Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಪೊಲೀಸ್ ಸಬ್​ಇನ್ಸ್​ಪೆಕ್ಟರ್​​ ಅವರ ಪುತ್ರ ವಿಷ ಕುಡಿದು ಆತ್ಮಹತ್ಯೆ

ನಿನ್ನೆ ರಾತ್ರಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಶಾಂತ್ ನನ್ನು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆನೇಕಲ್:  ಪೊಲೀಸ್ ಸಬ್​ಇನ್ಸ್​ಪೆಕ್ಟರ್​​ ಅವರ ಪುತ್ರ ವಿಷ ಕುಡಿದು ಆತ್ಮಹತ್ಯೆ
ಸಾಂಕೇತಿಕ ಚಿತ್ರ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 27, 2022 | 6:21 PM

ಆನೇಕಲ್: ಪೊಲೀಸ್ ಇಲಾಖೆಯ ಅಸಿಸ್ಟಂಟ್​ ಸಬ್​ಇನ್ಸ್​ಪೆಕ್ಟರ್​​ (ಎಎಸ್ಐ) ಒಬ್ಬರ ಮಗ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಚ್ಎಸ್ಆರ್ ಪೊಲೀಸ್ ಠಾಣೆಯ ಎಎಸ್ಐ ನಾಗರಾಜ್ ಅವರ ಮಗ ಪ್ರಶಾಂತ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಪ್ರಶಾಂತ್, ನಗರದ ವಿಜಯ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದ. ಬೆಂಗಳೂರು ಹೊರವಲಯ ಎಲೆಕ್ಟ್ರಾನ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿನ್ನೆ ರಾತ್ರಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಶಾಂತ್ ನನ್ನು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಜಿಎಸ್​​ಟಿ ಕಚೇರಿ ಕಟ್ಟಡದಿಂದ ಜಿಗಿದು ಆಫೀಸ್​ ಬಾಯ್ ಆತ್ಮಹತ್ಯೆ

ಬೆಂಗಳೂರು: ಜಿಎಸ್​ಟಿ ಕಚೇರಿ ಕಟ್ಟಡದಿಂದ ಜಿಗಿದು ಕಚೇರಿ ಸಹಾಯಕ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಜಿಎಸ್​ಟಿ ಕಚೇರಿಯಲ್ಲಿ ನಡೆದಿದೆ. ಕಟ್ಟಡದಿಂದ ಜಿಗಿದು ಆಫೀಸ್​ ಬಾಯ್ ಲಕ್ಷ್ಮಣ(26) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಕಮರ್ಷಿಯಲ್​ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಸುಸ್ತಾಗುತ್ತಿದೆ ಎಂದು ಆಸ್ಪತ್ರೆಗೆ ಬಂದ ಬಾಣಂತಿ ಆಸ್ಪತ್ರೆಯಲ್ಲೆ ಸಾವು

ಚಿಕ್ಕಬಳ್ಳಾಪುರ: ತನಗೆ ಸುಸ್ತಾಗುತ್ತಿದೆ ಎಂದು ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದ ಬಾಣಂತಿ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ನಗರದ ಜೈನ್ ಮಿಷನ್ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಒಂದೂವರೆ ತಿಂಗಳ ಗಂಡು ಮಗು ಬಿಟ್ಟು, ಬಾಣಂತಿ ಕೊನೆಯುಸಿರೆಳೆದಿದ್ದಾರೆ. ಕಳವಾರ ಗ್ರಾಮದ ಗಾಯತ್ರಿ (25) ಮೃತ ಬಾಣಂತಿ. ಮೃತಳ ಸಂಬಂಧಿಗಳಿಂದ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ ಕೇಳಿಬಂದಿದೆ. ಆಸ್ಪತ್ರೆಯ ಬಳಿ ಮೃತಳ ಸಂಬಂಧಿಗಳ ಆಕ್ರಂದನ ಮುಗಿಲುಮುಟ್ಟಿತ್ತು. ಈ ಮಧ್ಯೆ, ಹೃದಯಾಘಾತದಿಂದ ಸಾವು ಸಂಬಂಧಿಸಿದೆ ಎಂದು ಸಮಜಾಯಿಷಿ ನೀಡಿrಉವ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡುವಲ್ಲಿ ಯಾವುದೇ ಲೋಪವಾಗಿಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಆಸ್ಪತ್ರೆಗೆ ದಾಖಲಾಗಿದ್ದ ಗಾಯತ್ರಿ.

ಸುಸ್ತು ಹಾಗೂ ಉಸಿರಾಟ ಸಮಸ್ಯೆ ಇತ್ತು. ಎರಡು ಭಾರಿ ಹೃದಯಾಘಾತವಾಗಿರುವುದಾಗಿ ವೈದ್ಯರ ಸ್ಪಷ್ಟನೆಯಲ್ಲಿಮ ಉಲ್ಲೇಖವಾಗಿದೆ. ಗಾಯತ್ರಿಗೆ ಒಂದೂವರೆ ತಿಂಗಳ ಹಿಂದೆ ಸಿಜೇರಿಯನ್ ಮೂಲಕ ಎರಡನೆಯ ಹೆರಿಗೆಯಾಗಿತ್ತು. ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ನಡೆದಿದೆ.

Published On - 6:09 pm, Mon, 27 June 22

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ