವರ್ಷ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ.

ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ; ಈ ಬಾರಿ ಎಂಜಿ ರೋಡ್, ಬ್ರಿಗೇಡ್ ರೋಡ್​ನಲ್ಲಿ ಹೇಗಿರಲಿದೆ ಸೆಲೆಬ್ರೆಷನ್
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ಹೊಸ ವರ್ಷವನ್ನು(New Year) ಸಂತಸದಿಂದ ಬರಮಾಡಿಕೊಳ್ಳಲು ಕ್ಷಣಗಣನೆ ಶುರುವಾಗಿದೆ. ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಕುಣಿದು ಕುಪ್ಪಳಿಸಿ ನ್ಯೂ ಇಯರ್ ಸೆಲೆಬ್ರೆಟ್ ಮಾಡಲು ಕಾಯುತ್ತಿದ್ದ ಜನರಿಗೆ ಸರ್ಕಾರ ಶಾಕ್ ಕೊಟ್ಟಿದೆ. ನಗರದಲ್ಲಿ ಒಮಿಕ್ರಾನ್ ಕಾಟ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ. ಸಭೆಯಲ್ಲಿ ರಾಜ್ಯದಾದ್ಯಂತ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಗೊಳಿಸಿ ಘೋಷಣೆ ಮಾಡಿದ್ದಾರೆ. ಡಿ.28ರಿಂದ 10 ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿ ಇರಲಿದೆ.

ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಹೇಗಿರಲಿದೆ ನ್ಯೂ ಇಯರ್ ಸೆಲೆಬ್ರೆಷನ್
ಇಂದು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನ್ಯೂ ಇಯರ್ ಸೆಲೆಬ್ರೆಷನ್ಗೆ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಹೊಸವರ್ಷ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ. ಹೋಟೆಲ್‌ಗಳಲ್ಲಿ ಶೇಕಡಾ 50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದ್ದು ಹೋಟೆಲ್, ಬಾರ್, ಪಬ್, ಕ್ಲಬ್, ರೆಸ್ಟೋರೆಂಟ್‌ಗಳಲ್ಲಿ ಶೇಕಡಾ 50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಹೀಗಾಗಿ ಈ ಬಾರಿ ಕೂಡ ಹೊಸ ವರ್ಷ ಆಚರಣೆಗೆ ಬ್ರೇಕ್ ಬಿದ್ದಿದೆ.

ಮಹಾಮಾರಿ ಕೊರೊನಾದಿಂದ ಕಳೆದ ವರ್ಷ ಕೂಡ ಹೊಸ ವರ್ಷಾಚರಣೆಗೆ ಬ್ರೇಕ್ ಬಿದ್ದಿತ್ತು. ಈ ಬಾರಿ ಕೂಡ ಸಾರ್ವಜನಿಕ ಸ್ಥಳದಲ್ಲಿ ಹೊಸವರ್ಷ ಕಾರ್ಯಕ್ರಮಗಳಿಗೆ ನಿಷೇಧ ಹೇರಿ ಆದೇಶ ಹೊರಡಿಸಲಾಗಿದೆ. ಅಲ್ಲದೆ ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷದ ಆಚರಣೆಗೆ ಅನುಮತಿ ಇಲ್ಲ ಎಂದು ಬೆಂಗಳೂರು ಪೊಲೀಸರು ಶನಿವಾರ ತಿಳಿಸಿದ್ದರು.

ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಶನಿವಾರ ಮಾತನಾಡಿ, ಹೊಸ ವರ್ಷವನ್ನು ಆಚರಿಸಲು ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳನ್ನು ಮಾಡುವಂತಿಲ್ಲ. ಮುಂಚಿತವಾಗಿ ಬುಕ್ಕಿಂಗ್ ಹೊಂದಿರುವ ಜನರಿಗೆ ಪಬ್‌ಗಳು, ಹೋಟೆಲ್ ಮತ್ತು ಕ್ಲಬ್‌ಗಳಿಗೆ ಭೇಟಿ ನೀಡಲು ಅನುಮತಿ ಇದೆ. ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಸಾರ್ವಜನಿಕ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ ಎಂದು ಹೇಳಿದ್ದರು. ಇದರ ನಡುವೆ ಇಂದು ಸಿಎಂ ಸಭೆಯಲ್ಲಿ ನಡೆದ ಚರ್ಚೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹೊಸವರ್ಷ ಕಾರ್ಯಕ್ರಮಗಳಿಗೆ ನಿಷೇಧ ಹೇರಿ ತೀರ್ಮಾನ ಕೈಗೊಳ್ಳಲಾಗಿದೆ.

ಇದನ್ನೂ ಓದಿ: Night Curfew In Karnataka: ಕರ್ನಾಟಕದಲ್ಲಿ ಡಿ.28ರಿಂದ 10 ದಿನ ನೈಟ್ ಕರ್ಫ್ಯೂ ಜಾರಿ! ಸಭೆ ಸಮಾರಂಭಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ